NEET-UG: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಯುಜಿ 2022ರ ಪರೀಕ್ಷಾ ದಿನಾಂಕ ಪ್ರಕಟ
NEET-UG 2022 ಪರೀಕ್ಷೆಯ ನೋಂದಣಿ ಪ್ರಕ್ರಿಯೆಯು neet.nta.nic.in ನಲ್ಲಿ ಪ್ರಾರಂಭವಾಗಿದೆ ಎಂದು NTA ಮಾಹಿತಿ ನೀಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 6, 2022.
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಬುಧವಾರ (ಏಪ್ರಿಲ್ 6, 2022) ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಪದವಿಪೂರ್ವ (NEET-UG) 2022 ರ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ. NTA ಯ ಮಾಹಿತಿಯ ಪ್ರಕಾರ, ಪದವಿಪೂರ್ವ ವೈದ್ಯಕೀಯ ಪ್ರವೇಶ ಪರೀಕ್ಷೆ ಜುಲೈ 17 ರಂದು ನಡೆಸಲಾಗುತ್ತದೆ.
ಇದನ್ನೂ ಓದಿ: ಭೀಕರ ಕಾಳಗದ Viral Video: ಕೋಳಿಯೇ ಗಿಡುಗವನ್ನು ನುಂಗಿತ್ತಾ..!
NEET-UG 2022 ಪರೀಕ್ಷೆಯ ನೋಂದಣಿ ಪ್ರಕ್ರಿಯೆಯು neet.nta.nic.in ನಲ್ಲಿ ಪ್ರಾರಂಭವಾಗಿದೆ ಎಂದು NTA ಮಾಹಿತಿ ನೀಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 6, 2022.
"ಪ್ರವೇಶ ಪರೀಕ್ಷೆಯು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದಿಂದ (ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) 200 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪ್ರತಿ ವಿಷಯದಲ್ಲಿ 50 ಪ್ರಶ್ನೆಗಳನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ (ಎ ಮತ್ತು ಬಿ). ಪರೀಕ್ಷೆಯ ಅವಧಿಯು 200 ನಿಮಿಷಗಳು (03 ಗಂಟೆ 20 ನಿಮಿಷಗಳು) ಮಧ್ಯಾಹ್ನ 02:00 ರಿಂದ ಸಂಜೆ 05:20ವರೆಗೆ ನಡೆಯಲಿದೆ" ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Fuel Price: ಪೆಟ್ರೋಲ್-ಡೀಸೆಲ್ ಬೆಲೆ ಪ್ರತಿದಿನ 80 ಪೈಸೆಯೇ ಹೆಚ್ಚಾಗುತ್ತಿರುವುದೇಕೆ?
ಇನ್ನು ಎಂಬಿಬಿಎಸ್, ಬಿಡಿಎಸ್, ಆಯುಷ್, ವೆಟರ್ನರಿ, ಬಿಎಸ್ಸಿ ನರ್ಸಿಂಗ್ ಮತ್ತು ಲೈಫ್ ಸೈನ್ಸ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್ ಯುಜಿ ಪರೀಕ್ಷೆ ನಡೆಯುತ್ತದೆ. ಅರ್ಜಿದಾರನಿಗೆ 17 ವರ್ಷ ವಯಸ್ಸಾಗಿರಬೇಕು. ಆದರೆ ಈ ಬಾರಿ NEET ಪರೀಕ್ಷೆ ಬರೆಯಲು ಯಾವುದೇ ವಯಸ್ಸಿನ ಮಿತಿ ಇಲ್ಲ ಎಂದು ತಿಳಿದುಬಂದಿದೆ. NTA ಈ ವರ್ಷ ಎಲ್ಲಾ ಅಭ್ಯರ್ಥಿಗಳಿಗೆ NEET UGಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು ತೆಗೆದುಹಾಕಿದೆ.
NEET UG 2022 ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ, ಉರ್ದು, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮರಾಠಿ, ಮಲಯಾಳಂ, ಒಡಿಯಾ, ಪಂಜಾಬಿ, ತಮಿಳು ಮತ್ತು ತೆಲುಗು ಸೇರಿದಂತೆ 13 ಭಾಷೆಗಳಲ್ಲಿ ನಡೆಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.