ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂದಿನ ಫೆಬ್ರುವರಿ 1 ರಂದು 2022 -23 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.


COMMERCIAL BREAK
SCROLL TO CONTINUE READING

ಜನವರಿ 31ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅದೇ ದಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು.ಜನವರಿ 31 ರಂದು ಉಭಯ ಸದನಗಳ ಜಂಟಿ ಅಧಿವೇಶನದೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಅಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.


ಇದನ್ನೂ ಓದಿ: ರಾತ್ರಿ 10 ಗಂಟೆಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಬ್ರೇಕ್


ಸಂಸತ್ತಿನ ಸಂಪುಟ ವ್ಯವಹಾರಗಳ ಸಮಿತಿ (ಸಿಸಿಪಿಎ) ಬಜೆಟ್ ಅಧಿವೇಶನದ ಭಾಗ 1 ಅನ್ನು ಜನವರಿ 31 ರಿಂದ ಫೆಬ್ರವರಿ 11 ರವರೆಗೆ ನಡೆಸಲಾಗುವುದು ಎಂದು ಶಿಫಾರಸು ಮಾಡಿದೆ, ಆದರೆ ಬಜೆಟ್ ಅಧಿವೇಶನದ ಭಾಗ 2 ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.


ಪಂಚರಾಜ್ಯಗಳ ಚುನಾವಣೆಯು ನಡೆಯುತ್ತಿರುವ ಈ ಸಮಯದಲ್ಲಿ ಮಂಡನೆಯಾಗುತ್ತಿರುವ ಬಜೆಟ್ ಮೇಲೆ ಇಡೀ ದೇಶದ ಕಣ್ಣು ನೆಟ್ಟಿದೆ, ನಿರ್ಮಲಾ ಸೀತಾರಾಮನ್‌ ಅವರ ಈ ಬಾರಿಯ ಬಜೆಟ್ ಕರೋನಾದಿಂದ ಈಗ ತಾನೇ ಸುಧಾರಣೆಯೆಡೆಗೆ ಸಾಗುತ್ತಿರುವ ದೇಶದ ಆರ್ಥಿಕತೆಯನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದೆ.


Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.