New Government In Bihar: ನಾಳೆ ಬಿಹಾರದಲ್ಲಿ ಮಹಾಮೈತ್ರಿಕೂಟದ ಹೊಸ ಸರ್ಕಾರ ರಚನೆ, ಮಧ್ಯಾಹ್ನ 2 ಗಂಟೆಗೆ ಪ್ರಮಾಣವಚನ ಸಮಾರಂಭ!
Bihar New Government Formation: ಬಿಹಾರದಲ್ಲಿ ಹೊರ ಸರ್ಕಾರದ ಪ್ರಮಾಣವಚನ ಸಮಾರಂಭ ಯಾವಾಗ ನಡೆಯಲಿದೆ ಎಂಬುದರ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ.
Bihar Politics: ಬಿಹಾರದಲ್ಲಿ ಮಹಾಮೈತ್ರಿಕೂಟದ ಹೊಸ ಸರ್ಕಾರ ನಾಳೆ ಅಂದರೆ ಬುಧವಾರ ಮಧ್ಯಾಹ್ನ 2 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದೆ. ಮೂಲಗಳ ಪ್ರಕಾರ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಮಂಗಳವಾರ, ನಿತೀಶ್ ಕುಮಾರ್ ಅವರು ತೇಜಸ್ವಿ ಯಾದವ್ ಮತ್ತು ಮಹಾಮೈತ್ರಿಕೂಟದ ನಾಯಕರು ಬಿಹಾರದಲ್ಲಿ ಹೊಸ ಸರ್ಕಾರ ರಚನೆಯ ಕುರಿತು ಹಕ್ಕು ಮಂಡಿಸಿದ್ದಾರೆ. ರಾಜ್ಯಪಾಲರಿಗೆ ಸಲ್ಲಿಸಿರುವ ಪತ್ರದಲ್ಲಿ ಒಟ್ಟು 164 ಶಾಸಕರ ಬೆಂಬಲವಿದೆ ಎಂದು ಮೈತ್ರಿಕೂಟದ ಮುಖಂಡರು ಹೇಳಿಕೊಂಡಿದ್ದಾರೆ. ಇದರಲ್ಲಿ ಒಟ್ಟು ಏಳು ಪಕ್ಷಗಳ ಶಾಸಕರು ಶಾಮೀಲಾಗಲಿದ್ದಾರೆ. ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಂತರ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ್ದಾರೆ. ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ನಿತೀಶ್ ಕುಮಾರ್, "ನಾನು ರಾಜ್ಯಪಾಲರನ್ನು ಭೇಟಿ ಮಾಡಲು ಬಂದಿದ್ದೇನೆ ಮತ್ತು ಬಿಹಾರಕ್ಕೆ ಸೇವೆ ಸಲ್ಲಿಸುವುದು ನಮ್ಮ ಅಜೆಂಡಾ ಆಗಿರುವ ಕಾರಣ ರಾಜೀನಾಮೆ ನೀಡಿದ್ದೇನೆ. ನಮಗೆ ಒಟ್ಟು ಏಳು ಪಕ್ಷಗಳ ಬೆಂಬಲವಿದೆ. ಇದರಲ್ಲಿ ಎಡ ಮತ್ತು ಜಿತನ್ ರಾಮ್ ಮಾಂಝಿ ಅವರ ಪಕ್ಷವೂ ಶಾಮೀಲಾಗಿದೆ" ಎಂದು ಹೇಳಿದ್ದಾರೆ. ನಿತೀಶ್ ಕುಮಾರ್ ಅವರು ಆರ್‌ಸಿಪಿ ಸಿಂಗ್ ಹೆಸರನ್ನೂ ಉಲ್ಲೇಖಿಸದೆ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ-Nitish Kumar Resigns : ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಬಿಹಾರ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್!
ಇನ್ನೊಂದೆಡೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ತೇಜಸ್ವಿ ಯಾದವ್, "ಬಿಜೆಪಿಗೆ ಯಾವುದೇ ಮೈತ್ರಿಕೂಟವಿಲ್ಲ, ತಾನು ಮೈತ್ರಿ ಮಾಡಿಕೊಂಡಿರುವ ಪಕ್ಷಗಳನ್ನು ಬಿಜೆಪಿ ನಾಶಪಡಿಸುತ್ತದೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಪಂಜಾಬ್ ಮತ್ತು ಮಹಾರಾಷ್ಟ್ರದಲ್ಲಿ ಏನಾಯಿತು ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ. ಬಿಹಾರದಲ್ಲಿ ಏನಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದೇ ಇದೆ. ಜನರಿಗೆ ಪರ್ಯಾಯ ಬೇಕು, ಬಿಹಾರಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿಲ್ಲ. ಈ ಹಿನ್ನೆಲೆ ನಿತೀಶ್ ಕುಮಾರ್ ಅವರು ತಮ್ಮ ಕೆಲಸ ಮಾಡಿದ್ದಾರೆ, ತಮ್ಮ ಈ ಬೇಡಿಕೆಯನ್ನು ಪ್ರಧಾನಿ ಮುಂದೆ ಇಟ್ಟಿದ್ದಾರೆ. ಆದರೆ ಅವರ ಬೇಡಿಕೆಗೆ ಇದುವರೆಗೂ ಅಂಗೀಕಾರ ದೊರೆತಿಲ್ಲ, ಮಹಾ ಮೈತ್ರಿಕೂಟದ ಎಲ್ಲಾ ಪಕ್ಷಗಳು ಮತ್ತು ಸದಸ್ಯರು ತಮ್ಮ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಒಪ್ಪಿಕೊಂಡಿದ್ದಾರೆ" ಎಂದು ಹೇಳಿದ್ದಾರೆ.
ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿ?
ಈ ಪ್ರಶ್ನೆಗೆ ಉತ್ತರಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಸ್ತುತ ನಿತೀಶ್ ಕುಮಾರ್ ದೇಶದ ಅತ್ಯಂತ ಅನುಭವಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಈ ದೇಶದ ಸಂವಿಧಾನವನ್ನು ಉಳಿಸಬೇಕು. ದೇಶದ ವಾತಾವರಣವನ್ನು ಹಾಳು ಮಾಡಲಾಗುತ್ತಿದೆ ಎಂದು ತೇಜಸ್ವಿ ಆರೋಪಿಸಿದ್ದಾರೆ. ನಿತೀಶ್ ಕುಮಾರ್ ನಿರ್ಭಯವಾಗಿ ನಿರ್ಧಾರ ಕೈಗೊಂಡಿದ್ದಾರೆ. ಬಿಹಾರದಲ್ಲಿ ಬಿಜೆಪಿಯ ಅಜೆಂಡಾ ನಡೆಸಲು ನಾವು ಬಿಡುವುದಿಲ್ಲ. ಇದು ಅವರ ಸ್ವಂತ ಲಾಭವಲ್ಲ, ಆದರೆ ಬಿಹಾರದ ಜನರಿಗಾಗಿ ಅವರು ಈ ಹೆಜ್ಜೆಯನ್ನು ಇಟ್ಟಿದ್ದಾರೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.
ಇದನ್ನೂ ನೋಡಿ-
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.