close

News WrapGet Handpicked Stories from our editors directly to your mailbox

ಮಕ್ಕಳಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಎನ್ಐಟಿ ಪ್ರೊಫೆಸರ್ ಹಾಗೂ ಪತ್ನಿ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿನ ಸಹಾಯಕ ಪ್ರಾಧ್ಯಾಪಕ ಮತ್ತು ಅವರ ಪತ್ನಿ ಒಡಿಶಾದ ರೂರ್ಕೆಲಾದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Updated: Aug 18, 2019 , 03:44 PM IST
ಮಕ್ಕಳಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಎನ್ಐಟಿ ಪ್ರೊಫೆಸರ್ ಹಾಗೂ ಪತ್ನಿ
ಸಾಂದರ್ಭಿಕ ಚಿತ್ರ

ನವದೆಹಲಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿನ ಸಹಾಯಕ ಪ್ರಾಧ್ಯಾಪಕ ಮತ್ತು ಅವರ ಪತ್ನಿ ಒಡಿಶಾದ ರೂರ್ಕೆಲಾದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಸೂ ಜಯಬಲನ್ ಎನ್ನುವ ಸಹಾಯಕ ಪ್ರಾಧ್ಯಾಪಕ  ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಜೀವ ವಿಜ್ಞಾನ ವಿಭಾಗದಲ್ಲಿ ಕಲಿಸುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಇಬ್ಬರು ದಂಪತಿಗಳ ಆತ್ಮಹತ್ಯೆ ಟಿಪ್ಪಣಿ ದೊರೆತಿದ್ದು, ತಮಗೆ ಮಕ್ಕಳು ಇಲ್ಲದೆ ಇರುವುದರಿಂದಾಗಿ ಅವರು ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

""ಆತ್ಮಹತ್ಯೆ ಪತ್ರವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಮಕ್ಕಳನ್ನು ಹೊಂದಲು ಸಾಧ್ಯವಾಗದ ಕಾರಣ ಅವರು ಹತಾಶರಾಗಿದ್ದರು ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ" ಎಂದು ರೂರ್ಕೆಲಾದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸರ್ತಕ್ ಸಾರಂಗಿ  ಹೇಳಿದ್ದಾರೆ.