ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ಸುವರ್ಣಾವಕಾಶ. ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ರಿಸ್ಕ್​ ಆಫೀಸರ್, ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


COMMERCIAL BREAK
SCROLL TO CONTINUE READING

ಹುದ್ದೆಯ ಮಾಹಿತಿ: ರಿಸ್ಕ್​ ಆಫೀಸರ್ -1 ಮತ್ತು ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್ -1 ಹುದ್ದೆಗಳಿಗೆ ಖಾಲಿ ಇವೆ.


ಇದನ್ನೂ ಓದಿ: Daily GK Quiz: ಅಮೆರಿಕ ದೇಶದ ಮೊದಲ ಅಧ್ಯಕ್ಷರು ಯಾರು..?


ವಿದ್ಯಾರ್ಹತೆ: ರಿಸ್ಕ್​ ಆಫೀಸರ್‌ಗೆ ಪದವಿ, ಸಿಎ, ಸಿಎಂಎ, ಸಿಎಫ್​ಎ ಮಾಡಿರಬೇಕು ಮತ್ತು ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್‌ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ ಪೂರ್ಣಗೊಳಿಸಿರಬೇಕು.


ವಯೋಮಿತಿ: ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.


ಉದ್ಯೋಗದ ಸ್ಥಳ: ಬೆಂಗಳೂರು


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಇದನ್ನೂ ಓದಿ: Online Shopping: ಆನ್‌ಲೈನ್ ಶಾಪಿಂಗ್ ಕ್ರೇಜ್ ಮಹಿಳೆಯರಿಗಿಂತ ಪುರುಷರಿಗೇ ಹೆಚ್ಚು! ಇಲ್ಲಿದೆ ವರದಿ


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಈ ಲಿಂಕ್‌ https://nabfins.org/Careers/form.php?id=565 ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.