ನವದೆಹಲಿ: ಒತ್ತಾಯಪೂರ್ವಕವಾಗಿ ಯಾರಿಗೂ ಕೊರೊನಾ ಲಸಿಕೆ(Covid-19 Vaccination)ನೀಡುವುದಿಲ್ಲವೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಸ್ಪಷ್ಟನೆ ನೀಡಿದೆ. ದೇಶದಲ್ಲಿ ಒತ್ತಾಯದಿಂದ ಯಾವುದೇ ವ್ಯಕ್ತಿಗೂ ಕೋವಿಡ್ ಲಸಿಕೆ ನೀಡುವುದಿಲ್ಲ. ಇಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿಲ್ಲವೆಂದು ಸುಪ್ರೀಂಕೋರ್ಟ್(Supreme Court)ಗೆ ಕೇಂದ್ರವು ತಿಳಿಸಿದೆ.


COMMERCIAL BREAK
SCROLL TO CONTINUE READING

ದೇಶದ ಜನರಿಗೆ ಕೊರೊನಾ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಕೋವಿಡ್(COVID-19)ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್(Evara Foundation) ಹೆಸರಿನ NGO ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರವು ಈ ಉತ್ತರವನ್ನು ನೀಡಿದೆ. ಲಸಿಕೆ ನೀಡುವುದು ಮತ್ತು ಲಸಿಕೆ ಪಡೆದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವ ಕ್ರಮವನ್ನು ಎಲ್ಲಿಗೂ ಜಾರಿಗೆ ತಂದಿಲ್ಲವೆಂದು ಕೇಂದ್ರ ತಿಳಿಸಿದೆ.


ಇದನ್ನೂ ಓದಿ: ಈ ರಾಜ್ಯದಲ್ಲಿ 10-12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಜ. 31 ರವರೆಗೆ ರಜೆ ಘೋಷಣೆ


ಸಾರ್ವಜನಿಕರ ಹಿತಾಸಕ್ತಿಯಿಂದ ಮತ್ತು ಕೊರೊನಾ ಸೋಂಕು(Coronavirus) ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು ಕೊರೊನಾ ಲಸಿಕೆ ಪಡೆಯುವುದು ಮತ್ತು ಲಸಿಕೆಯ ಪ್ರಮಾಣಪತ್ರವನ್ನು ಹೊಂದಿರುವಂತೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವಾಲಯವು ಅಭಿಯಾನ ಕೈಗೊಂಡಿದೆ. ಆದರೆ ಯಾವುದೇ ರೀತಿ ಒತ್ತಾಯದಿಂದ ಯಾರ ಮೇಲೂ ಅದನ್ನು ಹೇರಿಲ್ಲವೆಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ.


‘ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳು, ಸಂಬಂಧಪಟ್ಟ ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಯಾವುದೇ ಬಲವಂತದ ಲಸಿಕೆ(Vaccinated Forcibly)ಯನ್ನು ಕಲ್ಪಿಸುವುದಿಲ್ಲ. ಕೊರೊನಾ ಸಾಂಕ್ರಾಮಿಕ ವೈರಸ್ ವಿರುದ್ಧ ಹೋರಾಡಲು ಲಸಿಕೆಯು ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿದೆ. ನಡೆಯುತ್ತಿರುವ ಸಾಂಕ್ರಾಮಿಕ ಪರಿಸ್ಥಿತಿ ಎಲ್ಲಾ ನಾಗರಿಕರು ಲಸಿಕೆಯನ್ನು ಪಡೆಯಬೇಕು ಎಂದು ವಿವಿಧ ಮುದ್ರಣ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಸೂಕ್ತ ಸಲಹೆ, ಜಾಹೀರಾತು ಮತ್ತು ಮಾಹಿತಿ ನೀಡಲಾಗುತ್ತದೆ. ಇದಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಗಳು ಮತ್ತು ಪ್ರಕ್ರಿಯೆಗಳನ್ನು ವಿನ್ಯಾಸಗೊಳಿಸಲಾಗಿದೆ’ ಎಂದು ಕೇಂದ್ರದ ಅಫಿಡವಿಟ್ ಹೇಳಿದೆ.


ಇದನ್ನೂ ಓದಿ: ಖ್ಯಾತ ಕಥಕ್ ನಾಟ್ಯ ಪ್ರವೀಣ ಪಂಡಿತ್ ಬಿರ್ಜು ಮಹಾರಾಜ್ ನಿಧನ


ಕೇಂದ್ರವು ಯಾವುದೇ ಉದ್ದೇಶಕ್ಕಾಗಿ ಲಸಿಕೆ(Coronavirus Vaccination) ಪ್ರಮಾಣಪತ್ರವನ್ನು ಕೊಂಡೊಯ್ಯುವುದನ್ನು ಕಡ್ಡಾಯಗೊಳಿಸುವ ಯಾವುದೇ SOPಯನ್ನು ಜಾರಿಗೊಳಿಸಿಲ್ಲ. ದೇಶದ ಪ್ರತಿಯೊಬ್ಬ ಪ್ರಜೆಗೂ ಕೊರೊನಾ ಸೋಂಕಿನ ವಿರುದ್ಧ ಹೋರಾಡುವಂತೆ ಸೂಚಿಸಲಾಗಿದೆ. ಆದರೆ ಯಾರಿಗೂ ಅವರ ಇಚ್ಛೆಗೆ ವಿರುದ್ಧವಾಗಿ ಲಸಿಕೆಯನ್ನು ನೀಡಿಲ್ಲವೆಂದು ಇದೇ ವೇಳೆ ಕೇಂದ್ರ(Central Government) ಸ್ಪಷ್ಟಪಡಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.