Flyover Collapses In Mumbai: ಬಾಂದ್ರಾ-ಕುರ್ಲಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ, ಅಪಘಾತದಲ್ಲಿ 14 ಕಾರ್ಮಿಕರಿಗೆ ಗಾಯ
Portion of Under-Construction Flyover Collapses in Mumbai: ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್‌ನ ಒಂದು ಭಾಗ ಕುಸಿದಿದ್ದು, 14 ಜನರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈ: Portion of Under-Construction Flyover Collapses in Mumbai: ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಶುಕ್ರವಾರ ಮುಂಜಾನೆ ಭಾರೀ ಅಪಘಾತ ಸಂಭವಿಸಿದ್ದು, ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್‌ನ ಒಂದು ಭಾಗ ಕುಸಿದಿದೆ (Portion of Under-Construction Flyover Collapses in Mumbai) . ಅಪಘಾತದಲ್ಲಿ 14 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಮೀಪದ ಸಾಂತಾ ಕ್ರೂಜ್ ನ ವಿಎನ್ ದೇಸಾಯಿ ಆಸ್ಪತ್ರೆಗೆ (VN Desai Hospital) ದಾಖಲಿಸಲಾಗಿದೆ ಎಂದು ವರದಿಯಾಗಿದೆ.
Bridge collapses in Bandra-Kurla) ಕಾಂಪ್ಲೆಕ್ಸ್ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗ ಕುಸಿದಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿವೆ. ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ಅವರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ:
ಈ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಪಿ (ವಲಯ 8) ಮಂಜುನಾಥ ಸಿಂಗೆ, "ಬಿಕೆಸಿ ಮುಖ್ಯ ರಸ್ತೆ ಮತ್ತು ಸಾಂತಾಕ್ರೂಜ್-ಚೆಂಬೂರ್ ಲಿಂಕ್ ರಸ್ತೆಯನ್ನು ಸಂಪರ್ಕಿಸುವ ನಿರ್ಮಾಣ ಹಂತದಲ್ಲಿರುವ ಫ್ಲೈಓವರ್‌ನ ಒಂದು ಭಾಗ (Under-Construction Flyover Collapses in Mumbai) ಮುಂಜಾನೆ 4:30 ರ ಸುಮಾರಿಗೆ ಕುಸಿದಿದೆ. 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲಿ ಯಾವುದೇ ಪ್ರಾಣಾಪಾಯವಿಲ್ಲ ಮತ್ತು ಯಾವುದೇ ವ್ಯಕ್ತಿ ಕಾಣೆಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
Post office Jan Dhan Account: ಅಂಚೆ ಕಚೇರಿಯಲ್ಲಿ ಜನ್ ಧನ್ ಖಾತೆ ತೆರೆಯಿರಿ, 2 ಲಕ್ಷ ಲಾಭ ಪಡೆಯಿರಿ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.