ನವದೆಹಲಿ: ದೆಹಲಿ-ಇಂಫಾಲ್ ಮಾರ್ಗವಾಗಿ ಚಲಿಸುತ್ತಿದ್ದ ಏರ್ ಏಷ್ಯಾ ವಿಮಾನದಲ್ಲಿ ಬುಧವಾರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ವಿಮಾನದ ಶೌಚಾಲಯದಲ್ಲಿ ಶಿಶು ಮೃತದೇಹ ಪತ್ತೆಯಾಗಿದ್ದಾಗಿ ವಿಮಾನ ಸಿಬ್ಬಂದಿ ತಿಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ ಆ ಮಗುವಿನ ಬಾಯಿಗೆ ಟಾಯ್ಲೆಟ್ ಕಾಗದವನ್ನು ತುರುಕಲಾಗಿತ್ತು ಎನ್ನಲಾಗಿದೆ.
ಇದೇ ವಿಮಾನದಲ್ಲಿ ಚಲಿಸುತ್ತಿದ್ದ ಆ ಮಗುವಿನ ತಾಯಿ ಯಾರೆಂಬುದು ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕ ವರದಿಗಳ ಪ್ರಕಾರ ಇಂಫಾಲ ಮೂಲದ ಅಪ್ರಾಪ್ತೆ ಎಂದು ತಿಳಿದುಬಂದಿದೆ. ಅಲ್ಲದೆ, ವಿಮಾನದಲ್ಲಿಯೇ ಹೆರಿಗೆಯಾಗಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ದೆಹಲಿ ಪೋಲಿಸ್ ಮತ್ತು ವಿಮಾನ ನಿಲ್ದಾಣ ಭದ್ರತಾ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.