ಪರಮಾಣು ಶಕ್ತಿ ಘಟಕಗಳ ಬಗ್ಗೆ ಕೇಂದ್ರದಿಂದ ಯಾವುದೇ ಪ್ರಸ್ತಾಪವಿಲ್ಲ: ಪಂಜಾಬ್ ಸಿಎಂ
ಪಂಜಾಬ್‌ನ ಹಿತದೃಷ್ಟಿಯಿಂದ ಕೇಂದ್ರದಲ್ಲಿ ಯಾವುದೇ ಸರ್ಕಾರವಿದ್ದರೂ ಅದರೊಂದಿಗೆ ವ್ಯವಹರಿಸಲು ನನಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನವದೆಹಲಿ: ಬತಿಂಡಾ ಮತ್ತು ರೋಪರ್ ವಿದ್ಯುತ್ ಸ್ಥಾವರಗಳಲ್ಲಿ ಪರಮಾಣು ಇಂಧನ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರದಿಂದ ಇನ್ನೂ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮಂಗಳವಾರ ಹೇಳಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಡರಲ್ ರಚನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸೌಹಾರ್ದಯುತ ಸಂಬಂಧ ಮುಖ್ಯವಾದುದು. ಪಂಜಾಬ್‌ನ ಹಿತದೃಷ್ಟಿಯಿಂದ ಕೇಂದ್ರದಲ್ಲಿ ಯಾವುದೇ ಸರ್ಕಾರವಿದ್ದರೂ ಅದರೊಂದಿಗೆ ವ್ಯವಹರಿಸಲು ನನಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ವಿದ್ಯುತ್ ಉತ್ಪಾದನೆಗೆ ಪರಮಾಣು ಶಕ್ತಿಯನ್ನು ಬಳಸುವ ಕುರಿತು ಬಹಳ ವರ್ಷಗಳಿಂದ ಚರ್ಚೆ ನಡೆಯುತ್ತಿದೆ. ಆದರೆ ಅದಿನ್ನೂ ಲಿಖಿತ ರೂಪಕ್ಕೆ ಬಂದಿಲ್ಲ ಎಂದು ಸಿಎಂ ಅಮರಿಂದರ್ ಸಿಂಗ್ ಹೇಳಿದರು.
ಮುಂದುವರೆದು ಮಾತನಾಡಿದ ಅವರು, ಇತ್ತೀಚೆಗೆ ನವಜೋತ್ ಸಿಂಗ್ ಸಿಧು ಕೂಡ ಇಂಧನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ನಾನೇ ಆ ಖಾತೆಯನ್ನು ನಿರ್ವಹಿಸುತ್ತಿದ್ದೇನೆ. ವಿದ್ಯುತ್ ಇಲಾಖೆಯ ದಿನನಿತ್ಯದ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ" ಎಂದು ಸಿಎಂ ತಿಳಿಸಿದರು.