ನವದೆಹಲಿ: ಕಳೆದ ಎರಡು ತಿಂಗಳಿನಿಂದ ನಡೆದ ಲೋಕಸಭಾ ಚುನಾವಣಾ ಪ್ರಕ್ರಿಯೆ ಕೊನೆಯ ಹಂತ ತಲುಪಿದ್ದು, 545 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಮತಎಣಿಕೆ ಇಂದು ಬೆಳಿಗ್ಗೆ 8 ಗಂಟೆಯಿಂದ ದೇಶಾದ್ಯಂತ ಏಕಕಾಲಕ್ಕೆ ಆರಂಭವಾಗಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಿದ್ದ ಎನ್ಡಿಎ ಮೈತ್ರಿಕೂಟ, 2019ರ ಲೋಕಸಭಾ ಚುನಾವಣೆಯಲ್ಲಿಯೂ ಭಾರೀ ಮುನ್ನಡೆ ಸಾಧಿಸಿದ್ದು, ದೇಶದ ಆಡಳಿತದ ಚುಕ್ಕಾಣಿ ಹಿಡಿಯುವ ಎಲ್ಲಾ ಸಾಧ್ಯತೆಗಳೂ ಕಂಡುಬಂದಿದೆ. ಈ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಗುಜರಾತಿನ ಗಾಂಧಿನಗರದಲ್ಲಿರುವ ನರೇಂದ್ರ ಮೋದಿ ಅವರ ಮನೆಯ ಮುಂದೆ ಜಮಾಯಿಸಿ ಮೋದಿ ಅವರಿಗೆ ಜೈಕಾರ ಹಾಕುತ್ತಿದ್ದಾರೆ.
ಈ ಸಂದರ್ಭದಲ್ಲಿ ಮನೆಯಿಂದ ಹೊರಬಂದ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ, ಜೈಕಾರ ಕೂಗುತ್ತಿದ್ದ ಕಾರ್ಯಕರ್ತರಿಗೆ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಮತ್ತೊಮ್ಮೆ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಸಂತಸದಲ್ಲಿರುವ ಹೀರಾಬೇನ್ ಮೋದಿ ಅವರು, ಕೈಮುಗಿದು ಎಲ್ಲರಿಗೂ ನಮಸ್ಕರಿಸಿ ಧನ್ಯವಾದ ಅರ್ಪಿಸಿದ್ದಾರೆ.
Gujarat: Prime Minister Narendra Modi's mother Heeraben Modi greets the media outside her residence in Gandhinagar. pic.twitter.com/yR2Zi9eeL1
— ANI (@ANI) May 23, 2019