Gas Leak Incident: ಲುಧಿಯಾನಾದಲ್ಲಿ ಗ್ಯಾಸ್ ಸೋರಿಕೆಯಿಂದ ದುರ್ಘಟನೆ, 9 ಸಾವು 10 ಜನರಿಗೆ ಗಾಯ
Punjab Gas Leak Incident: ಲೂಧಿಯಾನದಲ್ಲಿ ಅನಿಲ ಸೋರಿಕೆಯಿಂದ ಭಾರಿ ಆತಂಕ ಸೃಷ್ಟಿಯಾಗಿದೆ. ಈ ಅವಘಡದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಅನೇಕ ಜನರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Gas Leak: ಪಂಜಾಬ್‌ನ ಲುಧಿಯಾನದಲ್ಲಿ ಅನಿಲ ಸೋರಿಕೆಯಿಂದ ಭಾರೀ ಅವಘಡ ಸಂಭವಿಸಿದೆ. ಲೂಧಿಯಾನದ ಗ್ಯಾಸ್ ಪುರದಲ್ಲಿ ಅನಿಲ ಸೋರಿಕೆಯಾಗಿದ್ದು, ಅದರ ಹಿಡಿತದಿಂದ 9 ಜನರು ಸಾವನ್ನಪ್ಪಿದ್ದಾರೆ. ಇದಲ್ಲದೇ ಅನಿಲ ಸೋರಿಕೆಯಿಂದ 10 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ತಿಳಿದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಇಡೀ ಪ್ರದೇಶವನ್ನು ಸೀಲ್ ಮಾಡಿದೆ. ಇದಲ್ಲದೇ ಅಗ್ನಿಶಾಮಕ ದಳದ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ದುರಂತದ ಬಳಿಕ ಈ 9 ಸಾವಿಗೆ ಹೊಣೆ ಯಾರು ಎಂಬ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಯಾರ ನಿರ್ಲಕ್ಷ್ಯದಿಂದ ಗ್ಯಾಸ್ ಸೋರಿಕೆಯಾಗಿದೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
New Rule: ಹೆಡ್ ಫೋನ್ ಇಲ್ಲದೆ ವಿಡಿಯೋ ನೋಡಿದ್ರೆ ರೂ.5000 ದಂಡ! ಈ ವಾರದಿಂದ ಹೊಸ ನಿಯಮ ಜಾರಿ
10 ಜನರ ಸ್ಥಿತಿ ಚಿಂತಾಜನಕವಾಗಿದೆ
ಪ್ರಸ್ತುತ ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದ್ದು, ಸ್ಥಳೀಯ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗ್ಯಾಸ್ ಪೀಡಿತರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
9 ಜನರ ಸಾವಿನಿಂದ ಕಂಬನಿ ಮಿಡಿದಿದೆ
ಗ್ಯಾಸ್ ಸೋರಿಕೆಯಾಗಿ 9 ಮಂದಿ ಪ್ರಾಣ ಕಳೆದುಕೊಂಡಿರುವ ಕಾರಣ ಪ್ರದೇಶದಲ್ಲಿ ಭಾರಿ ಆತಂಕ ಸೃಷ್ಟಿಯಾಗಿದೆ. ಈ ಘಟನೆ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದೆ. ಕೆಲವರು ಪ್ರಾಣ ಉಳಿಸಿಕೊಳ್ಳಲು ಮನೆ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಬೇರೆ ಕಡೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ