ಕಾಂಗ್ರೆಸ್ ರಹಿತ ರಾಷ್ಟ್ರಮಟ್ಟದ ಮೈತ್ರಿಕೂಟ ಅಪೂರ್ಣ -ಸಂಜಯ್ ರೌತ್

ಕಾಂಗ್ರೆಸ್ ಇಲ್ಲದೆ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಪೂರ್ಣವಾಗುತ್ತದೆ ಎಂದು ಶಿವಸೇನೆ ಮುಖಂಡ ಸಂಜಯ್ ರೌತ್ ಶನಿವಾರ ಹೇಳಿದ್ದಾರೆ.

Written by - Zee Kannada News Desk | Last Updated : Jun 26, 2021, 07:06 PM IST
  • ಕಾಂಗ್ರೆಸ್ ಇಲ್ಲದೆ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಪೂರ್ಣವಾಗುತ್ತದೆ ಎಂದು ಶಿವಸೇನೆ ಮುಖಂಡ ಸಂಜಯ್ ರೌತ್ ಶನಿವಾರ ಹೇಳಿದ್ದಾರೆ.
  • ರಾಷ್ಟ್ರಮಟ್ಟದಲ್ಲಿ ಎಲ್ಲ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ಕೆಲಸ ನಡೆಯುತ್ತಿದೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಪರ್ಯಾಯ ಮೈತ್ರಿಕೂಟವನ್ನು ಬಲಪಡಿಸುವಲ್ಲಿ ಕಾಂಗ್ರೆಸ್ ಪಕ್ಷವು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ರಹಿತ ರಾಷ್ಟ್ರಮಟ್ಟದ ಮೈತ್ರಿಕೂಟ ಅಪೂರ್ಣ -ಸಂಜಯ್ ರೌತ್  title=
ಸಂಗ್ರಹ ಚಿತ್ರ

ನವದೆಹಲಿ: ಕಾಂಗ್ರೆಸ್ ಇಲ್ಲದೆ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಅಪೂರ್ಣವಾಗುತ್ತದೆ ಎಂದು ಶಿವಸೇನೆ ಮುಖಂಡ ಸಂಜಯ್ ರೌತ್ ಶನಿವಾರ ಹೇಳಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಎಲ್ಲ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ಕೆಲಸ ನಡೆಯುತ್ತಿದೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಪರ್ಯಾಯ ಮೈತ್ರಿಕೂಟವನ್ನು ಬಲಪಡಿಸುವಲ್ಲಿ ಕಾಂಗ್ರೆಸ್ ಪಕ್ಷವು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: 'ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ವ್ಯಾಪ್ತಿಯನ್ನು ವಿಸ್ತರಿಸುವ ಸಮಯ ಬಂದಿದೆ'

"ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸುತ್ತದೆ. ಇದು ಪ್ರಸ್ತುತ  ಹರಿದು ಹಂಚಿರುವ ಶಕ್ತಿಗಳಿಗೆ ಬಲವಾದ ಪರ್ಯಾಯವಾಗಲಿದೆ.ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ಕೆಲಸ ಪ್ರಗತಿಯಲ್ಲಿದೆ, ಆದರೆ ಕಾಂಗ್ರೆಸ್ ನ್ನು ಒಳಗೊಳ್ಳದೆ ಇದು ಪೂರ್ಣಗೊಳ್ಳುವುದಿಲ್ಲ ಎಂದು ರೌತ್ (Sanjay Raut) ಅವರ ಹೇಳಿಕೆಯನ್ನು ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ: "ಗೂಂಡಾ ಎಂದು ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ, ನಾವು ಪ್ರಮಾಣೀಕರಿಸಿದ ಗೂಂಡಾಗಳು"

ನವದೆಹಲಿಯಲ್ಲಿ  ತೃಣಮೂಲ ಕಾಂಗ್ರೆಸ್ (ಟಿಎಂಸಿ), ಸಮಾಜವಾದಿ ಪಕ್ಷ (ಎಸ್‌ಪಿ), ಆಮ್ ಆದ್ಮಿ ಪಕ್ಷ (ಎಎಪಿ), ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ,ಎಡಪಕ್ಷಗಳು ಸೇರಿದಂತೆ ಶರದ್ ಪವಾರ್ ನೇತೃತ್ವದಲ್ಲಿ ನಡೆದ ಎಂಟು ವಿರೋಧ ಪಕ್ಷಗಳ ನಾಯಕರ ಸಭೆ ನಡೆದ ನಾಲ್ಕು ದಿನಗಳ ನಂತರ ಈ ಹೇಳಿಕೆ ಬಂದಿದೆ.ದೇಶವು ಎದುರಿಸುತ್ತಿರುವ ವಿವಿಧ ವಿಷಯಗಳ ಬಗ್ಗೆ ನಾಯಕರು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಈ ಸಭೆಯ ಕಾರ್ಯಸೂಚಿಯು ಸಂಭಾವ್ಯ ಮೈತ್ರಿಯನ್ನು ಚರ್ಚಿಸಲು ಕರೆಯಲಾಗಿತ್ತು ಎನ್ನಲಾಗಿದೆ. ಆದರೆ ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಗೈರು ಹಾಜರಾಗಿದ್ದರು ಎನ್ನಲಾಗಿದೆ.ಇನ್ನೊಂದೆಡೆಗೆ ಈ ಸಭೆಯ ವಿಚಾರವಾಗಿ ಹಬ್ಬರಿರುವ ಎಲ್ಲ ಊಹಾಪೋಹಗಳನ್ನು ಶರದ್ ಪವಾರ ಅಲ್ಲಗಳೆದಿದ್ದು, ರಾಷ್ಟ್ರೀಯ ಮೈತ್ರಿ ರಚನೆ ಅವರು ಆಯೋಜಿಸಿದ್ದ ಸಭೆಯ ಚರ್ಚೆಯ ವಿಷಯವಲ್ಲ ಎಂದು ಹೇಳಿದರು. ಆದರೆ ಅಂತಹ ಯಾವುದೇ ಒಕ್ಕೂಟವು ಹೊರಹೊಮ್ಮಿದರೆ, ಅದರ ನಾಯಕತ್ವವು ಸಾಮೂಹಿಕವಾಗಿ ಇರಬೇಕಾಗುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Param Bir Sing Letter To CM Latest News: 'ನಾವು ಹೊಸ ದಾರಿಯ ಹುಡುಕಾಟದಲ್ಲಿದ್ದೇವೆ', ಸಂಜಯ್ ರಾವುತ್ ಅವರ ಈ ಟ್ವೀಟ್ ನ ಅರ್ಥ ಏನು?

ಈ ಸಭೆಯ ಒಂದು ದಿನದ ನಂತರ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಕಾಂಗ್ರೆಸ್ ರಹಿತ ಬಿಜೆಪಿ ವಿರೋಧಿ ರಂಗವನ್ನು ರಚಿಸುವುದು ಕೇಂದ್ರದಲ್ಲಿ ಬಿಜೆಪಿ ಪರೋಕ್ಷವಾಗಿ ಸಹಾಯ ಮಾಡುತ್ತದೆ ಎಂದು ಹೇಳಿದರು.

ಏತನ್ಮಧ್ಯೆ, ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಮುಂಬೈ ಮತ್ತು ನಾಗ್ಪುರದ ಮಾಜಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಆವರಣದಲ್ಲಿ ದಾಳಿ ನಡೆಸಿತು ಮತ್ತು ಅವರ ಇಬ್ಬರು ಸಹಾಯಕರನ್ನು ಸಹ ಬಂಧಿಸಿದೆ. ಸಹಾಯಕರನ್ನು ಜುಲೈ 1 ರವರೆಗೆ ಇಡಿ ಕಸ್ಟಡಿಗೆ ರಿಮಾಂಡ್ ಮಾಡಲಾಗಿದೆ.

"ರಾಜ್ಯ ತನಿಖಾ ಸಂಸ್ಥೆಗಳು ಸಹ ಪ್ರಮುಖ ಪ್ರಕರಣಗಳನ್ನು ತನಿಖೆ ಮಾಡಬಹುದು, ಆದರೆ ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್ ಅನ್ನು ಗುರಿಯಾಗಿಸುವ ಪ್ರಯತ್ನಗಳು ನಡೆಯುತ್ತಿವೆ. ನಾವು ಕೂಡ ನೋಡುತ್ತೇವೆ" ಎಂದು ರೌತ್ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ : Nicotine Selling License: 'ಇನ್ಮುಂದೆ ತಂಬಾಕು, ಸಿಗರೇಟ್ ಮಾರಾಟ ಮಾಡಲೂ ಕೂಡ ಲೈಸನ್ಸ್ ಪಡೆಯಬೇಕು'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News