ವೈದ್ಯಕೀಯ ಕೋರ್ಸ್‌ಗಳಲ್ಲಿ OBC ವಿದ್ಯಾರ್ಥಿಗಳಿಗೆ ಶೇ.27 ರಷ್ಟು ಮತ್ತೆ EWS ಶೇ.10 ರಷ್ಟು ಮೀಸಲಾತಿ!
ಹಿಂದುಳಿದ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮೋದಿ ಸರ್ಕಾರ ಬಿಗ್ ನ್ಯೂಸ್ ಒಂದನ್ನ ನೀಡಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ ಒಬಿಸಿ ಮತ್ತು ಆರ್ಥಿಕವಾಗಿ ದುರ್ಬಲ ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ನವದೆಹಲಿ : ಹಿಂದುಳಿದ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮೋದಿ ಸರ್ಕಾರ ಬಿಗ್ ನ್ಯೂಸ್ ಒಂದನ್ನ ನೀಡಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ ಒಬಿಸಿ ಮತ್ತು ಆರ್ಥಿಕವಾಗಿ ದುರ್ಬಲ ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸರ್ಕಾರದ ಈ ನಿರ್ಧಾರದಿಂದ ಸುಮಾರು 5550 ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ.
ಸರ್ಕಾರದ ನಿರ್ಧಾರದ ಪ್ರಕಾರ, ಈಗ ಇತರ ಹಿಂದುಳಿದ ವರ್ಗಗಳ (OBC) ಶೇ.27 ರಷ್ಟು ವಿದ್ಯಾರ್ಥಿಗಳು ಎಂಬಿಬಿಎಸ್ ಮತ್ತು ಬಿಡಿಎಸ್ ಪದವಿ ಕೋರ್ಸ್‌ಗಳು, ಸ್ನಾತಕೋತ್ತರ ಕೋರ್ಸ್‌ಗಳು ಮತ್ತು ಡಿಪ್ಲೊಮಾ ವೈದ್ಯಕೀಯ ಕೋರ್ಸ್‌ಗಳಲ್ಲಿ ಮತ್ತು ಆರ್ಥಿಕವಾಗಿ ದುರ್ಬಲ ಸಾಮಾನ್ಯ ವರ್ಗದ (EWS) ವಿದ್ಯಾರ್ಥಿಗಳಿಗೆ ಶೇ.10 ರಷ್ಟು ಮೀಸಲಾತಿ ಪಡೆಯಲಿದ್ದಾರೆ.
ಇದನ್ನೂ ಓದಿ : Viral Video: ಆಟೋ ಗುದ್ದಿಸಿ ನ್ಯಾಯಾಧೀಶರ ಹತ್ಯೆ, ಉನ್ನತಮಟ್ಟದ ತನಿಖೆ ಆದೇಶ
ಆರೋಗ್ಯ ಸಚಿವಾಲಯದ ಪ್ರಕಾರ, ಈ ನಿರ್ಧಾರದಿಂದ ಪ್ರತಿವರ್ಷ ಎಂಬಿಬಿಎಸ್(MBBS) ಕೋರ್ಸ್‌ನಲ್ಲಿ ಸುಮಾರು 1500 ಒಬಿಸಿ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವಿಯಲ್ಲಿ 2500 ಒಬಿಸಿ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ಪಡೆಯಲಿದ್ದಾರೆ. ಅಂತೆಯೇ, ಎಂಬಿಬಿಎಸ್‌ನಲ್ಲಿ ಸುಮಾರು 550 ಇಡಬ್ಲ್ಯೂಎಸ್ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ಪಡೆದ 1000 ವಿದ್ಯಾರ್ಥಿಗಳು ಪ್ರಯೋಜನ ಪಡೆಯಬಹುದು.
ಇದನ್ನೂ ಓದಿ : Chhota Rajan : ಆಸ್ಪತ್ರೆಗೆ ದಾಖಲಾದ ಭೂಗತ ಪಾತಕಿ ಛೋಟಾ ರಾಜನ್..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ