15 ವರ್ಷಗಳ ನಂತರ ಗುಜರಾತ್ಗೆ ಭೇಟಿ ನೀಡಿದ ನಿತೀಶ್ ಕುಮಾರ್
ವಾಸ್ತವವಾಗಿ, ಬಿಜೆಪಿ ಆಳ್ವಿಕೆಯ ಎಲ್ಲಾ 18 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉನ್ನತ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ಅಹ್ಮದಾಬಾದ್: ಗುಜರಾತ್ನಲ್ಲಿ ಆರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಹಾಗೂ ಉಪ ಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ಸೇರಿದಂತೆ ಹಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಆದಾಗ್ಯೂ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಸಮಯದಲ್ಲಿ ಎಲ್ಲರ ಗಮನ ಸೆಳೆದರು. ಕಾರಣ 15 ವರ್ಷಗಳ ನಂತರ ಗುಜರಾತ್ಗೆ ನಿತೀಶ್ ಕುಮಾರ್ ಭೇಟಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮತ್ತು ನಿತೀಶ್ ಕುಮಾರ್ ಹಸ್ತಲಾಗವ ಮಾಡಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಬಿಜೆಪಿ ಸ್ಥಾಪಕ ಎಲ್.ಕೆ. ಅಡ್ವಾಣಿ, ಕೇಂದ್ರ ಗೃಹ ಸಚಿವರಾದ ರಾಜ್ನಾಥ್ ಸಿಂಗ್, ರವಿ ಶಂಕರ್ ಪ್ರಸಾದ್, ನಿತಿನ್ ಗಡ್ಕರಿ, ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ರಾಮ್ ವಿಲಾಸ್ ಪಾಸ್ವಾನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.