Maharashtra Latest News: ಮಹಾರಾಷ್ಟ್ರ ಕಾಂಗ್ರೆಸ್ (Maharashtra Congres) ಅಧ್ಯಕ್ಷರ ಆಕ್ಷೇಪಾರ್ಹ ಹೇಳಿಕೆಯೊಂದು ಅಲ್ಲಿನ ರಾಜಕೀಯ ತಾಪಮಾನ ಹೆಚ್ಚಳಕ್ಕೆ ಕಾರಣವಾಗಿದೆ, ಆದರೆ, ನಂತರ ಅವರು ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಿದ್ದಾರೆ ಮತ್ತು ಪ್ರಧಾನಿ ಮೋದಿ (PM Modi) ಬಗ್ಗೆ ಯಾವುದೇ ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ತಾವು ಸ್ಥಳೀಯ ಗೂಂಡಾ ಮೋದಿ ಬಗ್ಗೆ ಮಾತನಾಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಸ್ಪಷ್ಟನೆ ನೀಡಿರುವ ನಾನಾ ಪಟೋಲೆ (Nana Patole), 'ನನ್ನ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದ್ದು, ಅದರಲ್ಲಿ ನಾನು ಮೋದಿ ಎಂಬ ವ್ಯಕ್ತಿಯನ್ನು ಹೊಡೆಯುವ ಬಗ್ಗೆ ಮತ್ತು ಅವಾಚ್ಯ ಶಬ್ದಗಳನ್ನು ನಿಂದಿಸುತ್ತಿರುವುದರ ಬಗ್ಗೆ ಉಲ್ಲೇಖಿಸಲಾಗಿದೆ. ಆದರೆ, ನಾನು ಆ ಪ್ರದೇಶದ ಸ್ಥಳೀಯ ಗೂಂಡಾ ಆಗಿರುವ ಮೋದಿಯ ಬಗ್ಗೆ ಮಾತನಾಡುತ್ತಿದ್ದೇನೆ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಪ್ರಧಾನಿ ಮೋದಿ ಬಗ್ಗೆ ಯಾವುದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ನೀಡಿಲ್ಲ' ಎಂದಿದ್ದಾರೆ. 


ಇದನ್ನೂ ಓದಿ-ಮೊಟ್ಟೆ ಖರೀದಿಯಲ್ಲಿ ಕಮಿಷನ್ ನುಂಗಿದವರಿಂದ ಮಕ್ಕಳ ಅನ್ನದ ತಟ್ಟೆಗೆ ಕೈ: ಸಿದ್ದರಾಮಯ್ಯ


ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಅವರ ಹೇಳಿಕೆಯಲ್ಲಿ, 'ನಾನು ಮೋದಿಯನ್ನು ಹೊಡೆಯಬಲ್ಲೆ, ನಾನು ಮೋದಿ ವಿರುದ್ಧ ಅವಾಚ್ಯ ಶಬ್ದಗಳನ್ನು ಕೂಡ ಬಳಸಬಲ್ಲೆ' ಎಂದಿದ್ದಾರೆ. ಮಹಾರಾಷ್ಟ್ರದ ಭಂಡಾರಾದಲ್ಲಿ ಜಿಲ್ಲಾ ಪರಿಷತ್ ಮತ್ತು ಪಂಚಾಯತ್ ಸಮಿತಿ ಪರ ಪ್ರಚಾರ ನಡೆಸಿದ ಬಳಿಕ ಕಾರ್ಯಕರ್ತರ ಸಮ್ಮುಖದಲ್ಲಿ ಪಟೋಲೆ ಈ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ-Grama One Yojana : ಜ. 26ರಂದು ಮಹತ್ವಕಾಂಕ್ಷೆ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ


ಮಹಾರಾಷ್ಟ್ರ ಕಾಂಗ್ರೆಸ್ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಅವರು ಗೂಂಡಾ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಹೇಳಿದ್ದಾರೆ. ಅವರು ಕೇವಲ ಓರ್ವ ಲೋಕಲ್ ರೌಡಿ ಬಗ್ಗೆಯೇ ಮಾತನಾಡಿದ್ದಾರೆ, ಆದರೆ ಅವರು ಪ್ರಧಾನಿ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ತಪ್ಪಾಗಿ ಭಾವಿಸಿದೆ. ಅವರು ಪ್ರಧಾನಿ ಮೋದಿ ಕುರಿತು ಈ ಹೇಳಿಕೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ-ಸಿಎಂ ಅಧ್ಯಕ್ಷತೆಯಲ್ಲಿ ಕೋವಿಡ್ ಪರಿಶೀಲನಾ ಸಭೆ : ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಂಡ ತೀರ್ಮಾನಗಳೇನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.