New Traffice Rule: ಇನ್ಜುಂದೆ ಕಾರಿನಲ್ಲಿ ಸಂಚರಿಸುವ ಪ್ರತಿಯೊಬ್ಬ ಪ್ರಯಾಣಿಕರು ಕೂಡ ಸೀಟ್ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಮಾಹಿತಿ ನೀಡಿದ್ದಾರೆ. ವಾಹನದ ಹಿಂಭಾಗದಲ್ಲಿ ಕುಳಿತುಕೊಳ್ಳುವ ಪ್ರಯಾಣಿಕರಿಗೂ ಸೀಟ್ಬೆಲ್ಟ್ ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ಸಾವಿನ ನಂತರ, ಕಾರಿನ ಹಿಂದಿನ ಸೀಟಿನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕರ ಸುರಕ್ಷತೆಗಾಗಿ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಕಾರಿನಲ್ಲಿ ಕುಳಿತುಕೊಳ್ಳುವ ಪ್ರತಿಯೊಬ್ಬರೂ ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ಮಂಗಳವಾರ ಮಾತನಾಡಿರುವನಿತಿನ್ ಗಡ್ಕರಿ, “ಸೈರಸ್ ಮಿಸ್ತ್ರಿ ಅವರ ನಿಧನದ ನಂತರ, ಇಂದು ಸರ್ಕಾರವು ಹಿಂದಿನ ಸೀಟಿನ ಪ್ರಯಾಣಿಕರ ಸುರಕ್ಷತೆಗಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ, ಹಿಂದಿನ ಸೀಟಿನಲ್ಲೂ ಸೀಟ್ ಬೆಲ್ಟ್ ಅಗತ್ಯವಾಗಿದೆ" ಎಂದು ಹೇಳಿದ್ದಾರೆ.
ಸೀಟ್ ಬೆಲ್ಟ್ ಹಾಕದಿದ್ದರೆ ಬೀಪ್ ಸೌಂಡ್ ಬರುತ್ತದೆ
ಮಾಧ್ಯಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿರುವ ಗಡ್ಕರಿ, "ಸೈರಸ್ ಮಿಸ್ತ್ರಿ ಅವರು ಕಾರು ಅಪಘಾತದಲ್ಲಿ ನಿಧನರಾದ ನಂತರ, ನಾವು ವಾಹನಗಳ ಹಿಂದಿನ ಸೀಟುಗಳಿಗೆ ಸೀಟ್ ಬೆಲ್ಟ್ ಬೀಪ್ ವ್ಯವಸ್ಥೆಯನ್ನು ಹೊಂದಲು ನಿರ್ಧರಿಸಿದ್ದೇವೆ" ಎಂದು ಹೇಳಿದ್ದಾರೆ.
ಇದನ್ನೂ ಓದಿ-ಬಾಂಗ್ಲಾ ಪ್ರಧಾನಿ ಭೇಟಿ ಮಾಡಿದ ಪಿಎಂ ಮೋದಿ: ಉಭಯ ದೇಶಗಳ ನಡುವೆ ಹಲವು ಒಪ್ಪಂದಕ್ಕೆ ಸಹಿ
ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಭೀಕರ ರಸ್ತೆ ಅಪಘಾತದಲ್ಲಿ ನಿಧನರಾದ ನಂತರ, ತಜ್ಞರು ಸಾರಿಗೆ ಮತ್ತು ಸಂಚಾರ ನಿಯಂತ್ರಣ ವ್ಯವಸ್ಥೆಗಳಲ್ಲಿನ ಲೋಪಗಳನ್ನು ಸೂಚಿಸಿದ್ದಾರೆ. ಕಾರಿನಲ್ಲಿ ಕುಳಿತುಕೊಳ್ಳುವವರಿಗೆ ಸೀಟ್ ಬೆಲ್ಟ್ ಅಗತ್ಯವಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಸಮಾಲೋಚನೆ ನಡೆಸಲಾಗಿದ್ದು, ನಿತಿನ್ ಗಡ್ಕರಿ ಅವರು ಎಲ್ಲಾ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ-Viral Video: ಶಾಲಾ ಬಾಲಕೀಯರ ಇಂತಹ ಫೈಟ್ ನೀವು ಈ ಹಿಂದೆ ಎಂದೂ ನೋಡಿರಲಿಕ್ಕಿಲ್ಲ
ಈ ನಿಯಮವನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಎಂದು ಅವರು ಒತ್ತಿ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಿತಿನ್ ಗಡ್ಕರಿ, "ಸೀಟ್ ಬೆಲ್ಟ್ ಧರಿಸದಿದ್ದಕ್ಕಾಗಿ ಚಲನ್ (ದಂಡದ ದಂಡ) ಅನುಮತಿಸಲಾಗುವುದು. ಆದೇಶವನ್ನು 3 ದಿನಗಳಲ್ಲಿ ಜಾರಿಗೊಳಿಸಲಾಗುವುದು" ಎಂದು ಹೇಳಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.