ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಸಂಪ್ರದಾಯದಂತೆ, ಮೋದಿ ಅವರು ತಮ್ಮ ಮತ್ತು ಸಚಿವ ಸಂಪುಟದ ರಾಜೀನಾಮೆಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದರು. ಪ್ರಧಾನಿ ಮೋದಿ ಮತ್ತು ಸಚಿವ ಸಂಪುಟದ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.  


COMMERCIAL BREAK
SCROLL TO CONTINUE READING

ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಪ್ರಕಟವಾದ ನಂತರ, ಹಾಲಿ ಪ್ರಧಾನಿ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸುತ್ತಾರೆ. ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವವರೆಗೂ ಹಳೆಯ ಸರ್ಕಾರವೇ ಕೆಲಸ ಮಾಡುತ್ತದೆ. 2024 ರ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 240 ಸ್ಥಾನಗಳೊಂದಿಗೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. NDA ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. 


ಇದನ್ನೂ ಓದಿ: Lok Sabha Election Result: ಮ್ಯಾಜಿಕ್ ನಂಬರ್ 272, BJPಗೆ ಸಿಗದ ಬಹುಮತ, ಕಿಂಗ್ ಮೇಕರ್‌ ಯಾರು? 


ಬಿಜೆಪಿ ಸಂಸದೀಯ ಪಕ್ಷದ ಸಭೆ : 


ಜೂನ್ 7 ರಂದು ಬಿಜೆಪಿ ಸಂಸದೀಯ ಪಕ್ಷದ ಸಭೆ ನಡೆಯಲಿದ್ದು, ಅದರಲ್ಲಿ ಪ್ರಧಾನಿ ಮೋದಿ ಅವರನ್ನು ನಾಯಕರಾಗಿ ಆಯ್ಕೆ ಮಾಡಲಾಗುತ್ತದೆ. ಮಧ್ಯಾಹ್ನ 2 ಗಂಟೆಗೆ ಸಂಸತ್ ಭವನದಲ್ಲಿ ಈ ಸಭೆ ನಡೆಯಲಿದೆ. ಬುಧವಾರ ದೆಹಲಿಯಲ್ಲಿ ಎನ್‌ಡಿಎ ಘಟಕಗಳ ಸಭೆ ನಡೆಯಲಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತೆ ಎನ್‌ಡಿಎ ನಾಯಕರಾಗಿ ಆಯ್ಕೆಯಾಗಬಹುದು.


ನರೇಂದ್ರ ಮೋದಿ ಪ್ರಮಾಣ ವಚನ : 


ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ದೆಹಲಿಯಲ್ಲಿ ರಾಜಕೀಯ ಚದುರಂಗದಾಟ ಹೆಚ್ಚಾಗಿದೆ. NDA ಮತ್ತು ಹೊರತಾಗಿ INDIA ಎರಡೂ ಪ್ರಮುಖ ಮೈತ್ರಿಗಳು ತಮ್ಮ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ತಂತ್ರಗಳನ್ನು ರೂಪಿಸುತ್ತಿವೆ. ಈ ವಾರ ಮೋದಿ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಐಎಎನ್‌ಎಸ್ ತಿಳಿಸಿದೆ. ಎನ್‌ಡಿಎ ನಾಯಕರಾಗಿ ನರೇಂದ್ರ ಮೋದಿ ಅವರು ಜೂನ್ 8 ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಪ್ರಮಾಣ ವಚನ ಸ್ವೀಕಾರ ಸಮಾರಂಭ: 


ಜೂನ್ 8 ರಂದು ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಬಹುದು. ಹೊಸ ಕೇಂದ್ರ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರದ ಪೂರ್ವಭಾವಿಯಾಗಿ ರಾಷ್ಟ್ರಪತಿ ಭವನದಲ್ಲಿ ಜೂನ್ 5 ರಿಂದ 9 ರವರೆಗೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾತ್ರಿ ಊಟಕ್ಕೆ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ಹಾಲಿ ಸಚಿವರನ್ನು ಆಹ್ವಾನಿಸಿದ್ದಾರೆ.


ಬುಧವಾರ ಪ್ರಧಾನಿ ನಿವಾಸದಲ್ಲಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಇದರಲ್ಲಿ ಪ್ರಸ್ತುತ ಲೋಕಸಭೆಯನ್ನು (17ನೇ ಲೋಕಸಭೆ) ವಿಸರ್ಜಿಸುವ ಶಿಫಾರಸನ್ನು ಅಂಗೀಕರಿಸಲಾಯಿತು. ಶೀಘ್ರದಲ್ಲೇ 18ನೇ ಲೋಕಸಭೆ ರಚನೆಯಾಗಲಿದೆ.


ಇದನ್ನೂ ಓದಿ:  41,974 ಮತಗಳ ಅಂತರದಿಂದ ಗೆಲುವು ಸಾಧಿಸಿದ ಓಂ ಬಿರ್ಲಾ, 20 ವರ್ಷಗಳ ಬಳಿಕ ಎರಡನೇ ಅವಧಿಗೆ ಆಯ್ಕೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.