ನವದೆಹಲಿ: ಪಂಜಾಬ್‌ನ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಅವರು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಹೊಸದಾಗಿ ನೇಮಕಗೊಂಡ ಸಲಹೆಗಾರರನ್ನು ಕಾಶ್ಮೀರ ಮತ್ತು ಪಾಕಿಸ್ತಾನದ ಬಗೆಗಿನ ನಿಲುವಿನ ವಿಚಾರವಾಗಿ ವಜಾಗೊಳಿಸುವ ಸುಳಿವು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಸುದ್ದಿವಾಹಿನಿಯೊಂದಿಗೆ ಮಾತನಾಡುತ್ತಾ, ಸಿದ್ದು ಅವರ ಇಬ್ಬರು ಸಲಹೆಗಾರರಾದ ಪ್ಯಾರೆ ಲಾಲ್ ಗರ್ಗ್ ಮತ್ತು ಮಾಲ್ವಿಂದರ್ ಮಾಲಿ ಅವರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಅವರ ಹೇಳಿಕೆಗಳು ಕಾಶ್ಮೀರ ಮತ್ತು ಪಾಕಿಸ್ತಾನದ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ಅನುಗುಣವಾಗಿಲ್ಲ ಎಂದು ರಾವತ್ ಹೇಳಿದರು.


ಇದನ್ನೂ ಓದಿ:ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದಲ್ಲಿಯೇ ಕಾಂಗ್ರೆಸ್ ಚುನಾವಣೆ ಎದುರಿಸಲಿದೆ- ಹರೀಶ್ ರಾವತ್


ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ (Amarinder Singh) ಮತ್ತು ಮನೀಶ್ ತಿವಾರಿ ಸೇರಿದಂತೆ ಹಲವು ಉನ್ನತ ಕಾಂಗ್ರೆಸ್ ನಾಯಕರು ಈ ಹೇಳಿಕೆಗಳನ್ನು ಖಂಡಿಸಿದ್ದರು.ರಾವತ್ ಗಾರ್ಗ್ ಮತ್ತು ಮಾಲಿ ಇಬ್ಬರನ್ನೂ ಪಕ್ಷದಿಂದ ನೇಮಿಸಿಲ್ಲ ಮತ್ತು ಅವರ ವಿರುದ್ಧ ವಜಾಗೊಳಿಸಲು ಅಥವಾ ಕಠಿಣ ಕ್ರಮ ಕೈಗೊಳ್ಳಲು ಸಿಧುಗೆ ಸೂಚಿಸಲಾಗಿದೆ ಎಂದು ಹೇಳಿದರು.


ಮುಖ್ಯಮಂತ್ರಿಯ ಅಮರಿಂದರ್ ಸಿಂಗ್ ಪರವಾಗಿ ಬ್ಯಾಟಿಂಗ್ ಬೀಸಿದ ರಾವತ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದಲ್ಲಿ ಹೋರಾಡಲಾಗುವುದು, ಅವರೇ ಪಕ್ಷವನ್ನು ಮುನ್ನಡೆಸಲಿದ್ದಾರೆ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಮುಖವಾಗಲಿದ್ದಾರೆ ಎಂದು ರಾವತ್ ಹೇಳಿದರು.


ಇದನ್ನೂ ಓದಿ: Navjot Singh Sidhu : ಕಾಂಗ್ರೆಸ್ ಗೆದ್ದರೆ ಸಿಧು ಮುಂದಿನ ಪಂಜಾಬ್ ಸಿಎಂ!


ಡೆಹ್ರಾಡೂನ್ ನಲ್ಲಿರುವ ಅವರ ನಿವಾಸದಲ್ಲಿ ಪಂಜಾಬ್ ಮಂತ್ರಿಗಳು ಮತ್ತು ಶಾಸಕರ ನಿಯೋಗದೊಂದಿಗೆ ಭೇಟಿಯಾದ ನಂತರ ಮಾಧ್ಯಮದವರ ಜೊತೆಗೆ ಸಂಕ್ಷಿಪ್ತವಾಗಿ ಮಾತನಾಡಿದ ರಾವತ್  "ನಾವು ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದಲ್ಲಿ 2022 ಪಂಜಾಬ್ ಚುನಾವಣೆಗಳಲ್ಲಿ ಸ್ಪರ್ಧಿಸುತ್ತೇವೆ."ಎಂದು ಹೇಳಿದರು.


ಪಂಜಾಬ್ ಕಾಂಗ್ರೆಸ್ ನಾಯಕರ ಒಂದು ಭಾಗವು ಅಮರೀಂದರ್ ಸಿಂಗ್ ಅವರ ವಿರುದ್ಧ ಪಕ್ಷದ ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಕ್ಯಾಪ್ಟನ್ ಅವರನ್ನು ಮುಖ್ಯಮಂತ್ರಿಯಿಂದ ಕೆಳಗಿಳಿಸುವಂತೆ ಒತ್ತಾಯಿಸಿತ್ತು. ಅವರ ಕಾರ್ಯಶೈಲಿಯು ಪಕ್ಷ ಮತ್ತು ರಾಜ್ಯಕ್ಕೆ ಹಾನಿಕಾರಕವಾಗಿದೆ ಎಂದು ದೂರು ನೀಡಿತ್ತು.


ಇದನ್ನೂ ಓದಿ: ಕೊರೊನಾ ಪ್ರಕರಣಗಳ ಹೆಚ್ಚಳ: ವಾರಾಂತ್ಯದ ಲಾಕ್ ಡೌನ್ ಘೋಷಿಸಿದ ಪಂಜಾಬ್ ಸಿಎಂ


ರಾಜ್ಯ ಘಟಕದಲ್ಲಿ ತಿಂಗಳುಗಳ ಒಳಜಗಳವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ತೀವ್ರ ಆಕ್ಷೇಪಗಳ ನಡುವೆಯೂ ಕಳೆದ ತಿಂಗಳು ಸಿದ್ದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ