Mumbai Rains: ಮಳೆ ಹೊಡೆತಕ್ಕೆ ನೀರಿನಲ್ಲಿ ಕೊಚ್ಚಿ ಹೋದ ಕಾರುಗಳು..!

ವರುಣನ ಆರ್ಭಟಕ್ಕೆ ವಾಣಿಜ್ಯ ನಗರಿ ಮುಂಬೈ ಅಕ್ಷರಶಹಃ ತತ್ತರಿಸಿ ಹೋಗಿದೆ.

Written by - Zee Kannada News Desk | Last Updated : Jul 18, 2021, 05:36 PM IST
  • ಭಾರೀ ಮಳೆಗೆ ಅಂಧೇರಿ, ಬೋರಿವಾಲಿ, ಕುರ್ಲಾ, ವಿಕ್ರೋಲಿ ಸೇರಿ ಅನೇಕ ಪ್ರದೇಶಗಳು ಜಲಾವೃತ
  • ಮುಂಬೈನಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ವಾಹನ ಸಂಚಾರಕ್ಕೆ ಅಡೆತಡೆಯುಂಟಾಗಿದೆ
  • ಮನೆಗೋಡೆ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 25ಕ್ಕೇ ಏರಿಕೆಯಾಗಿದೆ
Mumbai Rains: ಮಳೆ ಹೊಡೆತಕ್ಕೆ ನೀರಿನಲ್ಲಿ ಕೊಚ್ಚಿ ಹೋದ ಕಾರುಗಳು..! title=
ಮಳೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು

ಮಹಾರಾಷ್ಟ್ರ: ವರುಣನ ಆರ್ಭಟಕ್ಕೆ ವಾಣಿಜ್ಯ ನಗರಿ ಮುಂಬೈ ಅಕ್ಷರಶಹಃ ತತ್ತರಿಸಿ ಹೋಗಿದೆ. ಭಾರೀ ಮಳೆ ಹೊಡೆತಕ್ಕೆ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರ ತಡರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಂಧೇರಿ, ಬೋರಿವಾಲಿ, ಕುರ್ಲಾ, ಮಲದ್, ವಿಕ್ರೋಲಿ ಸೇರಿದಂತೆ ಅನೇಕ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ಜನರು ಪರದಾಡುವಂತಾಗಿದೆ. ನಿರಂತರವಾಗಿ ಸುರಿದ ಮಳೆಯ ಹೊಡೆತಕ್ಕೆ ಅನೇಕ ಮನೆಗಳು ಕುಸಿತವಾಗಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿದೆ.

ಮುಂಬೈ(Mumbai)ನ ಹಲವು ಪ್ರದೇಶಗಳಲ್ಲಿ ನಡುಮಟ್ಟಕ್ಕೆ ನೀರು ನಿಂತಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಹಳಿಗಳ ಮೇಲೆ ನೀರು ನಿಂತಿರುವುದರಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ರಸ್ತೆ ತುಂಬೆಲ್ಲಾ ನೀರು ನಿಂತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿಧಾನಸಭೆ ಸಚಿವಾಲಯದಲ್ಲಿ ಜೀನ್ಸ್ ಮತ್ತು ಟೀ ಶರ್ಟ್ ಧರಿಸುವುದಕ್ಕೆ ನಿಷೇಧ

ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮುಂಬೈನ ಬಡಾವಣೆಗಳು ನದಿಗಳಾಗಿ ಮಾರ್ಪಾಡಾಗಿವೆ. ಬೋರಿವಾಲಿ ಪೂರ್ವ ಪ್ರದೇಶದಲ್ಲಿ ಪ್ರವಾಹದಂತೆ ನೀರು ನುಗ್ಗಿರುವುದರಿಂದ ಅಲ್ಲಿನ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ನೀರಿನ ಸೆಳೆತಕ್ಕೆ ಕಾರುಗಳು ಕೊಚ್ಚಿಕೊಂಡು ಹೋಗಿರುವ ದೃಶ್ಯಗಳು ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗುತ್ತಿವೆ.

ಮಳೆಯ ಹೊಡೆತಕ್ಕೆ ವಾಣಿಜ್ಯ ನಗರಿ(Mumbai Rains) ಜನರು ನಲುಗಿ ಹೋಗಿದ್ದು, ಪ್ರವಾಹದ ಭೀತಿಯಲ್ಲಿಯೇ ದಿನಕಳೆಯುವಂತಾಗಿದೆ. ಹನುಮಾನ್ ನಗರ, ಕಂಡಿವಲಿ ಪೂರ್ವ ಪ್ರದೇಶ ಸೇರಿದಂತೆ ಅನೇಕ ಸ್ಥಳಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ಜನರು ತಲೆಮೇಲೆ ಕೈಹೊತ್ತು ಕುಳಿತುಕೊಂಡಿದ್ದಾರೆ. ಮನೆ ಗೋಡೆ ಕುಸಿತ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೇ ಏರಿಕೆಯಾಗಿದೆ. ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Big Tragedy: ನಕಲಿ ಮದ್ಯ ಸೇವಿಸಿ 16 ಮಂದಿ ಸಾವು, ಪೊಲೀಸರಿಂದ ತನಿಖೆ

ಪ್ರವಾಹದಂತಹ ಪರಿಸ್ಥಿತಿಯಲ್ಲಿಯೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(IMD) ಎಚ್ಚರಿಕೆ ನೀಡಿದೆ. ಬಿಎಂಸಿ ಕೂಡ ಸಂಕಷ್ಟಕ್ಕೆ ಸಿಲುಕಿರುವವ ಜನರ ರಕ್ಷಣಾ ಕಾರ್ಯಾಚರಣೆಗೆ ಕ್ರಮ ಕೈಕೊಂಡಿದೆ. ಈ ಮಧ್ಯೆ ಮಳೆ ಕಾರಣ ಕೆಲ ವಿಮಾನಗಳ ಹಾರಾಟವನ್ನು ಬಂದ್ ಮಾಡಲಾಗಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
 

Trending News