ಇಡಿ ವಶದಲ್ಲಿರುವ ನವಾಬ್ ಮಲಿಕ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ.
ನವದೆಹಲಿ : ಮಹಾರಾಷ್ಟ್ರ (Maharashtra)ಸರ್ಕಾರದ ಸಚಿವ ಮತ್ತು ಎನ್‌ಸಿಪಿ (NCP)ನಾಯಕ ನವಾಬ್ ಮಲಿಕ್ (Nawab Malik) ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನವಾಬ್ ಮಲಿಕ್ ಇಡಿ (ED) ವಶದಲ್ಲಿದ್ದಾರೆ. ದಾವೂದ್ ಇಬ್ರಾಹಿಂ ಮನಿ ಲಾಂಡರಿಂಗ್ ಪ್ರಕರಣದಲ್ಲಿ (Dawood Ibrahim Money Laundering Case)ಇಡಿ ಅವರನ್ನು ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನವಾಬ್ ಮಲಿಕ್ ಬಂಧನ :
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ (Nawab Malik) ಅವರನ್ನು ಜಾರಿ(ED) ನಿರ್ದೇಶನಾಲಯ ಬುಧವಾರ ಬಂಧಿಸಿದೆ. ನಂತರ ನವಾಬ್ ಮಲಿಕ್ ಅವರನ್ನು ಮನಿ ಲಾಂಡರಿಂಗ್ ಪ್ರಕರಣಗಳಿಗೆ (Money Laundering Case) ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ಅವರನ್ನು ಮಾರ್ಚ್ 3 ರವರೆಗೆ ಇಡಿ ವಶಕ್ಕೆ ಒಪ್ಪಿಸಲಾಯಿತು.
Ration Card : ಪಡಿತರ ಚೀಟಿದಾದಾರರ ಗಮನಕ್ಕೆ : ಪಡಿತರ ತೆಗೆದುಕೊಳ್ಳುವ ನಿಯಮದಲ್ಲಿ ಭಾರಿ ಬದಲಾವಣೆ!
ನವಾಬ್ ಮಲಿಕ್ ಅವರನ್ನು ಸಂಪುಟದಿಂದ ಕೈಬಿಡಲು ಆಗ್ರಹ :
ನವಾಬ್ ಮಲಿಕ್ ಬಂಧನದ (Nawab Malik Arrest) ನಂತರ, ಅವರನ್ನು ಸಂಪುಟದಿಂದ ಕೈ ಬಿಡುವಂತೆ ಬಿಜೆಪಿ (BJP) ಒತ್ತಾಯಿಸುತ್ತಿದೆ. ಆದರೆ ಶಿವಸೇನೆ ಅದನ್ನು ನಿರಾಕರಿಸಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ (Shivasena), ಎನ್‌ಸಿಪಿ (NCP) ಮತ್ತು ಕಾಂಗ್ರೆಸ್‌ನ ಸಮ್ಮಿಶ್ರ ಸರ್ಕಾರವಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ವಜಾಗೊಳಿಸಬೇಕೆಂಬ ಬಿಜೆಪಿಯ ಬೇಡಿಕೆಯ ನಡುವೆ, ತಮ್ಮ ಸಂಪುಟದ ಯಾವುದೇ ಸಹೋದ್ಯೋಗಿಗಳ ರಾಜೀನಾಮೆಯನ್ನು ಪಡೆಯುವುದು ಅಥವಾ ತಿರಸ್ಕರಿಸುವುದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧಿಕಾರ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ (Sanjay Rawat) ತಿಳಿಸಿದ್ದಾರೆ.
ಇದನ್ನೂ ಓದಿ : ಕರೋನಾಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ, ದೆಹಲಿಯಲ್ಲಿ ನೈಟ್ ಕರ್ಫ್ಯೂ ಮತ್ತು ಮಾಸ್ಕ್ ಕುರಿತು ಬದಲಾಯಿತು ನಿಯಮ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಕೇಂದ್ರೀಯ ಸಂಸ್ಥೆಗಳನ್ನು ರಾಜಕೀಯ ಲಾಭಕ್ಕಾಗಿ ದುರುಪಯೋಗ ಪಡಿಸಿಕೊಂಡು ನಮ್ಮ ಸಚಿವರನ್ನು ಬಂಧಿಸಿ ನಂತರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.