TN Banned Ram Mandir Inauguration live : ತಮಿಳುನಾಡು ಸರ್ಕಾರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಗಳ ನೇರ ಪ್ರಸಾರವನ್ನು ನಿಷೇಧಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಆರೋಪಿಸಿದ್ದಾರೆ. ಈ ಕುರಿತು ಟ್ಟೀಟ್‌ ಮಾಡಿರುವ ಅವರು, ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 


COMMERCIAL BREAK
SCROLL TO CONTINUE READING

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕೇಂದ್ರ ವಿತ್ತ ಸಚಿವೆ, ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನೀಲವರ್ಣ ಶ್ರೀರಾಮನ ಮೂರ್ತಿ ಕಪ್ಪಾಗಿರಲು ಕಾಣರವೇನು ಗೊತ್ತೆ..? ಅದರ ವಿಶೇಷತೆ ಇಲ್ಲಿದೆ


ಅಲ್ಲದೆ, ತಮಿಳುನಾಡಿನಲ್ಲಿ ಶ್ರೀರಾಮನಿಗೆ 200 ಕ್ಕೂ ಹೆಚ್ಚು ದೇವಾಲಯಗಳಿದ್ದು, ಅಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ, ಭಜನೆ, ಪ್ರಸಾದ, ಅನ್ನದಾನವನ್ನು ಅನುಮತಿಸುತ್ತಿಲ್ಲ. ಖಾಸಗಿ ದೇವಸ್ಥಾನಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಪೊಲೀಸರು ತಡೆಯುತ್ತಿದ್ದಾರೆ. ಪಂಗಡಗಳನ್ನು ಕಿತ್ತು ಹಾಕುತ್ತೇವೆ ಎಂದು ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೂ ವಿರೋಧಿ, ಇಂತಹ ದ್ವೇಷಪೂರಿತ ಕ್ರಮವನ್ನು ಖಂಡಿಸುತ್ತೇನೆ.. ಎಂದು ಕಿಡಿಕಾರಿದ್ದಾರೆ.


ಇನ್ನು ನೇರ ಪ್ರಸಾರದ ಸಮಯದಲ್ಲಿ ವಿದ್ಯುತ್ ಕಡಿತವಾಗುವ ಸಾಧ್ಯತೆಯಿದೆ ಎಂದು ಕೇಬಲ್ ಟಿವಿ ಆಪರೇಟರ್‌ಗಳಿಗೆ ತಿಳಿಸಲಾಗಿದೆಯಂತೆ. ಇದು INDI ಮೈತ್ರಿಕೂಟದ ಪ್ರಮುಖ ಪಾಲುದಾರ ಡಿಎಂಕೆಯಿಂದ "ಹಿಂದೂ ವಿರೋಧಿ ನಡೆ". ಲೈವ್ ಟೆಲಿಕಾಸ್ಟ್ ನಿಷೇಧವನ್ನು ಸಮರ್ಥಿಸಿಕೊಳ್ಳಲು ತಮಿಳುನಾಡು ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಅಂತ ಅನಧಿಕೃತವಾಗಿ ಹೇಳಿಕೊಳ್ಳುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವರು ಆರೋಪಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.