ʼಮಹಾʼ ಟ್ರಿಪಲ್ ಇಂಜಿನ್ ಸರ್ಕಾರ..! 30 ಶಾಸಕರ ಜೊತೆ ಶಿಂಧೆ ಸರ್ಕಾರಕ್ಕೆ ಅಜಿತ್ ಪವಾರ್ ಬೆಂಬಲ

NCP Ajit pawar  : ಮಹಾರಾಷ್ಟ್ರದಲ್ಲಿ ಡಬಲ್ ಇಂಜಿನ್ ಸರ್ಕಾರದ ಜಾಗದಲ್ಲಿ ಈಗ ಟ್ರಿಪಲ್ ಎಂಜಿನ್ ಸರ್ಕಾರ ರಚನೆಯಾಗಿದೆ ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಇನ್ನೂ 9 ಎನ್‌ಸಿಪಿ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.  

Written by - Krishna N K | Last Updated : Jul 2, 2023, 07:30 PM IST
  • ಮಹಾರಾಷ್ಟ್ರದಲ್ಲಿ ಡಬಲ್ ಇಂಜಿನ್ ಸರ್ಕಾರದ ಜಾಗದಲ್ಲಿ ಈಗ ಟ್ರಿಪಲ್ ಎಂಜಿನ್ ಸರ್ಕಾರ ರಚನೆಯಾಗಿದೆ.
  • ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಶಾಕ್‌ ನೀಡಿದ್ದಾರೆ.
  • ಬಿಜೆಪಿ ಮತ್ತು ಶಿವಸೇನೆ ನೇತೃತ್ವದ ಮಾಹಾರಾಷ್ಟ್ರ ಸರ್ಕಾರಲ್ಲಿ ಇದೀಗ ಎನ್‌ಸಿಪಿ ಬೆಂಬಲದೊಂದಿದೆ ಟ್ರಿಪಲ್‌ ಎಂಜಿನ್‌ ಸರ್ಕಾರ ರಚನೆಯಾಗಿದೆ.
ʼಮಹಾʼ ಟ್ರಿಪಲ್ ಇಂಜಿನ್ ಸರ್ಕಾರ..! 30 ಶಾಸಕರ ಜೊತೆ ಶಿಂಧೆ ಸರ್ಕಾರಕ್ಕೆ ಅಜಿತ್ ಪವಾರ್ ಬೆಂಬಲ title=

Maharashtra Politics : ಮಹಾರಾಷ್ಟ್ರ ರಾಜಕೀಯದಲ್ಲಿ ಭಾನುವಾರ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಆಡಳಿತ ಪಕ್ಷವನ್ನು ಬೆಂಬಲಿಸಿದ್ದಾರೆ. ಅಲ್ಲದೆ, ತಕ್ಷಣವೇ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಶಾಕ್‌ ನೀಡಿದ್ದಾರೆ.

ಹೌದು.. ಬಿಜೆಪಿ ಮತ್ತು ಶಿವಸೇನೆ ನೇತೃತ್ವದ ಮಾಹಾರಾಷ್ಟ್ರ ಸರ್ಕಾರಲ್ಲಿ ಇದೀಗ ಎನ್‌ಸಿಪಿ ಬೆಂಬಲದೊಂದಿದೆ ಟ್ರಿಪಲ್‌ ಎಂಜಿನ್‌ ಸರ್ಕಾರ ರಚನೆಯಾಗಿದೆ. ಇಂದು ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮುಖ್ಯಸ್ಥಿಗೆಯಲ್ಲಿ ಅಜಿತ್‌ ಪವಾರ್‌ ಡಿಸಿಎಂ ಸ್ಥಾನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ:Expensive Cow: ಇದೇ ನೋಡಿ ವಿಶ್ವದ ಅತ್ಯಂತ ದುಬಾರಿ ಹಸು, ಬೆಲೆ ಕೇಳಿದ್ರೆ ಬೆಚ್ಚಿಬೀಳ್ತೀರಾ!

ಈ ವೇಳೆ ಮಾತನಾಡಿದ ಸಿಎಂ ಏಕನಾಥ್ ಶಿಂಧೆ, ಈಗ ರಾಜ್ಯದಲ್ಲಿ ಒಬ್ಬ ಸಿಎಂ ಹಾಗೂ ಇಬ್ಬರು ಉಪ ಮುಖ್ಯಮಂತ್ರಿಗಳಿದ್ದಾರೆ. ಡಬಲ್ ಎಂಜಿನ್ ಈಗ ಟ್ರಿಪಲ್ ಎಂಜಿನ್ ಆಗಿ ಮಾರ್ಪಟ್ಟಿದೆ. ಮಹಾರಾಷ್ಟ್ರದ ಅಭಿವೃದ್ಧಿಗೆ ನಾಯಕರು ಒಗ್ಗೂಡುವುದನ್ನು ಸ್ವಾಗತಿಸುತ್ತೇನೆ. ಅಜಿತ್ ಪವಾರ್ ಅವರ ಅನುಭವವು ಸರ್ಕಾರವನ್ನು ನಡೆಸಲು ಮತ್ತು ಮಹಾರಾಷ್ಟ್ರವನ್ನು ಮತ್ತಷ್ಟು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲು ಉಪಯುಕ್ತವಾಗಿದೆ ಎಂದು ಹೇಳಿದ್ದಾರೆ.

ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಅವರ ಬಣದ ಒಂಬತ್ತು ನಾಯಕರಿಗೂ ಸಚಿವ ಸ್ಥಾನ ಸಿಕ್ಕಿದೆ. ಎನ್‌ಸಿಪಿಯಲ್ಲಿ 53 ಶಾಸಕರಿದ್ದರೆ, 30 ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅಜಿತ್ ಪವಾರ್ ಭಾನುವಾರ ತಮ್ಮ ನಿವಾಸದಲ್ಲಿ ಶಾಸಕರೊಂದಿಗೆ ಸಭೆ ನಡೆಸಿದರು. ಬಳಿಕ ರಾಜಭವನಕ್ಕೆ ತೆರಳಿ ಸರ್ಕಾರಕ್ಕೆ ಬೆಂಬಲ ಘೋಷಿಸಿದರು. 

ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಗೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಬೆಂಬಲ

288 ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 2019 ರ ಚುನಾವಣೆಯಲ್ಲಿ ಯಾವುದೇ ಪಕ್ಷವು ಸಂಪೂರ್ಣ ಬಹುಮತವನ್ನು ಗಳಿಸಿಲ್ಲ. ಬಿಜೆಪಿ 105, ಶಿವಸೇನೆ 56, ಎನ್‌ಸಿಪಿ 54 ಮತ್ತು ಕಾಂಗ್ರೆಸ್ 44 ವಿಧಾನಸಭಾ ಸ್ಥಾನಗಳನ್ನು ಗೆದ್ದಿವೆ. ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ರಚಿಸಲು ನಿರ್ಧರಿಸಿದೆ. ಆದರೆ, ಸಿಎಂ ಹುದ್ದೆ ವಿಚಾರದಲ್ಲಿ ಒಪ್ಪಂದ ಆಗದ ಕಾರಣ ಸರ್ಕಾರ ರಚನೆ ಸಾಧ್ಯವಾಗಿರಲಿಲ್ಲ. ಕೆಲವು ದಿನಗಳ ರಾಷ್ಟ್ರಪತಿ ಆಳ್ವಿಕೆಯ ನಂತರ, ಬಿಜೆಪಿ-ಎನ್‌ಸಿಪಿ ನಾಯಕ ಅಜಿತ್ ಪವಾರ್ ಒಟ್ಟಾಗಿ ಸರ್ಕಾರ ರಚಿಸಲು ಒಪ್ಪಿಕೊಂಡರು. ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಮತ್ತು ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ಅದರ ನಂತರ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮಹಾ ವಿಕಾಸ್ ಅಘಾಡಿ ಮೈತ್ರಿ ಮಾಡಿಕೊಂಡವು ಮತ್ತು ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸಿದವು. ಕೆಲ ದಿನಗಳ ಹಿಂದೆ ಶಿವಸೇನೆ ನಾಯಕ ಏಕನಾಥ್ ಶಿಂಧೆ ಹಾಗೂ ಅವರಿಗೆ ಬೆಂಬಲ ನೀಡಿರುವ 30 ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು. 

ಇದನ್ನೂ ಓದಿ:  290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ!

ಸ್ವತಂತ್ರ ಶಾಸಕರ ಜತೆಗೆ 50 ಶಾಸಕರ ಬೆಂಬಲ ನನಗಿದೆ.. ಬಿಜೆಪಿ ಕೂಡ ಬೆಂಬಲಿಸುತ್ತದೆ ಎಂಬ ಪತ್ರವನ್ನು ರಾಜ್ಯಪಾಲರಿಗೆ ನೀಡಿದರು. ಉದ್ಧೇವ್ ಠಾಕ್ರೆ ಅವರು ಶಕ್ತಿ ಕಳೆದುಕೊಂಡಿದ್ದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ನಂತರ ಏಕನಾಥ್ ಶಿಂಧೆ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದರು. ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಏಕನಾಥ್ ಶಿಂಧೆ ಅವರಂತೆ ಇದೀಗ ಅಜಿತ್ ಪವಾರ್ ಕೂಡ ಶಾಸಕರೊಂದಿಗೆ ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News