ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ (Uddhav Thackeray) ಆಗಸ್ಟ್ 15 ರಿಂದ ಮುಂಬೈನ ಜೀವನಾಡಿ ಎಂದು ಪರಿಗಣಿಸಲಾಗುವ ಸ್ಥಳೀಯ ರೈಲನ್ನು (Mumbai Local Train) ಪುನರಾರಂಭಿಸುವುದಾಗಿ ಘೋಷಿಸಿದ್ದಾರೆ. ಈ ನಿರ್ಧಾರದಿಂದ ಜನರು ಸಾಕಷ್ಟು ಪರಿಹಾರ ಪಡೆಯುವ ನಿರೀಕ್ಷೆಯಿದೆ.
ಲಸಿಕೆ ಪಡೆದವರಿಗೆ ಮಾತ್ರ ರೈಲಿನಲ್ಲಿ ಪ್ರವೇಶ:
ಮುಂಬೈ ಸ್ಥಳೀಯ ರೈಲು ಸೇವೆಗಳು ಆಗಸ್ಟ್ 15 ರಿಂದ ಆರಂಭವಾಗಲಿವೆ. ಆರಂಭದಲ್ಲಿ, ಕರೋನಾ ಲಸಿಕೆಯ (Corona Vaccine) ಎರಡೂ ಡೋಸ್ ಪಡೆದ ಪ್ರಯಾಣಿಕರಿಗೆ ಮಾತ್ರ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಸಿಎಂ ಹೇಳಿದರು. ರೈಲಿನಲ್ಲಿ ಪ್ರಯಾಣಿಸುವಾಗ, ಪ್ರಯಾಣಿಕರು ಕರೋನಾ ಲಸಿಕೆ ಎರಡೂ ಡೋಸ್‌ಗಳನ್ನು ಪಡೆದಿರುವ ಪ್ರಮಾಣಪತ್ರಗಳನ್ನು ತಮ್ಮ ಬಳಿ ಇಟ್ಟುಕೊಳ್ಳುವುದು ಕಡ್ಡಾಯವಾಗಿರುತ್ತದೆ. ಇದು ಮಾತ್ರವಲ್ಲ, ಲಸಿಕೆ ಪಡೆದು 14 ದಿನಗಳ ನಂತರವೇ, ಪ್ರಯಾಣಿಕರಿಗೆ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗುವುದು. 15 ದಿನಗಳ ಹಿಂದೆ ಕೋವಿಡ್ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡವರಿಗೆ ಈ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಸಿಎಂ ಉದ್ಧವ್ ಠಾಕ್ರೆ (Uddhav Thackeray) ಹೇಳಿದ್ದಾರೆ. ಕರೋನಾ ಲಸಿಕೆ ಪಡೆದು 14 ದಿನಗಳು ಪೂರ್ಣಗೊಂಡಿಲ್ಲದಿದ್ದರೆ ಮುಂಬೈ ಲೋಕಲ್ ಟ್ರೈನ್ ನಲ್ಲಿ ಪ್ರಯಾಣಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು:
ಭಾನುವಾರ ರಾತ್ರಿ 8 ಗಂಟೆಗೆ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಮೂಲಕ ಮಾತನಾಡಿದ ಸಿಎಂ ಉದ್ಧವ್ ಠಾಕ್ರೆ (Uddhav Thackeray), 'ಮುಂಬೈನಲ್ಲಿ 19 ಲಕ್ಷ ಜನರು ಕರೋನಾ ಲಸಿಕೆಯ (Corona Vaccine) ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ಈ ಎಲ್ಲಾ ಜನರು ಆಪ್ ಮೂಲಕ ತಮ್ಮನ್ನು ನೋಂದಾಯಿಸಿಕೊಳ್ಳುವ ಮೂಲಕ ಸ್ಥಳೀಯ ರೈಲಿನಲ್ಲಿ ಪ್ರಯಾಣಿಸಬಹುದು. ಇಡೀ ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಪೂರ್ಣಗೊಳ್ಳುವವರೆಗೆ, ನಾವು ಪ್ರತಿ ಹೆಜ್ಜೆಯನ್ನೂ ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಸೋಮವಾರ ನಡೆಯಲಿರುವ ಕೋವಿಡ್ -19 ಕಾರ್ಯಪಡೆಯ ಸಭೆಯಲ್ಲಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿನ ನಿಯಮಗಳನ್ನು ಸಡಿಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ- Corona Vaccine: ಲಸಿಕೆಯ ಕೊರತೆ ನೀಗಿಸಲು ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ ಈ ಸಲಹೆ
ಇನ್ನೂ ಆರು ಜಿಲ್ಲೆಗಳಲ್ಲಿ ಕರೋನಾ ಹಾವಳಿ:
ಇದೇ ವೇಳೆ ತಾವು ಖಾಸಗಿ ಕಚೇರಿಗಳನ್ನು ತಮ್ಮ ಕೆಲಸದ ಸಮಯವನ್ನು ಕಡಿಮೆ ಮಾಡುವಂತೆ ವಿನಂತಿಸಿರುವುದಾಗಿ ತಿಳಿದ ಮುಖ್ಯಮಂತ್ರಿಗಳು, ನಾವು ಕರೋನಾ ಮೂರನೇ ತರಂಗಕ್ಕೆ (Corona Third Wave) ಮುಂಚಿತವಾಗಿ ತಯಾರಿ ಮಾಡಿಕೊಳ್ಳಬೇಕು. ನಾವು ಕೆಲವು ಸ್ಥಳಗಳಲ್ಲಿ ನಿಯಮಗಳನ್ನು ಸಡಿಲಿಸಲು ನಿರ್ಧರಿಸಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾದರೆ, ನಂತರ ಲಾಕ್‌ಡೌನ್ ವಿಧಿಸಲಾಗುತ್ತದೆ ಎಂದು ತಿಳಿಸಿದರು. ರಾಜ್ಯದ ಆರು ಜಿಲ್ಲೆಗಳಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಿರುವುದು ಕಳವಳಕಾರಿ ವಿಷಯವಾಗಿದೆ. ಪುಣೆ, ಅಹ್ಮದ್ ನಗರ, ಸೊಲ್ಲಾಪುರ, ಕೊಲ್ಹಾಪುರ, ಸಾಂಗ್ಲಿ, ಸತಾರ, ಸಿಂಧುದುರ್ಗ, ರತ್ನಗಿರಿ ಮತ್ತು ಬೀಡ್‌ನಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಕರೋನಾ ಪ್ರಕರಣಗಳು ವರದಿಯಾಗುತ್ತಿವೆ ಎಂದವರು ಮಾಹಿತಿ ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ