Narendra Modi : ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರಕ್ಕೆ ಸಮಯ ನಿಗದಿ..! ಯಾವಾಗ.. ಎಲ್ಲಿ..?

Narendra Modi oath : 18ನೇ ಲೋಕಸಭೆ ಚುನಾವಣೆ 2024 ರ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಒಕ್ಕೂಟ ಮಗದೊಂದು ಬಾರಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತ ವರದಿ ಇಲ್ಲಿದೆ..

Written by - Krishna N K | Last Updated : Jun 5, 2024, 04:11 PM IST
    • ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮೋದಿ ಸಿದ್ಧ
    • ಈ ಬಾರಿ ಬಿಜೆಪಿಗೆ ತನ್ನ ಮಿತ್ರಪಕ್ಷಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
    • ಮೇಲಾಗಿ ಈ ಬಾರಿ ವಿಪಕ್ಷಗಳು ಪಡೆದ ಫಲಿತಾಂಶ ಬಿಜೆಪಿಗೆ ಸವಾಲಾಗಿದೆ.
Narendra Modi : ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರಕ್ಕೆ ಸಮಯ ನಿಗದಿ..! ಯಾವಾಗ.. ಎಲ್ಲಿ..? title=

New government form : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಭಾರತೀಯ ಜನತಾ ಪಕ್ಷಕ್ಕೆ ಮತದಾರರು ಬಿಗ್ ಶಾಕ್ ನೀಡಿದ್ದಾರೆ. ಈ ಹಿಂದೆ 303 ಸ್ಥಾನಗಳಿಂದ ಭರ್ಜರಿ ಗೆಲುವು ಪಡೆದಿದ್ದ ಕಮಲ ಪಡೆ ಈ ಬಾರಿ ಕೇವಲ 240 ಸ್ಥಾನಗಳಿಗೆ ಸೀಮಿತವಾಗಿದೆ. ಮ್ಯಾಜಿಕ್‌ ಸಂಖ್ಯೆ 272 ಸೀಟುಗಳನ್ನೂ ಸಹ ಪಡೆಯಲು ಮೋದಿ ಬಳಗ ವಿಫಲವಾಗಿದೆ. ಆದರೆ, ಎನ್‌ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಪಡೆದಿದ್ದು ಸರ್ಕಾರ ರಚಿಸಬಹುದಾಗಿದೆ. 

ಈ ಮೈತ್ರಿಕೂಟದಲ್ಲಿ ಬಿಜೆಪಿ ನಂತರ ತೆಲುಗು ದೇಶಂ ಪಕ್ಷ 16 ಸ್ಥಾನಗಳನ್ನು ಗೆದ್ದಿದೆ. ಆ ನಂತರ ಜನತಾ ದಳ ಯುನೈಟೆಡ್ ಪಕ್ಷ 12 ಸ್ಥಾನಗಳನ್ನು ಪಡೆದುಕೊಂಡಿತು. ಶಿವಸೇನೆ ಏಕ್ ನಾಥ್ ಶಿಂಧೆ 7 ಸ್ಥಾನಗಳನ್ನು ಪಡೆದಿದೆ.. ಲೋಕ ಜನಶಕ್ತಿ ಪಕ್ಷಕ್ಕೆ 5 ಸ್ಥಾನಗಳು.. ಜನಸೇನೆ ಮತ್ತು ಜನತಾದಳ ಜಾತ್ಯತೀತ ಪಕ್ಷಕ್ಕೆ ತಲಾ 2 ಸ್ಥಾನಗಳು.. ರಾಷ್ಟ್ರೀಯ ಲೋಕದಳಕ್ಕೆ 2 ಸ್ಥಾನಗಳು. ತೆಲುಗು ದೇಶಂ ಪಕ್ಷ ಈಗ ಎನ್‌ಟಿಎ ಮೈತ್ರಿಕೂಟದಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿದೆ.

ಇದನ್ನೂ ಓದಿ:ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನರೇಂದ್ರ ಮೋದಿ

ಈ ಬಾರಿ ಬಿಜೆಪಿಗೆ ತನ್ನ ಮಿತ್ರಪಕ್ಷಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ಅವಧಿಗೆ ಅಧಿಕಾರದಲ್ಲಿದ್ದರೂ ಇಷ್ಟೊಂದು ಸ್ಥಾನ ಪಡೆದಿರುವುದು ಅಚ್ಚರಿ ಮೂಡಿಸಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಹತ್ತು ವರ್ಷಗಳ ವಿರೋಧವನ್ನು ತಡೆದುಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಮೇಲಾಗಿ ಈ ಬಾರಿ ವಿಪಕ್ಷಗಳು ಪಡೆದ ಫಲಿತಾಂಶ ಬಿಜೆಪಿಗೆ ಸವಾಲಾಗಿದೆ. 

ಕಳೆದ ಎರಡು ಅವಧಿಯಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೂ ಬಿಜೆಪಿ ತನ್ನದೇ ಆದ ಬಹುಮತದ ಗುರುತನ್ನು ಪಡೆದುಕೊಂಡಿತ್ತು. ಇದರ ಫಲವಾಗಿ ಯಾವುದೇ ತೊಂದರೆಯಿಲ್ಲದೆ ಕೆಲವು ಕಾನೂನುಗಳನ್ನು ತರಲು ಸಹಾಯವಾಗಿತ್ತು. ಆದರೆ ಈ ಬಾರಿ ಬಿಜೆಪಿ ಕೇವಲ 240 ಸ್ಥಾನಗಳಿಗೆ ಸೀಮಿತವಾಗಿದೆ.. ಬಹುಮತಕ್ಕೆ 32 ಸ್ಥಾನಗಳ ಕೊರತೆ ಇದ್ದು, ಆದಷ್ಟು ಬೇಗ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ. 

ಇದನ್ನೂ ಓದಿ:ಅತಿ ಹೆಚ್ಚು ಅಂತರದಿಂದ ಗೆದ್ದ ಟಾಪ್ 5 ಅಭ್ಯರ್ಥಿಗಳು

ಅದರಂತೆ ಇದೇ ತಿಂಗಳ 8ರಂದು ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯ ಪಥದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಆಡಳಿತದಲ್ಲಿರುವ ಮುಖ್ಯಮಂತ್ರಿಗಳು ಹಾಗೂ ಎನ್‌ಡಿಎ ಮೈತ್ರಿಕೂಟದ ನಾಯಕರು ಭಾಗವಹಿಸಲಿದ್ದಾರೆ. 

ಈ ಸಂದರ್ಭದಲ್ಲಿ ಎನ್‌ಡಿಎಗೆ ಇತರ ಪಕ್ಷಗಳನ್ನು ಕರೆತರಲು ಈಗಾಗಲೇ ಪ್ರಯತ್ನಗಳು ನಡೆದಿವೆ ಎಂದು ವರದಿಯಾಗಿದೆ. ಈ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ ಎನ್‌ಡಿಎ ಪಾಲುದಾರ ಪಕ್ಷಗಳಿಗೆ ಯಾವ ಪೋರ್ಟ್ ಪೋಲಿಯೊ ನೀಡಲಾಗುವುದು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News