ನವದೆಹಲಿ: ಭಾರತದಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಹಕ್ಕು ಮುಸ್ಲಿಮರಿಗೂ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 2024ರಲ್ಲಿ ''ಇಂಡಿಯಾ ಮೈತ್ರಿಕೂಟ'' ಅಧಿಕಾರಕ್ಕೇರಿದರೆ CAA ರದ್ದುಗೊಳಿಸುವುದಾಗಿ ವಿಪಕ್ಷಗಳು ಹೇಳಿರುವುದಕ್ಕೆ ತಿರುಗೇಟು ನೀಡಿರುವ ಅವರು, ''ಇಂಡಿಯಾ ಮೈತ್ರಿಕೂಟ'' ಅಧಿಕಾರಕ್ಕೆ ಬರುವುದಿಲ್ಲ. ಇದು ಅವರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಾರಿಗೊಳಿಸುತ್ತಿರುವ CAAಯನ್ನು ರದ್ದುಪಡಿಸುವುದು ಅಸಾಧ್ಯ. ಇದು ಸಂಪೂರ್ಣ ಸಾಂವಿಧಾನಿಕವಾಗಿದೆ. ಸುಪ್ರೀಂಕೋರ್ಟ್ ಸಹ ಈ ಕಾನೂನು ಜಾರಿಗೆ ತಡೆ ನೀಡಿಲ್ಲʼವೆಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ(Citizenship Amendment Act - CAA) ಜಾರಿ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ʼಪೌರತ್ವ ತಿದ್ದುಪಡಿ ಕಾಯ್ದೆಯನ್ನು ಯಾವುದೇ ದಾಖಲೆಗಳಿಲ್ಲದೆ ಬಂದಿರುವ ಜನರಿಗಾಗಿ ಮಾಡಲಾಗಿದೆ. ಯಾರಿಗೂ ಬಾಗಿಲುಗಳನ್ನು ಮುಚ್ಚುವುದಿಲ್ಲʼಅಂತಾ ಹೇಳಿದ್ದಾರೆ.
ಇದನ್ನೂ ಓದಿ: 'ಸಿಎಎ ಕಾನೂನನ್ನು ಎಂದಿಗೂ ಹಿಂಪಡೆಯುವುದಿಲ್ಲ': ಅಮಿತ್ ಶಾ
ಭಾರತದಲ್ಲಿರುವ ಅಲ್ಪಸಂಖ್ಯಾತರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಯಾರೊಬ್ಬರ ಪೌರತ್ವವನ್ನೂ ಈ ಕಾಯ್ದೆ ಜಾರಿಯಿಂದ ಕಸಿದುಕೊಳ್ಳಲಾಗುವುದಿಲ್ಲ. CAAಯನ್ನು ಯಾವುದೇ ಕಾರಣಕ್ಕೂ ನಾವು ಹಿಂಪಡೆಯುವುದಿಲ್ಲವೆಂದು ಹೇಳಿದ್ದಾರೆ.
ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳಬೇಕಿರುವುದು ನಮ್ಮೆಲ್ಲರ ಸಾರ್ವಭೌಮ ಹಕ್ಕಾಗಿದೆ. ಇದರಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲವೆಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ
CAA ಮೂಲಕ ಬಿಜೆಪಿ ಹೊಸ ವೋಟ್‌ಬ್ಯಾಂಕ್ ಸೃಷ್ಟಿಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲ. CAA ಅನುಷ್ಠಾನ ಮಾಡಲು ಯಾವುದೇ ರಾಜ್ಯ ನಿರಾಕರಿಸಲು ಸಾಧ್ಯವಿಲ್ಲ. ಏಕೆಂದರೆ ಪೌರತ್ವ ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ ಅಂತಾ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.