ಈ ವರ್ಷವಿಲ್ಲ ಐಪಿಎಲ್ ಟೂರ್ನಿ ?
ನವದೆಹಲಿ: ಈ ಬಾರಿ ಐಪಿಎಲ್ ಟೂರ್ನಿ ನಡೆಯುವ ಸಾಧ್ಯತೆ ವಿರಳ ಎಂದು ತಿಳಿದುಬಂದಿದೆ.
ಹಿರಿಯ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರು ಮದ್ರಾಸ್ ಹೈಕೋರ್ಟ್ಗನಲ್ಲಿ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ತಡೆಯಲು ಮುನ್ನೆಚ್ಚರಿಕೆಯ ಕ್ರಮಗಳನ್ನು ಜಾರಿಗೆ ತರುವವರೆಗೂ ಐಪಿಎಲ್ ಪಂದ್ಯಗಳನ್ನು ನಡೆಸದಿರುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ದೆಹಲಿ ಡೇರ್ಡೆವಿಲ್ಸ್, ಕಿಂಗ್ಸ್ ಕ್ಸಿ ಪಂಜಾಬ್, ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳನ್ನು ಪ್ರಸ್ತಾಪಿಸಲಾಗಿದೆ. ಇವುಗಳಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಎರಡು ವರ್ಷಗಳ ನಂತರ ಮತ್ತೆ ಟೂರ್ನಿಯ ಭಾಗವಾಗಿವೆ.
ಚೆನ್ನೈನ ತನಿಖಾಧಿಕಾರಿಯಾಗಿರುವ ಸಂಪತ್ ಕುಮಾರ್ ಅವರು ಐಪಿಎಲ್ ಬೆಟ್ಟಿಂಗ್ ಹಗರಣವನ್ನು ಬಹಿರಂಗಪಡಿಸಿದ್ದಾರೆಂದು ತಿಳಿಸಿದ್ದಾರೆ. ಸಂಪತ್ ಅವರು ಹೇಳುವಂತೆ ತಾವು ಐಪಿಎಲ್ ನ್ನು ನಿಷೇಧಿಸಿ ಎಂದು ಹೇಳುತ್ತಿಲ್ಲ ಬದಲಾಗಿ ಅದರಲ್ಲಿರುವ ಕೆಲವು ಲೋಪದೋಷಗಳನ್ನು ಸರಿಪಡಿಸಬೇಕು, ಅಲ್ಲಿಯವರೆಗೆ ಬಿಸಿಸಿಐ ಪಂದ್ಯಗಳನ್ನು ನಡೆಸಬಾರದು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ಅರ್ಜಿಯು ಬುಧವಾರದಂದು ಮದ್ರಾಸ್ ಹೈಕೋರ್ಟ್ ನಲ್ಲಿ ವಿಚಾರಣೆಗೆ ಒಳಪಡಲಿದೆ ಎಂದು ಹೇಳಲಾಗಿದೆ.