ನವದೆಹಲಿ:ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ದೊಶಿಯಾಗಿರುವ ಮುಕೇಶ್ ಸಿಂಗ್ ನನ್ನು ಗಲ್ಲಿಗೇರಿಸಲು ಎಲ್ಲ ಅಡೆತಡೆಗಳು ದೂರಾಗಿವೆ. ಹೌದು, ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಮುಕೇಶ್ ದಾಖಲಿಸಿದ್ದ ಕ್ಷಮಾ ದಾನದ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಇದಕ್ಕೂ ಮೊದಲು ಈ ಕುರಿತು ರಾಷ್ಟ್ರಪತಿಗಳಿಗೆ ಪತ್ರ ರವಾನಿಸಿದ್ದ ಕೇಂದ್ರ ಗೃಹ ಸಚಿವಾಲಯ ಮುಕೇಶ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದರು. ಗೃಹ ಸಚಿವಾಲಯ ರವಾನಿಸಿದ್ದ ಪತ್ರಕ್ಕೆ ರಾಷ್ಟ್ರಪತಿಗಳು ತಮ್ಮ ಅಂಕಿತ ಹಾಕಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು , ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ದೋಷಿಯಾಗಿರುವ ನಾಲ್ವರು ಆರೋಪಿಗಳಲ್ಲಿ ಒಬ್ಬನಾಗಿರುವ ಮುಕೇಶ್ ಸಿಂಗ್, ಕೆಲ ದಿನಗಳ ಹಿಂದೆಯಷ್ಟೇ ರಾಷ್ಟ್ರಪತಿಗಳ ಬಳಿ ಕ್ಷಮಾದಾನ ಅರ್ಜಿ ದಾಖಲಿಸಿದ್ದನು.
ಅವನ ಈ ಅರ್ಜಿಯನ್ನು ಇಂದೇ ರಾಷ್ಟ್ರಪತಿಗಳ ಬಳಿ ರವಾನಿಸಿದ್ದ ಕೇಂದ್ರ ಗೃಹ ಸಚಿವಾಲಯ, ಅರ್ಜಿಯನ್ನು ತಿರಸ್ಕರಿಸಿದ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರ ನಿಲುವನ್ನು ಸಮರ್ಥಿಸಿತ್ತು. ಗುರುವಾರ ಮುಕೇಶ್ ಸಿಂಗ್ ಅವನ ಕ್ಷಮಾದಾನದ ಅರ್ಜಿಯನ್ನು ತಿರಸ್ಕರಿಸಿದ್ದ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗೃಹ ಸಚಿವಾಲಯಕ್ಕೆ ಅರ್ಜಿಯನ್ನು ಕಳುಹಿಸಿಕೊಟ್ಟಿತ್ತು. ಇದಕ್ಕೂ ಒಂದು ದಿನ ಮೊದಲು ಮುಕೇಶ್ ಸಿಂಗ್ ಕ್ಷಮಾದಾನದ ಅರ್ಜಿಯನ್ನು ತಿರಸ್ಕರಿಸಿದ್ದ ದೆಹಲಿ ಸರ್ಕಾರ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಅರ್ಜಿ ರವಾನಿಸಿತ್ತು.
ದೆಹಲಿಯ ಪಟಿಯಾಲಾ ಹೌಸ್ ನ್ಯಾಯಾಲಯ ಪ್ರಕರಣದ ನಾಲ್ವರು ಆರೋಪಿಗಳಾಗಿದ್ದ ಮುಕೇಶ್ ಸಿಂಗ್(32), ವಿನಯ್ ಶರ್ಮಾ(26), ಅಕ್ಷಯ್ ಕುಮಾರ್ ಸಿಂಗ್(31) ಹಾಗೂ ಪವನ್ ಗುಪ್ತಾ(25) ವಿರುದ್ಧ ಈಗಾಗಲೇ ಡೆತ್ ವಾರೆಂಟ್ ಹೊರಡಿಸಿದ್ದು, ಜನವರಿ 22ರಂದು ಬೆಳಗ್ಗೆ 7ಗಂಟೆಗೆ ದೆಹಲಿಯ ತಿಹಾರ್ ಜೈಲಿನಲ್ಲಿ ಈ ನಾಲ್ವರು ಅಪರಾಧಿಗಳಿಗೆ ಗಲ್ಲಿಗೇರಿಸಲಾಗುತ್ತಿದೆ.