ನವದೆಹಲಿ: ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಎನ್ಟಿಪಿಸಿ ಬಾಯ್ಲರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಇಂದು ಬೆಳಗಿನ ಜಾವದಲ್ಲಿ ಸಫ್ದರ್ಜಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಆಸ್ಪತ್ರೆಯ ವೈಧ್ಯಕೀಯ ಅಧೀಕ್ಷಕ ಡಾ|| ರಾಜೇಂದ್ರ ಶರ್ಮಾ ಹೇಳಿದರು. 



COMMERCIAL BREAK
SCROLL TO CONTINUE READING

 


ಕೇಂದ್ರೀಯ ಆರೋಗ್ಯ ಮಂತ್ರಿ ನೀಡಿದ ಸೂಚನೆಗಳ ಪ್ರಕಾರ ದೆಹಲಿಯ ಏಮ್ಸ್ ಟ್ರಾಮಾ ಸೆಂಟರ್ ಮತ್ತು ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಎಲ್ಲ ಅಗತ್ಯವಾದ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಗೊಂಡವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಕರೆತರಲು 24 ನಿಮಿಷಗಳನ್ನು ತೆಗೆದುಕೊಳ್ಳಲಾಗಿದೆ. ಸುಮಾರು ಒಂಭತ್ತು ರೋಗಿಗಳನ್ನು ಇಲ್ಲಿಗೆ ಕರೆತರಲಾಗುವುದು. ಆರೋಗ್ಯ ಸಚಿವರಾದ ಅನುಪ್ರಿಯ ಪಟೇಲ್ ಇಂದು ಅಜ್ಮೀರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಮತ್ತು ಕಾಳಜಿಯನ್ನು ಒದಗಿಸಬೇಕು ಎಂದು ಸೂಚಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಾಡ ಅವರು ರಾಜ್ಯದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಹೊಂದಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.