ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ವಿಷಯ: ಕೇಂದ್ರ ಸರ್ಕಾರದ ಮನವಿಗೆ ಸ್ಪಂದಿಸಿದ ಸುಪ್ರೀಂಕೋರ್ಟ್

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಹಾಡುವ ಅಗತ್ಯವಿಲ್ಲ, ಕೇಂದ್ರ ಸಮಿತಿಯು ಮುಂದಿನ ನಿಯಮಗಳನ್ನು ನಿರ್ಧರಿಸುತ್ತದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

Last Updated : Jan 9, 2018, 05:04 PM IST
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ವಿಷಯ: ಕೇಂದ್ರ ಸರ್ಕಾರದ ಮನವಿಗೆ ಸ್ಪಂದಿಸಿದ ಸುಪ್ರೀಂಕೋರ್ಟ್ title=

ನವದೆಹಲಿ: ಚಿತ್ರಮಂದಿರಗಳಲ್ಲಿ ರಾಷ್ಟ್ರೀಯ ಗೀತೆ ಹಾಡುವ ಅಗತ್ಯವಿಲ್ಲ ಎಂದು ಮಂಗಳವಾರ ತನ್ನ ನಿರ್ಣಾಯಕ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ. ಚಿತ್ರಮಂದಿರಗಳಲ್ಲಿನ ಯಾವುದೇ ಚಲನಚಿತ್ರವನ್ನು ಪ್ರದರ್ಶಿಸುವ ಮೊದಲು, ರಾಷ್ಟ್ರೀಯ ಗೀತೆಯನ್ನು ಕಡ್ಡಾಯ ಮಾಡಿರುವ ಆದೇಶದಲ್ಲಿ ಬದಲಾವಣೆಗಳನ್ನು ಮಾಡಬೇಕೆಂದು ಕೇಂದ್ರ ಸರ್ಕಾರ ಮನವಿ ಸಲ್ಲಿಸಿತ್ತು.

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಎಂಬ ಆದೇಶ ಜಾರಿಗೊಂಡ ಒಂದು ವರ್ಷದ ಬಳಿಕ ಕೇಂದ್ರ ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ದೀಪಕ್ ಕುಮಾರ್ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿದ್ದರು. ಅಲ್ಲದೆ ರಾಷ್ಟ್ರಗೀತೆ ನುಡಿಸುವುದಕ್ಕೆ ಹೊಸ ಮಾರ್ಗಸೂಚಿಗಳನ್ನು ರಚಿಸಲು ಅಂತರ್ ಸಚಿವಾಲಯ ಸಮಿತಿ ರಚಿಸಲಾಗಿದೆ ಎಂದು ತಿಳಿಸಿತ್ತು. ಈ ಮನವಿಗೆ ಸ್ಪಂದಿಸಿರುವ ಸುಪ್ರೀಂ ಕೋರ್ಟ್, ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ. ಈ ವಿಷಯ ಚಿತ್ರಮಂದಿರಗಳ ವಿವೇಚನೆಗೆ ಬಿಟ್ಟ ವಿಷಯ ಎಂದು ತಿಳಿಸಿದೆ. 

 

Trending News