Lok Sabha Election 2024: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು 232 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ನಾಳೆ ಅಂದರೆ ಭಾನುವಾರ(ಜೂನ್ ೯) ನರೇಂದ್ರ ಮೋದಿಯವರು ೩ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಶುಕ್ರವಾರ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ನಾಳೆ ಸಂಜೆ 7.15ಕ್ಕೆ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಬಿಗಿ ಭದ್ರತೆ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ʼಯಾವುದೇ ಸರ್ಕಾರವು 15 ದಿನಗಳಲ್ಲಿ ಪತನವಾಗಬಹುದು' ಅಂತಾ ಹೇಳಿರುವ ಅವರ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂಬೈ ಮೂಲದ ಶಿಕ್ಷಣ ಸಂಸ್ಥೆಯಿಂದ ದೋಖಾ!
ತೃಣಮೂಲ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ, ʼಯಾರು (BJP) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲವೆಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಅಂತಾ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ' ಅಂತಾ ಹೇಳಿದ್ದಾರೆ.
#WATCH | West Bengal Chief Minister Mamata Banerjee says, "I am sorry, but I cannot wish well to an unconstitutional, illegal party for forming the government. My best wishes will be for the country. I will tell all the MPs to strengthen their party...We will not break your party… pic.twitter.com/M90jtXZ6AQ
— ANI (@ANI) June 8, 2024
ಕೇಂದ್ರದಲ್ಲಿ ಇಂಡಿಯಾ ಒಕ್ಕೂಟವೇ ಸರ್ಕಾರ ರಚಿಸಲಿದೆ ಅಂತಾ ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼಒಂದಲ್ಲ ಒಂದು ದಿನ ಇಂಡಿಯಾ ಒಕ್ಕೂಟವೇ ಕೇಂದ್ರದಲ್ಲಿ ಸರ್ಕಾರವನ್ನು ರಚಿಸುತ್ತದೆ. ಕೆಲವು ದಿನಗಳವರೆಗೆ ಅವರು ಅಧಿಕಾರದಲ್ಲಿರಲಿ. ಆದರೆ ಒಂದು ನೆನಪಿರಲಿ, ಒಂದೇ ದಿನದಲ್ಲಿ ಬೇಕಾದರೂ ಸರ್ಕಾರ ಬೀಳಬಹುದು. ಏನು ಬೇಕಾದರೂ ಆಗಬಹುದು. ಯಾರಿಗೆ ಗೊತ್ತು, 15 ದಿನಗಳಲ್ಲಿ ಬೇಕಾದರೂ ಸರ್ಕಾರ ಪತನವಾಗಬಹುದು' ಅಂತಾ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮೋದಿಯವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಟಿಎಂಸಿ ನಿರ್ಧರಿಸಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ʼಕಾನೂನುಬಾಹಿರ ಹಾಗೂ ಪ್ರಜಾಸತ್ತಾತ್ಮಕವಲ್ಲದ ಮಾರ್ಗದ ಮೂಲಕ NDA ಸರ್ಕಾರ ರಚಿಸುತ್ತಿದೆ. ಹೀಗಾಗಿ ಈ ಪ್ರಮಾಣವಚನ ಕಾರ್ಯಕ್ರಮದಲ್ಲಿ ಟಿಎಂಸಿ ಭಾಗವಹಿಸುವುದಿಲ್ಲʼವೆಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕದ ಕಾಂಗ್ರೆಸ್ ನಾಯಕರ ವಿರುದ್ಧ ಗರಂ ಆದ ರಾಹುಲ್ ಗಾಂಧಿ!
ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಗಣ್ಯರು
ಮೋದಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್‌ನ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಗಣ್ಯವ್ಯಕ್ತಿಗಳಾಗಿ ಉಪಸ್ಥಿತರಿರಲಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.