Nupur Sharma : ನೂಪುರ್ ಶರ್ಮಾಗೆ ಸಮನ್ಸ್ ನೀಡಿದ ಮುಂಬೈ ಪೊಲೀಸರು!

ಇದೀಗ ಮುಂಬೈ ಪೊಲೀಸರು ನೂಪುರ್ ಶರ್ಮಾಗೆ ಸಮನ್ಸ್ ನೀಡಿದ್ದಾರೆ. ಜೂನ್ 22 ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ. 

Written by - Channabasava A Kashinakunti | Last Updated : Jun 7, 2022, 02:26 PM IST
  • ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ
  • ಸಮಸ್ಯೆಗಳ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ ನೂಪುರ್ ಶರ್ಮಾ
  • ಇದೀಗ ಮುಂಬೈ ಪೊಲೀಸರು ನೂಪುರ್ ಶರ್ಮಾಗೆ ಸಮನ್ಸ್
Nupur Sharma : ನೂಪುರ್ ಶರ್ಮಾಗೆ ಸಮನ್ಸ್ ನೀಡಿದ ಮುಂಬೈ ಪೊಲೀಸರು! title=

Mumbai Police summons Nupur Sharma : ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಸಮಸ್ಯೆಗಳ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ. ಇದೀಗ ಮುಂಬೈ ಪೊಲೀಸರು ನೂಪುರ್ ಶರ್ಮಾಗೆ ಸಮನ್ಸ್ ನೀಡಿದ್ದಾರೆ. ಜೂನ್ 22 ರಂದು ಮುಂಬೈ ಪೊಲೀಸರ ಮುಂದೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ. 

ಇದಕ್ಕೂ ಮುನ್ನ ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, 'ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ವಾಗ್ದಾಳಿ ನಡೆಸಿದ ರೀತಿಗೆ ಸಂಬಂಧಿಸಿದಂತೆ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದುಈ ಎಂದು ತಿಳಿಸಿದ್ದರು.

ಇದನ್ನೂ ಓದಿ : Nupur Sharma : ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!

ಇತ್ತೀಚಿಗೆ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದಿಂದ ಅಮಾನತುಗೊಳಿಸಿದೆ. ಟಿವಿ ಚರ್ಚೆಯೊಂದರಲ್ಲಿ ನೂಪುರ್ ಶರ್ಮಾ ಅವರು ಮೊಹಮ್ಮದ್ ಪೈಗಂಬರ್ ಗೆ ಮಾಡಿದ ಅವಮಾನಕರ ಹೇಳಿಕೆ ಗೆ ಮುಸ್ಲಿಂ ಸಮುದಾಯಗಳಿಂದ ತುಂಬಾ ವಿರೋಧ ವ್ಯಕ್ತವಾಗಿದೆ.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News