ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೂ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೂ ಹೆಚ್ಚಿನ ವ್ಯತ್ಯಾಸವೇನಿಲ್ಲ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ. 


COMMERCIAL BREAK
SCROLL TO CONTINUE READING

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ಬಳಿಕ ಇದುವರೆಗೆ 10 ಸಾವಿರ ಬಾರಿ ತಪ್ಪಾದ, ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಇತ್ತೀಚೆಗೆ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿತ್ತು. ಇದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಮಾಯಾವತಿ, ಟ್ರಂಪ್ ಗೂ, ಮೋದಿಗೂ ಹೆಚ್ಚಿನ ವ್ಯತ್ಯಾಸವಿಲ್ಲ ಎಂದಿದ್ದಾರೆ.


"ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈವರೆಗೆ ಎಷ್ಟು ತಪ್ಪಾದ ಹಾಗೂ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವಸ್ತುನಿಷ್ಠ ತನಿಖೆ ನಡೆಸಿ ವರದಿ ಮಾಡಿವೆ. ಅಂದರಂತೆ ಟ್ರಂಪ್ ಅಧಿಕಾರಕ್ಕೆ ಬಂದ 800 ದಿನಗಳಲ್ಲಿ 10ಸಾವಿರಕ್ಕೂ ಹೆಚ್ಚು ಬಾರಿ ತಪ್ಪು ಮಾಹಿತಿಗಳನ್ನು ನೀಡಿದ್ದಾರೆ. ಯುಎಸ್ ಮಾಧ್ಯಮ ಬಹಳ ಜಾಗೃತವಾಗಿದೆ. ಆದರೆ ಪ್ರಧಾನಿ ಮೋದಿ ಬಗ್ಗೆ ನಿಮ್ಮ ಅಭಿಪ್ರಾಯವೇನು?" ಎಂದು ಕೇಳಿದ್ದಾರೆ.