ಯಾವ `ಹೌಡಿ ಮೋದಿ` ಸಹ ಆರ್ಥಿಕ ಕುಸಿತವನ್ನು ಮರೆಮಾಚಲು ಸಾಧ್ಯವಿಲ್ಲ- ರಾಹುಲ್ ಗಾಂಧಿ
ಭಾನುವಾರದಂದು ಅಮೆರಿಕಾದ ಹೂಸ್ಟನ್ ನಲ್ಲಿ ನಡೆಯುತ್ತಿರುವ ಹೌಡಿ ಮೋದಿ ಕಾರ್ಯಕ್ರಮವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಇಂತಹ ಕಾರ್ಯಕ್ರಮಗಳು ಕೂಡ ಭಾರತದ ಆರ್ಥಿಕ ವ್ಯವಸ್ಥೆಯನ್ನು ಸರಿಪಡಿಸಲಾರವು ಎಂದು ಕಿಡಿ ಕಾರಿದ್ದಾರೆ.
ನವದೆಹಲಿ: ಭಾನುವಾರದಂದು ಅಮೆರಿಕಾದ ಹೂಸ್ಟನ್ ನಲ್ಲಿ ನಡೆಯುತ್ತಿರುವ ಹೌಡಿ ಮೋದಿ ಕಾರ್ಯಕ್ರಮವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಇಂತಹ ಕಾರ್ಯಕ್ರಮಗಳು ಕೂಡ ಭಾರತದ ಆರ್ಥಿಕ ವ್ಯವಸ್ಥೆಯನ್ನು ಸರಿಪಡಿಸಲಾರವು ಎಂದು ಕಿಡಿ ಕಾರಿದ್ದಾರೆ.
ಪ್ರಧಾನಿ ಮೋದಿ ಹಾಗೂ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸುತ್ತಿರುವ ಈ ಕಾರ್ಯಕ್ರಮದ ಕುರಿತಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿ 'ಈ ಹೌಡಿ ಮೋದಿ ಕಾರ್ಯಕ್ರಮದ ಮೂಲಕ ಪ್ರಧಾನಿ ಅಂತಹ ಯಾವ ಅದ್ಬುತ ಕೆಲಸವನ್ನು ಭಾರತೀಯ ಮಾರುಕಟ್ಟೆಗೆ ಮಾಡಲು ಸಿದ್ದವಾಗಿದ್ದಾರೆ. ಈ ಕಾರ್ಯಕ್ರಮ + 1.4 ಲಕ್ಷ ಕೋಟಿ ರೂಗಳ ವಿಶ್ವದ ದುಬಾರಿ ಕಾರ್ಯಕ್ರಮವಾಗಿದೆ. ಆದರೆ , ಹೌಡಿ ಮೋಡಿ ಭಾರತದ ಆರ್ಥಿಕ ಅವ್ಯವಸ್ಥೆಯ ವಾಸ್ತವತೆಯನ್ನು ಮರೆಮಾಡಲು ಸಾಧ್ಯವಿಲ್ಲ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇತ್ತೀಚಿಗೆ ಮೋದಿ ನೇತೃತ್ವದ 100 ದಿನಗಳ ಆಡಳಿತ ಪೂರೈಸಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ನಿರಂತರ ವಾಗ್ದಾಳಿ ನಡೆಸಿ ಆರ್ಥಿಕ ಕುಸಿತವನ್ನು ತಡೆಗಟ್ಟಲು ವಿಫಲವಾದ ಕೇಂದ್ರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೇಂದ್ರ ಸರ್ಕಾರ ದ್ವೇಷದ ರಾಜಕಾರಣವನ್ನು ಬಿಟ್ಟು ಆರ್ಥಿಕ ಉತ್ತೇಜನಕ್ಕೆ ಕ್ರಮವನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದರು.
ಭಾರತ ಇದೇ ಮೊದಲ ಬಾರಿಗೆ ಕಳೆದ ಆರು ವರ್ಷಗಳಲ್ಲಿ ಕನಿಷ್ಠ ಜಿಡಿಪಿ ಬೆಳವಣಿಗೆ ದರವನ್ನು ಹೊಂದಿತ್ತು, ಈ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದವು.