ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 13 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಮತ್ತೊಂದು ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಈ ಮೊದಲು ರಾಹುಲ್ ಗಾಂಧಿಗೆ ಜೂನ್ 2 ರಂದು ಅಧಿಕಾರಿಗಳ ಮುಂದೆ ಹಾಜರಾಗುವಂತೆ ಕೋರಿ ಸಮನ್ಸ್ ನೀಡಿತ್ತು. ಆದ್ರೆ, ವಿದೇಶಿ ಪ್ರವಾಸದಲ್ಲಿದ್ದ ಕಾರಣ ಸಮಯಾವಕಾಶ ಕೇಳಿದ್ದರು.
ಇದನ್ನೂ ಓದಿ : Priyanka Gandhi : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೋವಿಡ್ ಪಾಸಿಟಿವ್!
ರಾಹುಲ್ ಗಾಂಧಿಗೆ ಜೂನ್ 13 ರಂದು ದೆಹಲಿಯಲ್ಲಿರುವ ಇಡಿ ಪ್ರಧಾನ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜೂನ್ 8 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಪಕ್ಷದ ಪ್ರಚಾರದಲ್ಲಿ ಅಕ್ರಮ ಹಣಕಾಸು ವರ್ಗಾವಣೆ ಕುರಿತು ಇಡಿ ತನಿಖೆಗೆ ಈ ಪ್ರಕರಣವು ಸಂಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಹೇಳಿಕೆಗಳನ್ನು ದಾಖಲಿಸಲು ಸಂಸ್ಥೆ ಬಯಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸಿದೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ತನಿಖೆಯ ಭಾಗವಾಗಿ ಇತ್ತೀಚೆಗೆ ಸಂಸ್ಥೆಯು ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ವಿಚಾರಣೆಗೆ ಒಳಪಡಿಸಿದೆ.
ಯಂಗ್ ಇಂಡಿಯನ್ ಮತ್ತು ಎಜೆಎಲ್‌ನ ಷೇರು ಹೊಂದಿರುವ ಮಾದರಿ, ಹಣಕಾಸು ವಹಿವಾಟು ಮತ್ತು ಪ್ರವರ್ತಕರ ಪಾತ್ರವನ್ನು ಅರ್ಥಮಾಡಿಕೊಳ್ಳಲು ಇಡಿ ತನಿಖೆಯ ಕಾರಣ ಹಿರಿಯ ಕಾಂಗ್ರೆಸ್ ನಾಯಕರು ಮತ್ತು ಗಾಂಧಿ ಕುಟುಂಬದವರನ್ನು ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ನನ್ನ ಕಾಶಿ ಬಹಳಷ್ಟು ಬದಲಾಗಿದೆ, ಖಂಡಿತವಾಗಿ ಒಮ್ಮೆ ನೋಡಿ : ಪ್ರಧಾನಿ ಮೋದಿ
2013 ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆದಾಯ ತೆರಿಗೆ ಇಲಾಖೆ ತನಿಖೆಯನ್ನು ಇಲ್ಲಿನ ವಿಚಾರಣಾ ನ್ಯಾಯಾಲಯವು ಗಮನಕ್ಕೆ ತಂದ ನಂತರ ಸಂಸ್ಥೆಯು PMLA ಯ ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ