ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟದ ಸೀಟು ಹಂಚಿಕೆ ಫೈನಲ್: ಬಿಜೆಪಿಗೆ 20 ಮಾತ್ರ

ಮೂಲಗಳ ಪ್ರಕಾರ ಉತ್ತರಪ್ರದೇಶ ಮತ್ತು ಜಾರ್ಖಂಡ್ನಲ್ಲಿ ಜೆಡಿಯು ತಲಾ ಒಂದು ಲೋಕಸಭಾ ಸ್ಥಾನ ನೀಡುವ ಸಾಧ್ಯತೆ ಇದೆ.   

Last Updated : Aug 30, 2018, 04:33 PM IST
ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟದ ಸೀಟು ಹಂಚಿಕೆ ಫೈನಲ್: ಬಿಜೆಪಿಗೆ 20 ಮಾತ್ರ title=

ಪಾಟ್ನಾ: ರಾಷ್ಟ್ರೀಯ ಡೆಮಾಕ್ರೆಟಿಕ್ ಅಲಯನ್ಸ್ ಪಕ್ಷವು ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ನಾಲ್ಕು ಪಕ್ಷಗಳ ನಡುವೆ ಸೀಟು ಹಂಚಿಕೆ ಫೈನಲ್ ಆಗಿದ್ದು, 40 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ 20, ಜೆಡಿಯು 12 ಮತ್ತು ಎಲ್‌ಜೆಪಿ 5 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮತ್ತು ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸೀಟು ಹಂಚಿಕೆ ಅಂತ್ಯಗೊಳಿಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆ ಇನ್ನಷ್ಟೇ ನಡೆಯಬೇಕಾಗಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಲೋಕಸಮತಾ ಪಕ್ಷವು(ಆರ್ಎಲ್ಎಸ್ಪಿ) ಎನ್‌ಡಿಎಯ ಒಂದು ಭಾಗವಾಗಿ ಸ್ಪರ್ಧಿಸಲಿದ್ದು, ಬಿಜೆಪಿ ಕೋಟಾದಿಂದ ಬಿಹಾರದಲ್ಲಿ ಎರಡು ಸ್ಥಾನಗಳನ್ನು ನೀಡಲಾಗುವುದು ಎನ್ನಲಾಗಿದೆ. 

ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸಚಿವ ಉಪೇಂದ್ರ ಖುಶ್ವಾಹ 2019ರಲ್ಲಿ ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿ ಆಗಲು ಸಹಾಯ ಮಾಡಲು ಸಮಾಜದ ಪ್ರತಿಯೊಂದು ವಿಭಾಗದಿಂದ ಮತಗಳನ್ನು ಪಡೆದುಕೊಳ್ಳಲು ತನ್ನ ಪಕ್ಷವು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಮೂಲಗಳ ಪ್ರಕಾರ ಉತ್ತರಪ್ರದೇಶ ಮತ್ತು ಜಾರ್ಖಂಡ್ನಲ್ಲಿ ಜೆಡಿಯು ತಲಾ ಒಂದು ಲೋಕಸಭಾ ಸ್ಥಾನ ನೀಡುವ ಸಾಧ್ಯತೆ ಇದೆ. 

2014 ರಲ್ಲಿ 22 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 2 ಸ್ಥಾನಗಳನ್ನು ಮೈತ್ರಿ ಧರ್ಮಕ್ಕೆ ಸರಿಯಾಗಿ ಕಳೆದುಕೊಳ್ಳಬೇಕಾಗಿದೆ.  ಕೆಲ ಹಾಲಿ ಸಂಸದರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಸಿಗುವ ಅನುಮಾನಗಳಿವೆ.
ಮತ್ತೊಂದೆಡೆ ಆರ್‌ಜೆಡಿ -ಕಾಂಗ್ರೆಸ್‌ ಮೈತ್ರಿಕೂಟ ಎನ್‌ಡಿಎ ಮೈತ್ರಿಕೂಟಕ್ಕೆ ಸೆಡ್ಡು ಹೊಡೆಯಲು ರಣತಂತ್ರ ಹೂಡಿದೆ ಎನ್ನಲಾಗುತ್ತಿದೆ.

Trending News