ನಿಗೂಢ ಸಾವು: ಮನೆಯೊಂದರಲ್ಲಿ ಪತ್ತೆಯಾಯ್ತು ಒಂದೇ ಕುಟುಂಬದ ಆರು ಜನರ ಶವಗಳು!
ಮಾಹಿತಿ ಪ್ರಕಾರ ಒಂದು ಮನೆಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿದ್ದು, ಇನ್ನೊಂದು ಮನೆಯಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ ಎಂದೂ ಸಹ ಹೇಳಲಾಗುತ್ತಿದೆ.
Jammu Kashmir News: ಜಮ್ಮು-ಕಾಶ್ಮೀರದಲ್ಲಿ ಒಂದರ ಹಿಂದೊಂದರಂತೆ ಅಹಿತಕರ ಘಟನೆಗಳು ನಡೆಯುತ್ತಿವೆ. ಜಮ್ಮುವಿನ ಸಿದ್ರಾದಲ್ಲಿರುವ ವಸತಿ ಗೃಹದಲ್ಲಿ 6 ಜನರ ಮೃತದೇಹಗಳು ಪತ್ತೆಯಾಗಿವೆ. ನಿಗೂಢವಾಗಿ ಸಾವನ್ನಪ್ಪಿದವರಲ್ಲಿ ಇಬ್ಬರು ಪುರುಷರು ಮತ್ತು 4 ಮಹಿಳೆಯರು ಸೇರಿದ್ದಾರೆ. ಸದ್ಯ ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮತ್ತು ಗುರುತು ಪತ್ತೆಗಾಗಿ ಕಳುಹಿಸಲಾಗಿದೆ. ಅವರ ದೇಹದ ಮೇಲೆ ಯಾವುದೇ ಗುಂಡುಗಳ ಗುರುತು ಇಲ್ಲ ಎಂದು ಮೂಲಗಳು ತಿಳಿಸಿವೆ. ಸಾವಿಗೆ ನಿಜವಾದ ಕಾರಣ ಏನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಭಾರತ-ಪಾಕ್ ಪರಮಾಣು ಯುದ್ಧ ನಡೆದರೆ 2 ಬಿಲಿಯನ್ ಜನರ ಪ್ರಾಣ ಹೋಗುತ್ತೆ! ವರದಿಯಲ್ಲಿ ಮಾಹಿತಿ ಬಹಿರಂಗ
ಮಾಹಿತಿ ಪ್ರಕಾರ ಒಂದು ಮನೆಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿದ್ದು, ಇನ್ನೊಂದು ಮನೆಯಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ ಎಂದೂ ಸಹ ಹೇಳಲಾಗುತ್ತಿದೆ.
ಮೃತರನ್ನು ಸಕೀನಾ ಬೇಗಂ, ಅವರ ಇಬ್ಬರು ಪುತ್ರಿಯರಾದ ನಸೀಮಾ ಅಖ್ತರ್ ಮತ್ತು ರುಬಿನಾ ಬಾನೋ, ಮಗ ಜಾಫರ್ ಸಲೀಂ ಮತ್ತು ಇಬ್ಬರು ಸಂಬಂಧಿಕರಾದ ನೂರ್-ಉಲ್-ಹಬೀಬ್ ಮತ್ತು ಸಜಾದ್ ಅಹ್ಮದ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಸಿದ್ರಾದಲ್ಲಿ ಕುಟುಂಬಸ್ಥರ ಮನೆಗಳಿಂದ ವಶಪಡಿಸಿಕೊಳ್ಳಲಾಗಿದ್ದು, ಬಳಿಕ ಮೃತದೇಹಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: ಎರಡನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ
ಮಂಗಳವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಇಬ್ಬರು ಕಾಶ್ಮೀರಿ ಪಂಡಿತರ ಮೇಲೆ ಭಯೋತ್ಪಾದಕರು ಗುಂಡಿನ ದಾಲಿ ನಡೆಸಿದ್ದರು. ಪರಿಣಾಮ ಓರ್ವ ಸಾವನ್ನಪ್ಪಿದ್ದರೆ, ಮತ್ತೋರ್ವ ಗಾಯಗೊಂಡಿದ್ದಾರೆ. ಮೃತರನ್ನು ಸುನಿಲ್ ಕುಮಾರ್ ಭಟ್ ಎಂದು ಗುರುತಿಸಲಾಗಿದ್ದು, ಅವರ ಸಹೋದರ ಪಿಂಟು ಗಾಯಗೊಂಡಿದ್ದಾರೆ. ಈ ಘಟನೆಯ ನಂತರ ಈ ಪ್ರದೇಶದಲ್ಲಿ ಭದ್ರತಾ ಪಡೆಗಳ ನಿಯೋಜನೆಯನ್ನು ಹೆಚ್ಚಿಸಲಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.