ಕಾರ್ಯಕ್ರಮದಲ್ಲಿ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಸೋಲಾಪುರ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡಿರುವ ನಿತಿನ್ ಗಡ್ಕರಿ ಅವರು ಗುರುವಾರ ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೋಲ್ಕಾರ್ ಸೋಲಾಪುರ್ ವಿಶ್ವವಿದ್ಯಾಲಯದಲ್ಲಿ ನಡೆದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮುಂಬೈ: ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಲೆ ಸುತ್ತು ಬಂದು ವೇದಿಕೆಯಲ್ಲೇ ಕುಸಿದ ಘಟನೆ ಗುರುವಾರ ನಡೆದಿದೆ.
ಸೋಲಾಪುರ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡಿರುವ ನಿತಿನ್ ಗಡ್ಕರಿ ಅವರು ಗುರುವಾರ ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೋಲ್ಕಾರ್ ಸೋಲಾಪುರ್ ವಿಶ್ವವಿದ್ಯಾಲಯದಲ್ಲಿ ನಡೆದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದ ವೇಳೆ ತಲೆಸುತ್ತು ಬಂದು ಗಡ್ಕರಿ ಅವರು ಕುಚಿ ಮೇಲೆ ಕುಳಿತ ಘಟನೆ ನಡೆದಿದೆ.
ಗಂಟಲು ನೋವಿನಿಂದ ಬಳಲುತ್ತಿದ್ದ ಗಡ್ಕರಿ ಅವರು, ಬುಧವಾರ ಕೆಲವು ಔಷಧಿಗಳನ್ನು ತೆಗೆದುಕೊಂಡಿದ್ದರು. ಅದರ ಪರಿಣಾಮವಾಗಿ ಅವರಿಗೆ ತಲೆಸುತ್ತು ಬಂದು ಕುಸಿದಿದ್ದರು. ವೈದ್ಯರೂ ಸಹ ಪರಿಶೀಲನೆ ನಡೆಸಿ ಯಾವುದೇ ಸಮಸ್ಯೆಯಿಲ್ಲ ಎಂದಿರುವುದಾಗಿ ಗಡ್ಕರಿ ಅವರ ಆಪ್ತ ಸಹಾಯಕ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.