NBCCನಲ್ಲಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳಿಗೆ 42 ಸಾವಿರ ವೇತನ!

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್(NBCC) 100 ಇಂಜಿನಿಯರ್ ಹುದ್ದೆ ಗಳಿಗೆ ಅರ್ಜಿ

Last Updated : Nov 17, 2020, 06:44 PM IST
  • ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್(NBCC) 100 ಇಂಜಿನಿಯರ್ ಹುದ್ದೆ ಗಳಿಗೆ ಅರ್ಜಿ
  • ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42500 ರೂ. ವೇತನ
  • ಡಿಸೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ
NBCCನಲ್ಲಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳಿಗೆ 42 ಸಾವಿರ ವೇತನ! title=

ನ್ಯಾಷನಲ್ ಬ್ಯುಲ್ಡಿಂಗ್ಸ್ ಕನ್‌ಸ್ಟ್ರಕ್ಷನ್ ಕಾರ್ಪೋರೇಶನ್ (NBCC) 100 ಇಂಜಿನಿಯರ್ (ಸಿವಿಲ್/ಇಲೆಕ್ಟ್ರಿಕಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್(Apply Online) ಮೂಲಕ ಡಿಸೆಂಬರ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

'PF ವಿತ್ ಡ್ರಾ' ಮಾಡುವ ಉದ್ಯೋಗಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ!

ವಿದ್ಯಾರ್ಹತೆ: ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

PM Kisan Samman Nidhi: ನಿಮ್ಮ ಖಾತೆಗೆ 6000 ರೂ. ಬರದಿದ್ದರೆ ಇಲ್ಲಿ ದೂರು ನೀಡಿ

ವೇತನ: ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 42,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ, ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

7th Pay Commission:ಈ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಗಲಿದೆ Big Gift

ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nbccindia.com/index ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನಂತರ ಅರ್ಜಿಯ ಪ್ರತಿಯನ್ನು ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ: General Manager (HRM), NBCC (I) Limited, NBCC Bhawan, 2nd Floor, Corporate Officer, Near Lodhi Hotel, Lodhi Road, New Delhi-110003.

ಜನವರಿಯಿಂದ FASTag ಕಡ್ಡಾಯ, ಅದನ್ನು ಎಲ್ಲಿ? ಹೇಗೆ ಪಡೆಯಬೇಕೆಂದು ತಿಳಿಯಿರಿ

Trending News