ಹೈದರಾಬಾದ್: ತೆಲಂಗಾಣ(Telangana)ದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ನವವಿವಾಹಿತ ವಧು ಸೇರಿದಂತೆ ಕನಿಷ್ಠ 7 ಜನರು ಕೊಚ್ಚಿ ಹೋಗಿದ್ದು, ದುರಂತ ಅಂತ್ಯ ಕಂಡಿದ್ದಾರೆ. ವಿಕಾರಾಬಾದಿನಲ್ಲಿ ನವವಿವಾಹಿತರಾದ ಪ್ರವಳಿಕಾ ಮತ್ತು ನವಾಜ್ ರೆಡ್ಡಿ ವಿವಾಹ ಸಮಾರಂಭವನ್ನು ಮುಗಿಸಿಕೊಂಡು ಇತರ ನಾಲ್ವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಪ್ರವಾಹದ ಅಲೆಗೆ ಸಿಲುಕಿ ನವ ವಧು ಪ್ರವಳಿಕಾ , ಆವರ ಅಣ್ಣನ ಹೆಂಡತಿ ಮತ್ತು ಅವರ ಪುತ್ರ ತ್ರಿನಾಥ ರೆಡ್ಡಿ(8) ನೀರಿನಲ್ಲಿ ಕೊಂಚಿಕೊಂಡು ಹೋಗಿದ್ದಾರೆ. ಈ ಪೈಕಿ ಬಾಲಕನ ಶವ ಇನ್ನೂ ಪತ್ತೆಯಾಗಿಲ್ಲವೆಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಹೈದರಾಬಾದ್(Hyderabad), ತೆಲಂಗಾಣ ಸೇರಿದಂತೆ ಅನೇಕ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವರುಣನ ಆರ್ಭಟಕ್ಕೆ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿದೆ. ಭಾರೀ ಮಳೆಯ ಹೊಡೆತಕ್ಕೆ ಸಿಲುಕಿದ್ದ ಸ್ಟಾಫ್ಟ್ ವೇರ್ ಇಂಜಿನಿಯರ್ ವೊಬ್ಬರ ಶವ ಭಾನುವಾರ ರಾತ್ರಿ ವಾರಂಗಲ್ ನ ಚರಂಡಿಯಲ್ಲಿ ಪತ್ತೆಯಾಗಿದೆ. ಸಾವನ್ನಪ್ಪಿದ ಟೆಕ್ಕಿಯನ್ನು ಶಿವನಗರದ ವೊರೊಮ್ ಕ್ರಾಂತಿ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಬಳಿ ಇದ್ದ ಲ್ಯಾಪ್‌ಟಾಪ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: UP: ಈ ನಗರದಲ್ಲಿ ಇನ್ನು ಮಾಂಸಾಹಾರ ಮದ್ಯ ಮಾರಾಟ ನಿಷೇಧ, ಸಿಎಂ ಯೋಗಿ ಆದೇಶ


ಶಂಕರಪಲ್ಲಿಯಲ್ಲಿ ಕಾರಿನಲ್ಲಿದ್ದ 70 ವರ್ಷದ ವೃದ್ಧರೊಬ್ಬರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋದ ಬಗ್ಗೆ ವರದಿಯಾಗಿದೆ. ಆದಿಲಾಬಾದ್‌ನಲ್ಲಿ 30 ವರ್ಷದ ಕಾರ್ಮಿಕ ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಯಾದಾದ್ರಿ ಭೋಂಗೀರ್ ಜಿಲ್ಲೆಯಲ್ಲಿ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವತಿಯರು ಕೂಡ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ರಾಜಣ್ಣ-ಸಿರ್ಸಿಲ್ಲಾ ಜಿಲ್ಲೆ(Rajanna-Sircilla district)ಯಲ್ಲಿ ಹರಿಯುವ ನೀರಿನಲ್ಲಿ ವಾಹನ ಸಿಲುಕಿಕೊಂಡಿದ್ದರಿಂದ ರಾಜ್ಯ ಸಾರಿಗೆ ಬಸ್ಸಿನಲ್ಲಿದ್ದ 12 ಪ್ರಯಾಣಿಕರನ್ನು ರಕ್ಷಿಸಲಾಗಿದೆ.


ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ವಿಕಾರಾಬಾದ್, ರಂಗ ರೆಡ್ಡಿ ಮತ್ತು ಸಿದ್ದಿಪೇಟೆಯಲ್ಲಿ ಭಾರೀ ಮಳೆ(Heavy Rain)ಯಾಗಿದೆ. ಹೈದರಾಬಾದ್, ಆದಿಲಾಬಾದ್, ನಿಜಾಮಾಬಾದ್, ಕರೀಂನಗರ, ವಾರಂಗಲ್ ಮತ್ತು ಖಮ್ಮಂನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ನಿಮ್ಮ ಬಳಿಯೂ ಇದ್ದರೆ MIಯ ಈ ಫೋನ್ , ಕಂಪನಿ ವಾಪಸ್ ನೀಡಲಿದೆ ಫುಲ್ ಅಮೌಂಟ್


ತೆಲಂಗಾಣ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಪೋಲಿಸ್ ಮಹಾನಿರ್ದೇಶಕರು (ಡಿಜಿಪಿ) ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ. ಜಿಲ್ಲಾಧಿಕಾರಿಗಳು, ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ಕ್ಷೇತ್ರ ಸಿಬ್ಬಂದಿಗಳು ಹೈ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ. ಕೃಷ್ಣಾ ಮತ್ತು ಗೋದಾವರಿ ನದಿಗಳ ನೀರಾವರಿ ಯೋಜನೆಗಳು ಸ್ಥಿರವಾದ ಒಳಹರಿವು ಹೊಂದಿದ್ದು, ಈ ಬಗ್ಗೆ ಮೇಲ್ವಿಚಾರಣೆ ನಡೆಸಲಾಗುತ್ತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.