Kangana Ranaut: ನೂತನ ಚುನಾಯಿತ ಸಂಸದೆ ಮತ್ತು ನಟಿ ಕಂಗನಾ ರನೌತ್’ಗೆ ಚಂಡೀಗಢದ ಏಪ್ರೋಟ್‌’ನಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುತ್ತಿದ್ದಾಗ ಕುಲ್ವಿಂದರ್ ಕೌರ್ ಎಂಬ ಮಹಿಳಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ಎಬಿಪಿ ನ್ಯೂಸ್‌’ನ ವರದಿಯ ಪ್ರಕಾರ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಟಿ ಒತ್ತಾಯಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಸಾವಿರ ಕೋಟಿ ಸಾಮ್ರಾಜ್ಯದ ಒಡೆಯ ವಿರಾಟ್ ಕೊಹ್ಲಿ ವಿದ್ಯಾರ್ಹತೆ ಏನು ಗೊತ್ತಾ? ತಿಳಿದರೆ ದಂಗಾಗೋದು ಖಂಡಿತ


ಇತ್ತೀಚೆಗೆ ನಡೆದ 2024ರ ಲೋಕಸಭಾ ಚುನಾವಣೆಯಲ್ಲಿ ಕಂಗನಾ ರನೌತ್ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮಂಡಿ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.


ಘಟನೆಗೂ ಮುನ್ನ ಕಂಗನಾ ತನ್ನ ಇನ್‌ಸ್ಟಾಗ್ರಾಂನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ತಾನು ದೆಹಲಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ಸಚಿವರ ಜೊತೆಗೆ ಮುಖ್ಯಮಂತ್ರಿಯೂ ರಾಜೀನಾಮೆ ನೀಡಲಿ: ಅಶೋಕ್


2021 ರಲ್ಲಿ ನಡೆದ ರೈತರ ಪ್ರತಿಭಟನೆಯ ಕುರಿತು ಕಂಗನಾ ಈ ಹಿಂದೆ ಮಾಡಿದ್ದ ಕಾಮೆಂಟ್‌’ಗಳಿಂದ ಸಿಟ್ಟಾದ ಸಿಐಎಸ್‌ಎಫ್ ಸಿಬ್ಬಂದಿ, ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.