ಬೆಲೆ ಏರಿಕೆಗೆ ಕೇಂದ್ರ ವಿತ್ತ ಸಚಿವರೇ ಹೊಣೆ.. ಸರ್ಕಾರಕ್ಕೆ ಅರ್ಥಶಾಸ್ತ್ರ ಅರ್ಥವಾಗುತ್ತಿಲ್ಲ: ಸುಬ್ರಮಣಿಯನ್ ಸ್ವಾಮಿ

Subramanian Swamy: ದೇಶದ ಬೆಲೆ ಏರಿಕೆಗೆ ಕೇಂದ್ರ ಹಣಕಾಸು ಸಚಿವರೇ ಹೊಣೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದರು.

Edited by - Zee Kannada News Desk | Last Updated : Dec 14, 2021, 10:13 AM IST
  • ದೇಶದ ಬೆಲೆ ಏರಿಕೆಗೆ ಕೇಂದ್ರ ಹಣಕಾಸು ಸಚಿವರೇ ಹೊಣೆ
  • ಪ್ರಧಾನಿ ಮತ್ತು ವಿತ್ತ ಸಚಿವರಿಗೆ ಅರ್ಥಶಾಸ್ತ್ರ ತಿಳಿದಿಲ್ಲ
  • ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿಕೆ
ಬೆಲೆ ಏರಿಕೆಗೆ ಕೇಂದ್ರ  ವಿತ್ತ ಸಚಿವರೇ ಹೊಣೆ.. ಸರ್ಕಾರಕ್ಕೆ ಅರ್ಥಶಾಸ್ತ್ರ ಅರ್ಥವಾಗುತ್ತಿಲ್ಲ:  ಸುಬ್ರಮಣಿಯನ್ ಸ್ವಾಮಿ title=
ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

ಮಥುರಾ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ (BJP MP Subramanian Swamy) ಸೋಮವಾರ ಕೇಂದ್ರದ ತಮ್ಮ ಪಕ್ಷದ ಸರ್ಕಾರವನ್ನು ಟೀಕಿಸಿದ್ದು, ಪ್ರಧಾನಿ ಮತ್ತು  ಹಣಕಾಸು ಸಚಿವರಿಗೆ ಅರ್ಥಶಾಸ್ತ್ರ ತಿಳಿದಿಲ್ಲ ಎಂದು ಹೇಳಿದ್ದಾರೆ.

ದೇಶದ ಬೆಲೆ ಏರಿಕೆಗೆ ಕೇಂದ್ರ ಹಣಕಾಸು ಸಚಿವರೇ ಹೊಣೆ. ಸರ್ಕಾರಕ್ಕೆ ಅರ್ಥಶಾಸ್ತ್ರ (Economics)ಅರ್ಥವಾಗುತ್ತಿಲ್ಲ, ಪ್ರಧಾನಿ ಅಥವಾ ಹಣಕಾಸು ಸಚಿವರಿಗೆ ಅದರ ಬಗ್ಗೆ ತಿಳಿದಿಲ್ಲ. ಬೆಳವಣಿಗೆ ದರ (Growth Rate) ಕುಸಿದಿದ್ದರೂ ಏನು ಮಾಡಬೇಕೆಂದು ತಿಳಿಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಕೆಲವು ಹಿಂದೂ ಸಂಘಟನೆಗಳ ಪ್ರಕಾರ ಈಗ ಮಸೀದಿಗಳು ಇರುವ ಸ್ಥಳಗಳಲ್ಲಿ ಹಿಂದೂ ದೇವಾಲಯಗಳು ಇದ್ದವು, 'ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ, 1991 ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಮೊಕದ್ದಮೆಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ' ಎಂದು ಹೇಳಿದರು.

1991ರ ಕಾಯ್ದೆಯ ಪ್ರಕಾರ ಧಾರ್ಮಿಕ ಸ್ಥಳಗಳನ್ನು ಹಿಂಪಡೆಯಲು ಅಥವಾ ಸ್ವರೂಪದಲ್ಲಿ ಬದಲಾವಣೆ ಮಾಡಲು ಮೊಕದ್ದಮೆಯನ್ನು ಸಲ್ಲಿಸುವುದಕ್ಕೆ ಅವಕಾಶವಿಲ್ಲ. 

ಆಗಸ್ಟ್ 15, 1947 ರಿಂದ ಚಾಲ್ತಿಯಲ್ಲಿದ್ದ ಸ್ವರೂಪದಲ್ಲೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಾಯ್ದೆ ಹೇಳುತ್ತದೆ. ಆರಾಧನೆಯ ಸ್ಥಳವನ್ನು ಹಿಂಪಡೆಯಲು ಅಥವಾ ಅದರ ಸ್ವರೂಪದಲ್ಲಿ ಬದಲಾವಣೆಯನ್ನು ಪಡೆಯಲು ಮೊಕದ್ದಮೆಯನ್ನು ದಾಖಲಿಸುವುದನ್ನು ಕಾಯಿದೆಯು ನಿಷೇಧಿಸುತ್ತದೆ. ಕೆಲವು ಹಿಂದುತ್ವ ಗುಂಪುಗಳು ಕಾಶಿ–ಮಥುರಾದ ಧಾರ್ಮಿಕ ಸ್ಥಳಗಳನ್ನು ಹಿಂದೂಗಳಿಗೆ ನೀಡಬೇಕು ಎಂದು ಒತ್ತಾಯಿಸಿವೆ.

ಗಡಿ ವಿಚಾರದಲ್ಲಿ ಚೀನಾದೊಂದಿಗೆ ಸರ್ಕಾರ ವ್ಯವಹರಿಸಿದ ರೀತಿ ತನಗೆ ತೃಪ್ತಿ ತಂದಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ (Subramanian Swamy) ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಪ್ರೋಟೋಕಾಲ್‌ ಬಿಟ್ಟು ರಾತ್ರಿ ಕಾಶಿ ತಪಾಸಣೆಗೆ ಹೊರಟ ಪ್ರಧಾನಿ, ರೈಲ್ವೆ ನಿಲ್ದಾಣಕ್ಕೂ ಭೇಟಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News