Capital Investment: ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಬಗ್ಗೆ ನಿತಿನ್ ಗಡ್ಕರಿ ದೊಡ್ಡ ಹೇಳಿಕೆ!
ಪ್ರಧಾನಿ ಮೋದಿ ಸರ್ಕಾರದಲ್ಲಿ ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಗೆ ಒತ್ತು ನೀಡಲಾಗಿದೆ. ಉತ್ತಮ ಆಡಳಿತದಿಂದಾಗಿ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯು ಪಾರದರ್ಶಕ ಮತ್ತು ಸಮಯಕ್ಕೆ ಬದ್ಧವಾಗಿದೆ. ಬಡತನ ಮತ್ತು ಸಾಮಾಜಿಕ-ಆರ್ಥಿಕ ಅಸಮಾನತೆ ಹೋಗಲಾಡಿಸುವುದು ಮೋದಿ ಸರ್ಕಾರದ ಗುರಿಯಾಗಿದೆ. ಮೋದಿ ಸರ್ಕಾರದ ಅಂತ್ಯೋದಯ ಯೋಜನೆಗಳಿಂದ ಸಮಾಜದ ಬಡ ವರ್ಗದವರು ಪ್ರಯೋಜನ ಪಡೆದಿದ್ದಾರೆ ಎಂದು ಗಡ್ಕರಿ ಹೇಳಿದ್ದಾರೆ.
ನವದೆಹಲಿ: ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ‘ಮೋಡಿನಾಮಿಕ್ಸ್’ನ ಪ್ರಮುಖ ಅಂಶವಾಗಿದೆ. ಇದರಿಂದ ಸಂಪತ್ತು ಸೃಷ್ಟಿಯಾಗುವುದಲ್ಲದೆ, ಜನರಿಗೆ ಉದ್ಯೋಗವೂ ದೊರೆಯುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ‘60 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಬಂಡವಾಳಶಾಹಿಗಳ ವಿರುದ್ಧ ದ್ವೇಷ ಹರಡಿತ್ತು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಆಡಳಿತವು ಬಜೆಟ್ ಕೇಂದ್ರಿತವಾಗಿತ್ತು’ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: Cashless India: ಮುಂದಿನ 3 ವರ್ಷಗಳಲ್ಲಿ ದೇಶದ ಶೇ.50ರಷ್ಟು ವಹಿವಾಟು ಕ್ಯಾಶ್‌ಲೆಸ್!
ವಿದೇಶಿ ಬಂಡವಾಳ
ಬಡತನ ನಿರ್ಮೂಲನೆಗಾಗಿ ದೇಶೀಯ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಮತ್ತು ಬೆಳವಣಿಗೆಗೆ ವಿದೇಶಿ ಬಂಡವಾಳ ತರುವುದು ಅಗತ್ಯವಾಗಿದೆ. ಪ್ರಧಾನಿ ಮೋದಿ ಸರ್ಕಾರ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುತ್ತಿರುವುದರಿಂದ ಇಂದು 900 ಕೋಟಿ ರೂ.ಗಳ ಬಜೆಟ್‌ನಲ್ಲಿ 9 ಲಕ್ಷ ಕೋಟಿ ರೂ.ಗಳ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಬಂಡವಾಳ ಹೂಡಿಕೆಯು ಸಂಪತ್ತು ಮತ್ತು ಉದ್ಯೋಗಗಳನ್ನು ಸೃಷ್ಟಿಸುತ್ತದೆ’ ಎಂದು ಅವರು ತಿಳಿಸಿದರು.
ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆ
ಪ್ರಧಾನಿ ಮೋದಿ ಸರ್ಕಾರದಲ್ಲಿ ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಗೆ ಒತ್ತು ನೀಡಿದ್ದು, ಉತ್ತಮ ಆಡಳಿತದಿಂದಾಗಿ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯು ಪಾರದರ್ಶಕ ಮತ್ತು ಸಮಯಕ್ಕೆ ಬದ್ಧವಾಗಿದೆ. ಬಡತನ ಮತ್ತು ಸಾಮಾಜಿಕ-ಆರ್ಥಿಕ ಅಸಮಾನತೆ ಹೋಗಲಾಡಿಸುವುದು ಮೋದಿ ಸರ್ಕಾರದ ಗುರಿಯಾಗಿದೆ. ಮೋದಿ ಸರ್ಕಾರದ ಅಂತ್ಯೋದಯ ಯೋಜನೆಗಳಿಂದ ಸಮಾಜದ ಬಡ ವರ್ಗದವರು ಪ್ರಯೋಜನ ಪಡೆದಿದ್ದಾರೆ. 'ಪ್ರಧಾನ ಮಂತ್ರಿ ಉಜ್ವಲ ಯೋಜನೆ'ಯಿಂದ 9.5 ಕೋಟಿ ಜನರು ಗ್ಯಾಸ್ ಸ್ಟೌವ್‌ಗಳನ್ನು ಪಡೆದರೆ, 3.5 ಕೋಟಿ ನಾಗರಿಕರು ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ ಮನೆಗಳನ್ನು ಪಡೆದಿದ್ದಾರೆಂದು ಮಾಹಿತಿ ನೀಡಿದರು.
ಇದನ್ನೂ ಓದಿ: Free Travel For Senior Citizen: ಇನ್ಮುಂದೆ ಹಿರಿಯ ನಾಗರಿಕರಿಗೂ ಉಚಿತ ಬಸ್ ಸೇವೆ!
ಕೇಂದ್ರದ ಅತ್ಯುತ್ತಮ ಯೋಜನೆಗಳು
‘49 ಕೋಟಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ, ಆಯುಷ್ಮಾನ್ ಭಾರತ್ (ಆರೋಗ್ಯ ಯೋಜನೆ) ಯೋಜನೆಯಡಿ 37 ಕೋಟಿ ಜನರು ಪ್ರಯೋಜನ ಪಡೆದಿದ್ದಾರೆ. ಸ್ವಚ್ಛ ಭಾರತ್ ಕಾರ್ಯಕ್ರಮದಡಿಯಲ್ಲಿ 12 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಈ ಯೋಜನೆಗಳಲ್ಲಿ ಹೆಚ್ಚಿನವು ಬಡವರಿಗೆ ಪ್ರಯೋಜನವನ್ನು ನೀಡಿವೆ ಎಂದು ಗಡ್ಕರಿ ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.