National Herald Case : ಇಡಿಗೆ ವಿಚಾರಣೆ ಮುಂದೂಡುವಂತೆ ಒತ್ತಾಯಿಸಿದ ರಾಹುಲ್ ಗಾಂಧಿ!

ಮೂಲಗಳ ಪ್ರಕಾರ, ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯ ಇದ್ದ ಕಾರಣ ಹೇಳಿ ಇಡಿಗೆ ವಿಚಾರಣೆಯನ್ನು ಸೋಮವಾರದವರೆಗೆ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದಾರೆ.

Written by - Channabasava A Kashinakunti | Last Updated : Jun 16, 2022, 06:05 PM IST
  • ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆ
  • ಇಡಿ ವಿಚಾರಣೆ ಮುಂದೂಡುವಂತೆ ರಾಹುಲ್ ಗಾಂಧಿ ಆಗ್ರಹ
  • ತಾಯಿ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯ ಇದ್ದ ಕಾರಣ
National Herald Case : ಇಡಿಗೆ ವಿಚಾರಣೆ ಮುಂದೂಡುವಂತೆ ಒತ್ತಾಯಿಸಿದ ರಾಹುಲ್ ಗಾಂಧಿ! title=

National Herald Case : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಯನ್ನು ಮುಂದೂಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. 

ಮೂಲಗಳ ಪ್ರಕಾರ, ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯ ಇದ್ದ ಕಾರಣ ಹೇಳಿ ಇಡಿಗೆ ವಿಚಾರಣೆಯನ್ನು ಸೋಮವಾರದವರೆಗೆ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು ಇಡಿ ಸತತ ಮೂರನೇ ದಿನವೂ ವಿಚಾರಣೆಗೆ ಒಳಪಡಿಸಿದೆ. ಅಲ್ಲದೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ ಕೂಡ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ : ಹೊತ್ತಿ ಉರಿದ ಬಿಜೆಪಿ ಜಿಲ್ಲಾ ಕಚೇರಿ

ಸೋನಿಯಾ ಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ಬಂದ ಕಾರಣ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಪ್ರಸ್ತುತ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬುಧವಾರ ಇಡಿ ವಿಚಾರಣೆ ಮುಗಿದ ಬಳಿಕ ರಾಹುಲ್ ಗಾಂಧಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದ್ದರು. ಇದೇ ಪ್ರಕರಣದಲ್ಲಿ ಜೂನ್ 23ರಂದು ಹಾಜರಾಗುವಂತೆ ಇಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸೂಚಿಸಿದೆ.

ಬುಧವಾರ ನಡೆದ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಿಡಿದೆದ್ದಿದ್ದು, ಹಲವು ಮುಖಂಡರು ಧರಣಿ ಕುಳಿತರು. ಇಡಿ ಕಚೇರಿಯ ಹೊರಗೆ ಹಲವು ಕಾರ್ಯಕರ್ತರು ಗಲಾಟೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಇಡಿ ಮಂಗಳವಾರ 11 ಗಂಟೆಗಳ ಕಾಲ ಮತ್ತು ಸೋಮವಾರ 10 ಗಂಟೆಗಳಿಗೂ ಹೆಚ್ಚು ಕಾಲ ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಿದೆ.

ಇದನ್ನೂ ಓದಿ : ಇವರು ರಾಷ್ಟ್ರಪತಿಯಾದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತದೆ : ಬಿಜೆಪಿ ಸಂಸದ

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News