ಒಡಿಶಾ ರೈಲ್ವೆ ದುರಂತ: ಉನ್ನತ ಮಟ್ಟದ ತನಿಖೆಗೆ ರೈಲ್ವೆ ಸಚಿವರ ಆದೇಶ

ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳು ಡಿಕ್ಕಿಯಾದ ನಂತರ ಈಗ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆಯತ್ತ ಗಮನ ಹರಿಸಲಾಗಿದೆ ಎಂದು ಹೇಳಿದರು.

Written by - Manjunath N | Last Updated : Jun 3, 2023, 06:07 PM IST
  • ಪ್ರಸ್ತುತ, ಎನ್ಡಿಆರ್ ಎಫ್ ಮತ್ತು ಸ್ಥಳೀಯ ಆಡಳಿತ ನಡೆಸುತ್ತಿರುವ ಸಂಯೋಜಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಪ್ರಸ್ತುತ ನಡೆಯುತ್ತಿದೆ
  • ಇಲ್ಲಿಯವರೆಗೆ, ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ ನಂತರ 233 ಜನರು ಸಾವನ್ನಪ್ಪಿದ್ದರೆ, 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ
ಒಡಿಶಾ ರೈಲ್ವೆ ದುರಂತ: ಉನ್ನತ ಮಟ್ಟದ ತನಿಖೆಗೆ ರೈಲ್ವೆ ಸಚಿವರ ಆದೇಶ  title=

ನವದೆಹಲಿ: ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳು ಡಿಕ್ಕಿಯಾದ ನಂತರ ಈಗ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಪಘಾತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆಯತ್ತ ಗಮನ ಹರಿಸಲಾಗಿದೆ ಎಂದು ಹೇಳಿದರು.

"ಇದೊಂದು ದೊಡ್ಡ ದುರಂತ, ರೈಲ್ವೆ, ಎನ್‌ಡಿಆರ್‌ಎಫ್,ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.ಅತ್ಯುತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು.ನಿನ್ನೆ ಪರಿಹಾರವನ್ನು ಘೋಷಿಸಲಾಗಿದೆ.ಈಗ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುವುದು ನಮ್ಮ ಆದ್ಯತೆಯಾಗಿದೆ.ಜಿಲ್ಲಾಡಳಿತದ ಅನುಮೋದನೆಯ ನಂತರ ಮರುಸ್ಥಾಪನೆ ಪ್ರಾರಂಭವಾಗುತ್ತದೆ.ವಿವರವಾದ ಉನ್ನತ ಮಟ್ಟದ ತನಿಖೆಯನ್ನು ಕೈಗೊಳ್ಳಲಾಗುವುದು, ಹಾಗೆಯೇ ರೈಲು ಸುರಕ್ಷತಾ ಆಯುಕ್ತರಿಂದ ಸ್ವತಂತ್ರ ತನಿಖೆ ನಡೆಸಲಾಗುವುದು.ರೈಲ್ವೆ ಸುರಕ್ಷತಾ ಆಯುಕ್ತರು ವರದಿ ಸಲ್ಲಿಸಿದ ನಂತರ ಅಪಘಾತಕ್ಕೆ ಕಾರಣ ತಿಳಿಯಲಿದೆ ಎಂದು ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ: ಬಾಲಸೋರ್‌ನ ಬಹನಾಗ ನಿಲ್ದಾಣದ ಬಳಿ 3 ರೈಲು ಡಿಕ್ಕಿ

ಪ್ರಸ್ತುತ, ಎನ್ಡಿಆರ್ ಎಫ್ ಮತ್ತು ಸ್ಥಳೀಯ ಆಡಳಿತ ನಡೆಸುತ್ತಿರುವ ಸಂಯೋಜಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಪ್ರಸ್ತುತ ನಡೆಯುತ್ತಿದೆ. ಇಲ್ಲಿಯವರೆಗೆ, ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ ನಂತರ 233 ಜನರು ಸಾವನ್ನಪ್ಪಿದ್ದರೆ, 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಭುವನೇಶ್ವರದ ಅಧಿಕಾರಿಗಳು 200 ಆಂಬ್ಯುಲೆನ್ಸ್‌ಗಳು, 50 ಬಸ್‌ಗಳು ಮತ್ತು 45 ಮೊಬೈಲ್ ಆರೋಗ್ಯ ಘಟಕಗಳು ಹಾಗೂ ಜೊತೆಗೆ 1,200 ಸಿಬ್ಬಂದಿಗಳು ಅಪಘಾತ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಎಎನ್ ಐ ವರದಿಯ ಪ್ರಕಾರ ಪ್ರಸ್ತುತ ರಕ್ಷಣಾ ತಂಡಗಳು ಬಾಲಸೋರ್‌ನಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ನಂತರ ಹೆಚ್ಚು ಹಾನಿಗೊಳಗಾದ ಏಕೈಕ ಬೋಗಿಯನ್ನು ಕತ್ತರಿಸುವ ಕೆಲಸ ಮಾಡುತ್ತಿವೆ.ಗಾಯಗೊಂಡವರನ್ನು ಬಾಲಸೋರ್,ಮಯೂರ್‌ಭಂಜ್, ಭದ್ರಕ್, ಜಾಜ್‌ಪುರ ಮತ್ತು ಕಟಕ್ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಗೃಹಲಕ್ಷ್ಮಿಯೋಜನೆಗೆ ದಾಖಲಾತಿ ಕಡ್ಡಾಯ ಸಿಎಂ ಸಿದ್ದರಾಮಯ್ಯ

ಏತನ್ಮಧ್ಯೆ, ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾಗೆ ತಮ್ಮ ಭೇಟಿಯನ್ನು ಮೊಟಕುಗೊಳಿಸಿ ಒಡಿಶಾದ ಬಾಲಸೋರ್‌ಗೆ ತೆರಳಿದರು.ರೈಲು ದುರಂತದ ನಂತರ ಒಡಿಶಾ ಸರ್ಕಾರ ಶನಿವಾರದಂದು ಶೋಕಾಚರಣೆಯನ್ನು ಘೋಷಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News