ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ತೊರೆದ ನವಜೋತ್ ಸಿಂಗ್ ಸಿಧು

ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋತಿರುವ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಮುಖ್ಯಸ್ಥರನ್ನು ವಜಾಗೊಳಿಸಿದ ಒಂದು ದಿನದ ನಂತರ, ಪಕ್ಷದ ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Written by - Zee Kannada News Desk | Last Updated : Mar 16, 2022, 05:18 PM IST
  • 'ಕಾಂಗ್ರೆಸ್ ಅಧ್ಯಕ್ಷರ ಅಪೇಕ್ಷೆಯಂತೆ ನಾನು ನನ್ನ ರಾಜೀನಾಮೆಯನ್ನು ಕಳುಹಿಸಿದ್ದೇನೆ" ಎಂದು ಅವರು ಸೋನಿಯಾ ಗಾಂಧಿಗೆ ಬರೆದ ಪತ್ರದ ಪ್ರತಿಯೊಂದಿಗೆ ಟ್ವೀಟ್ ಮಾಡಿದ್ದಾರೆ.
 ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ತೊರೆದ ನವಜೋತ್ ಸಿಂಗ್ ಸಿಧು  title=

ನವದೆಹಲಿ:  ಕಾಂಗ್ರೆಸ್ ಪಕ್ಷವು ಹೀನಾಯವಾಗಿ ಸೋತಿರುವ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಮುಖ್ಯಸ್ಥರನ್ನು ವಜಾಗೊಳಿಸಿದ ಒಂದು ದಿನದ ನಂತರ, ಪಕ್ಷದ ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

'ಕಾಂಗ್ರೆಸ್ ಅಧ್ಯಕ್ಷರ ಅಪೇಕ್ಷೆಯಂತೆ ನಾನು ನನ್ನ ರಾಜೀನಾಮೆಯನ್ನು ಕಳುಹಿಸಿದ್ದೇನೆ" ಎಂದು ಅವರು ಸೋನಿಯಾ ಗಾಂಧಿಗೆ ಬರೆದ ಪತ್ರದ ಪ್ರತಿಯೊಂದಿಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Video : ರೀಲ್ಸ್ ಮಾಡುವ ಭರದಲ್ಲಿ ತನ್ನ ಬೆನ್ನಿಗೇ ಬೆಂಕಿ ಹಚ್ಚಿಕೊಂಡ ಭೂಪ..! ಮುಂದೆ.?

ಈ ಕುರಿತಾಗಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ "ಕಾಂಗ್ರೆಸ್ ಅಧ್ಯಕ್ಷೆ, ಶ್ರೀಮತಿ ಸೋನಿಯಾ ಗಾಂಧಿ (Sonia Gandhi) ಯವರು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರನ್ನು ಪಿಸಿಸಿ ಮರುಸಂಘಟನೆಗೆ ಅನುಕೂಲವಾಗುವಂತೆ ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ" ಎಂದು ಅವರು ಹೇಳಿದರು.

ಪಕ್ಷದ ಸೋಲಿನ ನಂತರ ಮಾಧ್ಯಮದೊಂದಿಗಿನ ಅವರ ಮೊದಲ ಸಂವಾದದಲ್ಲಿ ಸಿಧು, ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಬದಲಾವಣೆಯನ್ನು ತರಲು ಅತ್ಯುತ್ತಮ ನಿರ್ಧಾರವನ್ನು ಮಾಡಿದ್ದಕ್ಕಾಗಿ ಪಂಜಾಬ್‌ನ ಜನರನ್ನು ಶ್ಲಾಘಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗಿರುವ ಫಲಿತಾಂಶದ ಬಗ್ಗೆ ಏನು ಹೇಳುತ್ತಿರಿ ಎಂದು ಕೇಳಿದ್ದಕ್ಕೆ 'ಜನರು ಬದಲಾವಣೆಯನ್ನು ಆರಿಸಿದ್ದಾರೆ, ಹಾಗಾಗಿ ಅವರ ನಿರ್ಧಾರ ಎಂದಿಗೂ ತಪ್ಪಾಗಿರಲ್ಲ, ಜನರ ಧ್ವನಿ ದೇವರ ಧ್ವನಿಯಾಗಿದ್ದು, ನಾವು ವಿನಯದಿಂದ ಇದನ್ನು ಅರ್ಥಮಾಡಿಕೊಂಡು ಅದಕ್ಕೆ ತಲೆಬಾಗಬೇಕು"ಎಂದು ಹೇಳಿದರು.

ಇದನ್ನೂ ಓದಿ: FY 21-22 : ಮಾರ್ಚ್ 31 ರೊಳಗೆ ತಪ್ಪದೆ ಮುಗಿಸಿ ಈ 5 ಹಣಕಾಸು ಸಂಬಂಧಿತ ಕೆಲಸಗಳನ್ನು!

ಪಂಜಾಬ್ ವಿಧಾನಸಭೆಯಲ್ಲಿ ಸಿಧು ಸ್ವತಃ ಅಮೃತಸರ ಪೂರ್ವ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಜೀವನಜ್ಯೋತ್ ಕೌರ್ ವಿರುದ್ಧ 6,000 ಮತಗಳ ಅಂತರದಿಂದ ಸೋತಿದ್ದಾರೆ.ಅವರು 32,929 ಮತಗಳನ್ನು ಪಡೆದರೆ, ಎಂಎಸ್ ಕೌರ್ 39,520 ಮತಗಳನ್ನು ಪಡೆದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

 

 

Trending News