ನವದೆಹಲಿ: ಬಿಜೆಪಿ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರ ನಾಯಕರ ವಿರುದ್ಧ ಅವಹೇಳನಕಾರಿ ವಿಷಯವನ್ನು ಪೋಸ್ಟ್ ಮಾಡಿದ ಬಗ್ಗೆ ಪುಣೆ ನಗರ ಪೊಲೀಸರು ಕನಿಷ್ಠ 54 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ- Corona Vaccine Good news : 2-18 ವರ್ಷದೊಳಗಿನವರಿಗೆ Covaxin ಟ್ರಯಲ್ ಗೆ ಶಿಫಾರಸು
ಈ ಪ್ರಕರಣದಲ್ಲಿ ಮೇ 10 ರಂದು ಪುಣೆ ನಗರ ಪೊಲೀಸರ ಸೈಬರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿಯ ಯುವ ವಿಭಾಗದ ರಾಜ್ಯ ಕಾರ್ಯದರ್ಶಿ ವಕೀಲ ಪ್ರದೀಪ್ ಗವಾಡೆ ದೂರು ದಾಖಲಿಸಿದ್ದಾರೆ.ಸೈಬರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ದಗಾಡು ಹಕ್, "ಬಿಜೆಪಿ ಪದಾಧಿಕಾರಿ ವಿನೀತ್ ಬಾಜಪೇಯಿ ಅವರು ಈ ಹಿಂದೆ ಸಲ್ಲಿಸಿದ ಎಫ್‌ಐಆರ್‌ನಲ್ಲಿ 54 ಜನರನ್ನು ಆರೋಪಿಗಳೆಂದು ಹೆಸರಿಸುತ್ತೇವೆ" ಎಂದು ಹೇಳಿದರು.
ಕೆಲವು ದಿನಗಳ ಮೊದಲು, ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಫಡ್ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಾಜಪೇಯಿ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಎನ್‌ಸಿಪಿಯ ಯುವ ವಿಭಾಗದ ನಾಯಕರಾದ ಮೊಹ್ಸಿನ್ ಶೇಖ್ ಮತ್ತು ಶಿವಾಜಿರಾವ್ ಜಾವೀರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಇದನ್ನೂ ಓದಿ- ಇದುವರೆಗೆ 44 ದೇಶಗಳಿಗೆ ತಲುಪಿದ Corona ಭಾರತೀಯ ರೂಪಾಂತರಿ, WHO ಹೇಳಿದ್ದೇನು ?
ಇದಕ್ಕೂ ಮುನ್ನ, ಮೇ 4 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಗ್ಗೆ ಫೇಸ್‌ಬುಕ್, ಟ್ವಿಟರ್ ಮತ್ತು ವಾಟ್ಸಾಪ್‌ನಲ್ಲಿ ಮಾನಹಾನಿಕರ ಮತ್ತು ಆಕ್ಷೇಪಾರ್ಹ ಪೋಸ್ಟ್‌ಗಳು ಮತ್ತು ಸಂದೇಶಗಳ ಆರೋಪದ ಮೇಲೆ 13 ಜನರ ವಿರುದ್ಧ (ಎಫ್‌ಐಆರ್) ದಾಖಲಿಸಲಾಗಿತ್ತು.
ಇದನ್ನೂ ಓದಿ- COVID-19: 14 ದಿನಗಳ Quarantine ನಂತರ ಆರ್‌ಟಿ-ಪಿಸಿಆರ್ ಟೆಸ್ಟ್ ಏಕೆ ಅಗತ್ಯವಿಲ್ಲ?
ಪಿಎಂ ಮೋದಿ, ಫಡ್ನವೀಸ್, ಅವರ ಪತ್ನಿ ಅಮೃತಾ ಫಡ್ನವಿಸ್, ಕೇಂದ್ರ ಸಚಿವ ಸ್ಮೃತಿ ಇರಾನಿ ಮತ್ತು ಬಿಜೆಪಿಯ ರಾಜ್ಯ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರ ಬಗ್ಗೆ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಗಾವ್ಡೆ 54 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.