ಅನುಮತಿ ಇಲ್ಲದೆ ಯಾವುದೇ ಧಾರ್ಮಿಕ ಮೆರವಣಿಗೆ ನಡೆಸುವಂತಿಲ್ಲ- ಸಿಎಂ ಯೋಗಿ
ಇತ್ತೀಚಿಗೆ ಕೆಲವು ರಾಜ್ಯಗಳಲ್ಲಿ ಹಬ್ಬಗಳ ಸಂದರ್ಭದಲ್ಲಿ ಹಿಂಸಾಚಾರದಂತಹ ಘಟನೆಗಳು ನಡೆದಿರುವ ಬೆನ್ನಲೇ ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಅನುಮತಿ ಇಲ್ಲದೆ ಯಾವುದೇ ಧಾರ್ಮಿಕ ಮೆರವಣಿಗೆಗಳನ್ನು ನಡೆಸುವಂತಿಲ್ಲ ಮತ್ತು ಧ್ವನಿವರ್ಧಕಗಳ ಬಳಕೆಯಿಂದ ಅನ್ಯರಿಗೆ ತೊಂದರೆ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.
ನವದೆಹಲಿ: ಇತ್ತೀಚಿಗೆ ಕೆಲವು ರಾಜ್ಯಗಳಲ್ಲಿ ಹಬ್ಬಗಳ ಸಂದರ್ಭದಲ್ಲಿ ಹಿಂಸಾಚಾರದಂತಹ ಘಟನೆಗಳು ನಡೆದಿರುವ ಬೆನ್ನಲೇ ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಅನುಮತಿ ಇಲ್ಲದೆ ಯಾವುದೇ ಧಾರ್ಮಿಕ ಮೆರವಣಿಗೆಗಳನ್ನು ನಡೆಸುವಂತಿಲ್ಲ ಮತ್ತು ಧ್ವನಿವರ್ಧಕಗಳ ಬಳಕೆಯಿಂದ ಅನ್ಯರಿಗೆ ತೊಂದರೆ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ತಾಜ್ ಮಹಲ್ ಕಳಪೆ ನಿರ್ವಹಣೆ: ಯೋಗಿ ಸರ್ಕಾರಕ್ಕೆ ಸುಪ್ರೀಂ ಚಾಟಿ
ಮುಂದಿನ ತಿಂಗಳು ಈದ್ ಮತ್ತು ಅಕ್ಷಯ ತೃತೀಯ ಒಂದೇ ದಿನ ಬರುವುದರಿಂದ ಪೊಲೀಸರು ಹೆಚ್ಚಿನ ಜಾಗೃತಿಯನ್ನು ವಹಿಸಬೇಕೆಂದು ಅವರು ಸೂಚನೆ ನೀಡಿದ್ದಾರೆ.ಸೋಮವಾರದಂದು ಇಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಕಾನೂನು ಮತ್ತು ಸುವ್ಯವಸ್ಥೆ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ಸಿದ್ಧಾಂತದ ಪ್ರಕಾರ ಅವರ ಪೂಜಾ ವಿಧಾನವನ್ನು ಅನುಸರಿಸಲು ಸ್ವಾತಂತ್ರ್ಯವಿದೆ.ಇದೇ ವೇಳೆ ಮೈಕ್ ನ್ನು ಬಳಸಬಹುದಾದರೂ ಕೂಡ ಅದು ಆವರಣದಿಂದ ಹೊರಬರದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ವಿರೋಧ ಪಕ್ಷದವರಿಗೆ ಭಾರತೀಯ ಸಂಸ್ಕೃತಿಯ ಜ್ಞಾನವಿಲ್ಲ: ಯೋಗಿ ಆದಿತ್ಯನಾಥ್
"ಎಸ್‌ಎಚ್‌ಒ, ಸಿಒ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಂದ ಹಿಡಿದು ಜಿಲ್ಲಾ ಮ್ಯಾಜಿಸ್ಟ್ರೇಟ್, ವಿಭಾಗೀಯ ಆಯುಕ್ತರವರೆಗಿನ ಎಲ್ಲಾ ಆಡಳಿತ/ಪೊಲೀಸ್ ಅಧಿಕಾರಿಗಳ ರಜೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮೇ 4 ರವರೆಗೆ ರದ್ದುಗೊಳಿಸಲಾಗಿದೆ.ಪ್ರಸ್ತುತ ರಜೆಯಲ್ಲಿರುವವರು ಮುಂದಿನ 24 ಗಂಟೆಗಳ ಒಳಗೆ ಪೋಸ್ಟಿಂಗ್ ಸ್ಥಳಕ್ಕೆ ಮರಳಬೇಕು. ಈ ವ್ಯವಸ್ಥೆಯನ್ನು ಮುಖ್ಯಮಂತ್ರಿ ಕಚೇರಿಯಿಂದ ಖಚಿತಪಡಿಸಿಕೊಳ್ಳಬೇಕು" ಎಂದು ಅವರು ತಿಳಿಸಿದ್ದಾರೆ.
ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಬೇಕು ಮತ್ತು ಪರಿಸ್ಥಿತಿಯ ಮೇಲೆ ನಿಗಾ ಇಡಲು ಡ್ರೋನ್‌ಗಳನ್ನು ಬಳಸಬೇಕು.ಪ್ರತಿದಿನ ಸಂಜೆ, ಪೊಲೀಸ್ ಪಡೆಗಳು ಫುಟ್ ಪೆಟ್ರೋಲಿಂಗ್ ಮಾಡಬೇಕು ಮತ್ತು ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಸಕ್ರಿಯವಾಗಿರಬೇಕು ಎಂದು ಅವರು ಹೇಳಿದರು.
ಉತ್ತರ ಪ್ರದೇಶದ ಪ್ರತಿಯೊಬ್ಬ ನಾಗರಿಕನ ಸುರಕ್ಷತೆಯು ನಮ್ಮೆಲ್ಲರ ಪ್ರಾಥಮಿಕ ಜವಾಬ್ದಾರಿಯಾಗಿದೆ ಎಂದು ಆದಿತ್ಯನಾಥ್ ಹೇಳಿದರು, ಪ್ರತಿಹಬ್ಬ ಶಾಂತಿ ಸೌಹಾರ್ದತೆಯಿಂದ ನಡೆಯಲು ಸ್ಥಳೀಯ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಅಗತ್ಯ ಪ್ರಯತ್ನಗಳನ್ನು ಮಾಡಬೇಕು ಎಂದ ಅವರು, ಕಿಡಿಗೇಡಿ ಹೇಳಿಕೆ ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಇದನ್ನೂ ಓದಿ: ಉ.ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ ಯಾವುದೇ ಪರಿಣಾಮ ಬೀರುವುದಿಲ್ಲ- ಯೋಗಿ ಆದಿತ್ಯನಾಥ್
ವಾತಾವರಣ ಹಾಳು ಮಾಡಲು ಯತ್ನಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು, ಸುಸಂಸ್ಕೃತ ಸಮಾಜದಲ್ಲಿ ಅಂತಹವರಿಗೆ ಜಾಗ ಇರಬಾರದು ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.