ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿ ಹಾಗೂ ಆತನ ಆಪ್ತ ಸಹಾಯಕ ಸುಭಾಷ್ ಶಂಕರ್ ಎಂಬಾತ ಭಾರತ ಬಿಟ್ಟು ಪರಾರಿಯಾಗಿದ್ದರು. ಆ ಬಳಿಕ ಸುಭಾಷ್‌ನನ್ನು ಈಜಿಪ್ಟ್‌ನಿಂದ ಮುಂಬೈಗೆ ಗಡಿಪಾರು ಮಾಡಲಾಗಿತ್ತು. ಸದ್ಯ ಆತನನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: ಮೊದಲ ಭಾಷಣದಲ್ಲೇ ಕಾಶ್ಮೀರ ವಿಚಾರ ಪ್ರಸ್ತಾಪ: ಪಾಕ್‌ ನೂತನ ಪಿಎಂಗೆ ಮೋದಿ ತಿರುಗೇಟು


ಈ ಹಿಂದೆ ಸುಭಾಷ್ ಶಂಕರ್‌ನನ್ನು ಈಜಿಪ್ಟ್‌ನಿಂದ ಮುಂಬೈಗೆ ಗಡಿಪಾರು ಮಾಡಲಾಗಿತ್ತು. ಶಂಕರ್, ನೀರವ್ ಮೋದಿ ಕಂಪನಿಯಲ್ಲಿ ಡಿಜಿಎಂ ಫೈನಾನ್ಸರ್‌ ಆಗಿ ಕಾರ್ಯ ನಿರ್ವಹಿಸಿದ್ದು,  ಆತನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು. ಪಿಎನ್‌ಬಿಯ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿತ್ತು. 


ಇದೀಗ ಸುಭಾಷ್ ಶಂಕರ್‌ನನ್ನು ಬಂಧಿಸಲಾಗಿದ್ದು, ಆತನನ್ನು ಮುಂಬೈ ನ್ಯಾಯಾಲಯದ ಮುಂದೆ ಹಾಜರುಪಡಿಸುತ್ತೇವೆ. ನಂತರ ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ ಎಂದು ಸಿಬಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 


ಇದನ್ನು ಓದಿ: "ಲಹರಿ" ಗೆ 48 ವರ್ಷ: ರಿಕ್ಕಿಕೇಜ್‌ಗೆ ಗ್ರ್ಯಾಮಿ ಬಂದ ಹರ್ಷ


ಶಂಕರ್ ವಿರುದ್ಧ ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ವಂಚನೆ, ಅಪ್ರಾಮಾಣಿಕವಾಗಿ ಆಸ್ತಿ ವಿತರಣೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲಂಘನೆಯ ಆರೋಪಗಳು ದಾಖಲಾಗಿವೆ. ಸಿಬಿಐ ಈಗಾಗಲೇ ನಾಲ್ಕು ವರ್ಷಗಳ ಹಿಂದೆ ಆತನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಇಂಟರ್​ಪೋಲ್,​ ಸುಭಾಷ್ ಶಂಕರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ. 


ಜೆ.ಸಿ. ಜಗ್ದಾಳೆ ಅವರಿದ್ದ ಸಿಬಿಐ ವಿಶೇಷ ನ್ಯಾಯಾಲಯ ಸುಭಾಷ್ ಬಂಧನಕ್ಕೆ ವಾರಂಟ್ ಕೂಡ ಹೊರಡಿಸಿತ್ತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ..