ನವದೆಹಲಿ : ಕೊರೋನಾ ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಖಾತ್ರಿಪಡಿಸಲು ಪ್ರಮುಖ ನಿರ್ಧಾರಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಈ ನಿಟ್ಟಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್-ಪಿಜಿ ಪರೀಕ್ಷೆ(NEET PG Exam)ಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.


ಇದನ್ನೂ ಓದಿ : Pinarayi Vijayan : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇರಳ ಸಿಎಂ ಪಿಣರಾಯಿ ವಿಜಯನ್! 


ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ(MBBS Students)ಗಳನ್ನು ಟೆಲಿಕನ್ಸಲ್ಟೇಷನ್ ಹಾಗೂ ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೊರೋನಾ ಪ್ರಕರಣಗಳ ಮೇಲ್ವಿಚಾರಣೆಗೆ ಬಳಸಿಕೊಳ್ಳುವ ಬಗ್ಗೆ ಪ್ರಧಾನಿ ಮೋದಿ  ಚಿಂತನೆ ನಡೆಸಿದ್ದಾರೆ, ಅಲ್ಲದೆ ಹಿರಿಯ ವೈದ್ಯರು ಮತ್ತು ನರ್ಸ್ ಮೇಲ್ವಿಚಾರಣೆಯಲ್ಲಿ ಬಿಎಸ್ಸಿ / ಜಿಎನ್‌ಎಂ ಅರ್ಹ ನರ್ಸ್ ಗಳನ್ನು ಪೂರ್ಣ ಸಮಯದ ಕೊರೋನಾ ಕರ್ತವ್ಯಕ್ಕೆ  ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.


ಇದನ್ನೂ ಓದಿ : Adar Poonawalla : ಭಾರತ ಜುಲೈವರೆಗೆ ಕೊರೋನಾ ಲಸಿಕೆ ಕೊರತೆ ಎದುರಿಸಲಿದೆ : ಸೀರಂ ಇನ್ಸ್ಟಿಟ್ಯೂಟ್ ಮುಖ್ಯಸ್ಥ 


100 ದಿನಗಳ ಕೊರೋನಾ ಕರ್ತವ್ಯ ಪೂರೈಸುವ ವೈದ್ಯಕೀಯ ಸಿಬ್ಬಂದಿಗೆ ಪ್ರಧಾನಿ ಮೋದಿಯವರಿಂದ  'ವಿಶೇಷ ಕೋವಿಡ್ ರಾಷ್ಟ್ರೀಯ ಸೇವಾ ಸಮ್ಮಾನ್ ಪತ್ರ'(Covid National Service Samman) ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ : Viral Video : ಕರೋನಾ ಕಾಲದಲ್ಲಿ ಹೀಗೂ ಆಯಿತು ಮದುವೆ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.