ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್, ಬಿಎಸ್ಪಿ ಜೊತೆ ಯಾವುದೇ ಮೈತ್ರಿ ಇಲ್ಲ-ಅಖಿಲೇಶ್ ಯಾದವ್

ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಎಸ್ಪಿ ಮತ್ತು ಬಿಎಸ್ಪಿ ಜೊತೆ ಯಾವುದೇ ಮೈತ್ರಿಕೂಟ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Written by - Zee Kannada News Desk | Last Updated : Jun 23, 2021, 04:46 PM IST
  • ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಅಭಿವೃದ್ಧಿಯನ್ನು ನಿರ್ಬಂಧಿಸಿದ್ದಾರೆ ಮತ್ತು ಅವರ ಆಳ್ವಿಕೆಯಲ್ಲಿ ಭ್ರಷ್ಟಾಚಾರ ಮತ್ತು ದಬ್ಬಾಳಿಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿದರು.
  • 'ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿ ಸೋಲು ಹೋಗಲಿದೆ...ಅವರು ತಮ್ಮ ನಾಯಕತ್ವದ ಅತಿದೊಡ್ಡ ಪರೀಕ್ಷೆಯಲ್ಲಿ ಯುಪಿ ಜನರನ್ನು ವಿಫಲಗೊಳಿಸಿದ್ದಾರೆ.ಜನರನ್ನು ಸರ್ಕಾರ ಕೈಬಿಟ್ಟಿದೆ.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್, ಬಿಎಸ್ಪಿ ಜೊತೆ ಯಾವುದೇ ಮೈತ್ರಿ ಇಲ್ಲ-ಅಖಿಲೇಶ್ ಯಾದವ್  title=

ನವದೆಹಲಿ: ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಎಸ್ಪಿ ಮತ್ತು ಬಿಎಸ್ಪಿ ಜೊತೆ ಯಾವುದೇ ಮೈತ್ರಿಕೂಟ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಅಭಿವೃದ್ಧಿಯನ್ನು ನಿರ್ಬಂಧಿಸಿದ್ದಾರೆ ಮತ್ತು ಅವರ ಆಳ್ವಿಕೆಯಲ್ಲಿ ಭ್ರಷ್ಟಾಚಾರ ಮತ್ತು ದಬ್ಬಾಳಿಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರೋಪಿಸಿದರು.ಜನರು ಈಗ ಬದಲಾವಣೆಯನ್ನು ಬಯಸುತ್ತಾರೆ ಎಂದು ಅವರು ಹೇಳಿದರು.ದೊಡ್ಡ ಪಕ್ಷಗಳೊಂದಿಗಿನ ನನ್ನ ಅನುಭವವು ಉತ್ತಮವಾಗಿಲ್ಲ, ನಾನು ಅವರೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ" ಎಂದು ಅಖಿಲೇಶ್ ಯಾದವ್ ವಿಶೇಷ ಸಂದರ್ಶನದಲ್ಲಿ ತಿಳಿಸಿದರು.

ಇದನ್ನೂ ಓದಿ: Corona ಸಮಯದಲ್ಲಿ ಹೋಳಿ ಆಚರಣೆ, ಇವುಗಳ ಬಗ್ಗೆ ಇರಲಿ ಎಚ್ಚರ

ಬಿಜೆಪಿಯನ್ನು ಸೋಲಿಸಲು ಬಯಸುವವರು, ಸಮಾಜವಾದಿ ಪಕ್ಷಕ್ಕೆ ಸಹಾಯ ಮಾಡುವಂತೆ ನಾನು ಅವರಿಗೆ ಮನವಿ ಮಾಡುತ್ತೇನೆ.ಮಾಯಾವತಿಯ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅವರ 2019 ರ ಮೈತ್ರಿ ವಿಫಲವಾದ ನಂತರ "ಬುವಾ-ಭತಿಜಾ" ಜೋಡಿ ಪುನರಾವರ್ತಿತವಾಗುವುದನ್ನು ತಳ್ಳಿಹಾಕಿದ ಯಾದವ್, ಕೆಲವು ಬಿಎಸ್ಪಿ ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಒಪ್ಪಿಕೊಂಡರು.

ಇದನ್ನೂ ಓದಿ: Coronavirus: ಈ ರಾಜ್ಯದಲ್ಲಿ ನಿಯಂತ್ರಣ ಮೀರಿದ ಕೊರೊನಾ, ಮಾರ್ಚ್ 28 ರಿಂದ Night Curfew ಘೋಷಣೆ

ಬಿಜೆಪಿಯನ್ನು ಸೋಲಿಸಲು ಯುಪಿಯಲ್ಲಿ ಕಾಂಗ್ರೆಸ್ ಪಕ್ಷವು ತುಂಬಾ ದುರ್ಬಲವಾಗಿದೆ ಎಂದು ಹೇಳಿದರು.'ನಾವು ಅವರೊಂದಿಗೆ 2017 ರಲ್ಲಿ ಉತ್ತಮ ಅನುಭವವನ್ನು ಹೊಂದಿರಲಿಲ್ಲ.ನಾವು ಅವರಿಗೆ 100 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿದ್ದೇವೆ ಆದರೆ ನಮಗೆ ಗೆಲ್ಲಲು ಸಾಧ್ಯವಾಗಲಿಲ್ಲ.ಯುಪಿ ಜನರು ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ' ಎಂದು ಯಾದವ್ ಹೇಳಿದರು.

2024 ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ಮತದಾರರ ನಾಡಿಮಿಡಿತದ ಪರೀಕ್ಷೆಯಾಗಿ ಬರುವ ಉತ್ತರ ಪ್ರದೇಶದ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಯುಪಿಯ 403 ಸ್ಥಾನಗಳಲ್ಲಿ 350 ಸ್ಥಾನಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Sachin Tendulkar: ಸಚಿನ್ ತೆಂಡೂಲ್ಕರ್‌ಗೆ ಕರೋನಾ ಪಾಸಿಟಿವ್

'ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿ ಸೋಲು ಹೋಗಲಿದೆ...ಅವರು ತಮ್ಮ ನಾಯಕತ್ವದ ಅತಿದೊಡ್ಡ ಪರೀಕ್ಷೆಯಲ್ಲಿ ಯುಪಿ ಜನರನ್ನು ವಿಫಲಗೊಳಿಸಿದ್ದಾರೆ.ಜನರನ್ನು ಸರ್ಕಾರ ಕೈಬಿಟ್ಟಿದೆ.ಅವರ ಡಬಲ್-ಎಂಜಿನ್ ಸರ್ಕಾರ ಕೇಂದ್ರದಲ್ಲಿ ಮತ್ತು ಯುಪಿಯಲ್ಲಿ ವಿಭಿನ್ನ ದಿಕ್ಕುಗಳಲ್ಲಿ ಸಾಗುತ್ತಿದೆ 'ಎಂದು ಯಾದವ್ ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News